ಶಿರಾ ಪಟ್ಟನಾಯಕನಹಳ್ಳಿ ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ, ಸ್ಪಟಿಕಪುರಿ ಮಹಾ ಸಂಸ್ಥಾನ ಮಠದ ಶಾಖಾ ಮಠಕ್ಕೆ ಜಲಸಂಪನ್ಮೂಲ ಸಚಿವ ಎನ್​.ಚೆಲುವರಾಯಸ್ವಾಮಿ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು. ಮುಖಂಡ ಅಂಜನ ಮೂರ್ತಿ, ರಾಜ್ಯ ಶ್ರೀಗಂಧ ಬೆಳೆಗಾರರ ಮುಖಂಡ ಶಿವಕುಮಾರ್​, ಮರಿಯಪ್ಪ ರಾಧಾಕೃಷ್ಣ, ಸಿದ್ದರಾಜು ಇತರರು ಇದ್ದರು. 
ರಾಜ್ಯ

ಕಾವೇರಿ ವಿಷಯದಲ್ಲಿ ರಾಜಕೀಯ ಬೇಡ Cheluvarayaswamy

ಶಿರಾ:

ತಾಲೂಕಿನ ಪಟ್ಟನಾಯಕನಹಳ್ಳಿಯ ಶ್ರೀ ಗುರುಗುಂಡ ಬ್ರಹ್ಮೇಶ್ವರಸ್ವಾಮಿ ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಶಾಖಾ ಮಠಕ್ಕೆ ಗುರುವಾರ ಜಲಸಂಪನ್ಮೂಲ ಸಚಿವ ಎನ್​.ಚೆಲುವರಾಯಸ್ವಾಮಿ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು.

ಬೆಂಗಳೂರು ನಗರದ ಸುಮಾರು 1.5 ಕೋಟಿ ಜನರ ಕುಡಿಯುವ ನೀರಿಗಾಗಿ ಕಾವೇರಿಯನ್ನೇ ನಂಬಿದ್ದಾರೆ. ಹೀಗಾಗಿ ಕಾವೇರಿ ನೀರು ಹಂಚಿಕೆ ವಿಷಯದಲ್ಲಿ ಸರ್ಕಾರ ಯಾವುದೇ ರಾಜಕೀಯಕ್ಕೆ ಒಳಗಾಗದೆ, ರೈತರು ಹಾಗೂ ಜನಸಾಮಾನ್ಯರ ಹಿತ ಕಾಯುವುದು ಸರ್ಕಾರದ ಕರ್ತವ್ಯ ಎಂದು ಸ್ಪಟಿಕಪುರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಂಜಾವಧೂತ ಸ್ವಾಮೀಜಿ ಹೇಳಿದರು.
ಜಲಸಂಪನ್ಮೂಲ ಸಚಿವ ಎನ್​. ಚೆಲುವರಾಯಸ್ವಾಮಿ ಮಾತನಾಡಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಮೇಕೆದಾಟು ಯೋಜನೆಯು ಸುಮಾರು 200 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯ ಹೊಂದಿದೆ. ಈ ಅಣೆಕಟ್ಟು ನಿಮಾರ್ಣಕ್ಕೆ ಇದ್ದ ಕಾನೂನು ಹಾಗೂ ತಾಂತ್ರಿಕ ಅಡೆತಡೆಗಳು ನಿವಾರಣೆಯಾಗಿದ್ದು, ಮುಂದಿನ 6 ತಿಂಗಳಲ್ಲಿ ಯೋಜನೆಯ ಅನುಷ್ಠಾನದ ರೂಪುರೇಷೆಗಳು ಸಿದ್ಧವಾಗಲಿವೆ ಎಂದು ತಿಳಿಸಿದರು.
ಅಲ್ಲದೆ, ಎತ್ತಿನಹೊಳೆ ಯೋಜನೆ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಇನ್ನು ಮೂರ್ನಾಲ್ಕು ತಿಂಗಳಲ್ಲಿ ಪ್ರಾಯೋಗಿಕವಾಗಿ ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ/ದಕ್ಷಿಣ ಜಿಲ್ಲೆಗಳಿಗೆ ನೀರು ಹರಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ಅಂತೆಯೇ ಮಧ್ಯ ಕರ್ನಾಟಕದ ಜಲನಿಧಿಯಾದ "ಅಪ್ಪರ್​ ಭದ್ರಾ' (ಮೇಲ್ದಂಡೆ ಭದ್ರಾ) ಯೋಜನೆಗೆ ಕೇಂದ್ರ ಸರ್ಕಾರದಿಂದ 4 ಸಾವಿರ ಕೋಟಿ ರೂ. ಅನುದಾನ ಬಿಡುಗಡೆಯಾಗುವ ಭರವಸೆ ಸಿಕ್ಕಿದ್ದು, ಹಣ ಬಿಡುಗಡೆಯಾದ ತಕ್ಷಣ ಕಾಮಗಾರಿ ಪುನರಾರಂಭಗೊಳ್ಳಲಿದೆ ಎಂದರು. ರಾಜ್ಯದ ನೆಲ, ಜಲ ಹಾಗೂ ಭಾಷೆಯ ವಿಷಯದಲ್ಲಿ ಸರ್ಕಾರ ಯಾವುದೇ ರೀತಿಯ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಮುಖಂಡರಾದ ಅಂಜನಮೂರ್ತಿ, ರಾಜ್ಯ ಶ್ರೀಗಂಧ ಬೆಳೆಗಾರರ ಸಂಘದ ಮುಖಂಡ ಶಿವಕುಮಾರ್​, ಮುಖಂಡರಾದ ಮರಿಯಪ್ಪ, ರಾಧಾಕೃಷ್ಣ, ಸಿದ್ಧರಾಜು ಇದ್ದರು.