ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

"ನನ್ನ ಮೇಲೆ ಯಾವುದೇ ಸ್ಟಿಂಗ್ ನಡೆದಿಲ್ಲ, ಇದೆಲ್ಲ ಬ್ಲ್ಯಾಕ್‌ಮೇಲ್ ತಂತ್ರ!": ಸ್ಟಿಂಗ್ ಆಪರೇಷನ್ ವಿವಾದಕ್ಕೆ ಸಿದ್ದರಾಮಯ್ಯ ತಿರುಗೇಟು! Siddaramaiah

ತಮ್ಮ ವಿರುದ್ಧ ಯಾವುದೇ ಸ್ಟಿಂಗ್ ನಡೆದಿಲ್ಲ, ಇದೆಲ್ಲ ಬ್ಲ್ಯಾಕ್‌ಮೇಲ್ ಮಾಡುವ ಷಡ್ಯಂತ್ರ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದು, ಈ ಸಂಬಂಧ ಸ್ವತಃ ಪೊಲೀಸರಿಗೆ ದೂರು ನೀಡಿದ್ದಾಗಿ ತಿಳಿಸಿದ್ದಾರೆ.

ಮೈಸೂರು: ರಾಜ್ಯ ರಾಜಕಾರಣದಲ್ಲಿ ಸದ್ಯ ಸ್ಟಿಂಗ್ ಆಪರೇಷನ್​ ಸದ್ದು ಜೋರಾಗಿದ್ದು, ತಮ್ಮ ಮೇಲೆ ಕೇಳಿಬರುತ್ತಿದ್ದ ಆರೋಪಗಳಿಗೆ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ, ತಮ್ಮ ಮೇಲೆ ಯಾವುದೇ ಸ್ಟಿಂಗ್​ ನಡೆದಿಲ್ಲ, ಈ ಸ್ಟಿಂಗ್ ಆಪರೇಷನ್ ಒಂದು ಸುಳ್ಳು ಸುದ್ದಿಯಾಗಿದೆ ಎಂದಿದ್ದಾರೆ.

ಈ ವಿಚಾರ ನನಗೆ ಮೊದಲೇ ತಿಳಿದಿತ್ತು!

ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ, ನನಗೆ ಈ ಸ್ಟಿಂಗ್ ಆಪರೇಷನ್ ಬಗ್ಗೆ ಸಪ್ಟೆಂಬರ್​ನಲ್ಲಿಯೇ ಗೊತ್ತಾಗಿತ್ತು. ಆದರೆ ಇದೊಂದು ಸುಳ್ಳು ಸುದ್ದಿಯಾಗಿದ್ದು, ಇದನ್ನು ಬ್ಲಾಕ್ ಮೇಲ್ ಮಾಡಲು ಈ ರೀತಿ ಮಾಡಿದ್ದಾರೆ. ಹೀಗಾಗಿ ನಾನು ಪೊಲೀಸರಲ್ಲಿ ದೂರನ್ನು ನೀಡಿದ್ದೇನೆ.

ಸುಳ್ಳು ಸುದ್ದಿಯನ್ನೇ ಸತ್ಯವೆಂಬಂತೆ ಬಿಂಬಿಸಲು ಹೊರಟಿರುವ ಕಾರಣ ನಾನು ಪೊಲೀಸರ ಮೊರೆ ಹೋಗಿದ್ದೇನೆ. ರಾಜ್ಯದ ಜನರಿಗೆ ಯಾವುದು ಸತ್ಯ? ಯಾವುದು ಸುಳ್ಳೆಂದು ತಿಳಿಯಲೆಂದೆ ಸ್ವತಃ ನಾನೇ ಪೊಲೀಸರಿಗೆ ದೂರು ನೀಡಿದ್ದೇನೆಂದು ಸಿದ್ದರಾಮಯ್ಯ ಹೇಳಿದ್ದಾರೆ.

8 ವರ್ಷ ಸಿಎಂ ಆಗಿದ್ದೆ; ಕಪ್ಪು ಚುಕ್ಕೆ ಇಲ್ಲ!

