ಬೆಂಗಳೂರು: ಅಗ್ನಿಶಾಮಕ ಇಲಾಖೆ ಸೇರಿ ವಿವಿಧ ಇಲಾಖೆಗಳಲ್ಲಿನ 1,531 ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಅಧಿಸೂಚನೆ ಹೊರಡಿಸಿದೆ.
ಒಟ್ಟು ಹುದ್ದೆಗಳ ಪೈಕಿ ಉಳಿಕೆ ಮೂಲ ವೃಂದದ 1,311 ಹಾಗೂ ಕಲ್ಯಾಣ ಕರ್ನಾಟಕ ವೃಂದದ 220 ಹುದ್ದೆಗಳು ಒಳಗೊಂಡಿದ್ದು, ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವ್ಯಾಪ್ತಿಯ 171 ಮಹಿಳಾ ಮೇಲ್ವಿಚಾರಕಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ 35 ಕೈಗಾರಿಕಾ ವಿಸ್ತರಣಾಧಿಕಾರಿ, ಸರ್ಕಾರಿ ಅಭಿಯೋಜಕರು ಕಂ ಸಹಾಯಕ ಸರ್ಕಾರಿ ವಕೀಲರ 320 ಹುದ್ದೆ, ರೇಷ್ಮೆ ನಿರೀಕ್ಷಕರು 34, ವಾರುಕಟ್ಟೆ ಮೇಲ್ವಿಚಾರಕರು 4, ಜವಳಿ ನಿರೀಕ್ಷಕರು 27, ಅರಣ್ಯ ರಕ್ಷಕರು 450, ಅಗ್ನಿಶಾಮಕ ಅಧಿಕಾರಿ 20, ಅಗ್ನಿಶಾಮಕ ಸಿಬ್ಬಂದಿಯ 470 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ತಿಳಿಸಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಇರುವುದಿಲ್ಲ. ಬದಲಿಗೆ 10ನೇ ತರಗತಿಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನೇಮಕಾತಿಗೆ ಅರ್ಹತೆ ಪಡೆಯಲಿದ್ದಾರೆ. ಈ ಎಲ್ಲ್ಲ ಹುದ್ದೆಗಳಿಗೂ ಫೆಬ್ರವರಿ, ವಾರ್ಚ್ನಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಪೂರ್ಣ ವಾಹಿತಿಗೆ ಪ್ರತಿ ಇಲಾಖೆಗಳ ಅಧಿಸೂಚನೆಗಳನ್ನು ಪ್ರತ್ಯೇಕವಾಗಿಯೇ ವೀಕ್ಷಿಸಿ, ನಂತರ ಅರ್ಜಿಗಳನ್ನು ಸಲ್ಲಿಸಬೇಕು ಎಂದು ಸಲಹೆ ನೀಡಿದ್ದಾರೆ.