ನಾನು ರಾಜ್ಯದಲ್ಲಿ 8 ವರ್ಷಗಳ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದೇನೆ. ಕಳೆದ 40 ವರ್ಷಗಳಿಂದ ಸಾರ್ವಜನಿಕ ಬದುಕಿನಲ್ಲಿದ್ದೇನೆ. ಇಲ್ಲಿವರೆಗೆ ನನ್ನ ಚಾರಿತ್ಯದ ಬಗ್ಗೆ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ. ಈಗ ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ.ನನ್ನ ವೈಯುಕ್ತಿಕ ತೇಜೋವಧೆಗಾಗಿ ಈ ರೀತಿ ಮಾಡುತ್ತಿದ್ದಾರೆ. ಆದರೆ, ರೀತಿ ಪಿತೂರಿ ಮಾಡಿರುವವ ಉದ್ದೇಶ ಫಲಪ್ರದ ಆಗೋದಿಲ್ಲ ಎಂದು ಮಾಜಿ ಸಿಎಂ ಕಿಡಿಕಾರಿದ್ದಾರೆ.

ನನ್ನ ಪರವಾಗಿ ಯಾರು ನಿಲ್ಲಬೇಕಿಲ್ಲ!

ನಾನು ಯಾವುದೇ ತಪ್ಪು ಮಾಡಿಲ್ಲ. ಹೀಗಾಗಿ ಈ ವಿಚಾರದಲ್ಲಿ ಬೇಸರಿಸಿಕೊಳ್ಳುವ ಪ್ರಮೇಯವಿಲ್ಲ. ಈ ವಿಚಾರದಲ್ಲಿ ನನಗೆ ಯಾರ ಬೆಂಬಲದ ಅಗತ್ಯವೂ ಇಲ್ಲ. ಯಾವ ನಾಯಕರು ನನ್ನ ಪರ ವಹಿಸುವ ಅಗತ್ಯವಿಲ್ಲ. ಪೊಲೀಸರ ತನಿಖೆಯಿಂದ ಸತ್ಯ ಬಯಲಾಗಬೇಕಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ನನಗೆ ನನ್ನ ರಾಜ್ಯ ಪೊಲೀಸರ ಮೇಲೆ ನಂಬಿಕೆ ಇದೆ. ಈ ಪ್ರಕರಣದಲ್ಲಿ ಎಸ್​ಐಟಿ ಅಥವಾ ಉನ್ನತ ಮಟ್ಟದ ತನಿಖೆ ಅಗತ್ಯವು ಇಲ್ಲ. ಯಾರು ತಪ್ಪು ಮಾಡಿದ್ದಾರೆಂದು ರಾಜ್ಯ ಪೊಲೀಸರೇ ಪತ್ತೆ ಮಾಡುತ್ತಾರೆಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಸ್ಟಿಂಗ್​ ಹಿಂದೆ ನಮ್ಮ ಪಕ್ಷದವರೇ ಇದ್ದಾರೆ!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ತೇಜೋವಧೆ, ಘನತೆಗೆ ಧಕ್ಕೆ ತರುವ ಉದ್ಧೇಶದಿಂದಲೇ ಈ ಸ್ಟಿಂಗ್ ಆಪರೇಷನ್ ನಡೆಸಲಾಗಿದೆ ಎಂದು ಅವರ ಪುತ್ರ ಹಾಗೂ ನಗರಾಭಿವೃದ್ದಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಕೃತ್ಯದ ಹಿಂದೆ ತಮ್ಮದೇ ಕಾಂಗ್ರೆಸ್ ಪಕ್ಷದ ಮಹಿಳೆ ಹಾಗೂ ಮಾಧ್ಯಮ ಸಂಸ್ಥೆಯ ಮುಖ್ಯಸ್ಥರೊಬ್ಬರ ಕೈವಾಡವಿರುವ ಬಗ್ಗೆ ಯತೀಂದ್ರ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಯತೀಂದ್ರ, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಇಬ್ಬರನ್ನು ವಶಕ್ಕೆ ಪಡೆದಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೂಡ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರಿಗೆ ನಿಷ್ಪಕ್ಷಪಾತ ಹಾಗೂ ಪಾರದರ್ಶಕ ತನಿಖೆ ನಡೆಸಲು ನಿರ್ದೇಶನ ನೀಡಿದ್ದಾರೆ. ರಾಜ್ಯ ಪೊಲೀಸ್ ವ್ಯವಸ್ಥೆಯ ಮೇಲೆ ತಮಗೆ ಸಂಪೂರ್ಣ ಭರವಸೆಯಿದೆ ಎಂದಿದ್ದಾರೆ.