ಬೆಂಗಳೂರು: ಕರ್ನಾಟಕ ಸರ್ಕಾರದಲ್ಲಿ ಪ್ರತ್ಯೇಕ ಅನಿವಾಸಿ ಭಾರತೀಯ (ಎನ್‌ಆರ್‌ಐ) ಸಚಿವಾಲಯ ಸ್ಥಾಪಿಸಬೇಕೆಂಬ ಬೇಡಿಕೆ ಪ್ರಮುಖ ಟ್ರೆಂಡ್ ಆಗಿದೆ. ಬೇರೆ ಬೇರೆ ದೇಶಗಳಲ್ಲಿ ನೆಲೆಸಿರುವ ಕನ್ನಡಿಗರ ಸಮಸ್ಯೆಗಳಿಗೆ ಸ್ಪಂದಿಸಲು ಮತ್ತು ಸಾಂಸ್ಕೃತಿಕ ಬಾಂಧವ್ಯ ಹೆಚ್ಚಿಸಲು ಎನ್‌ಆರ್‌ಐ ಸಚಿವಾಲಯ ಸ್ಥಾಪನೆ ಮಾಡಬೇಕೆಂದು ಸರ್ಕಾರದ ಮೇಲೆ ಒತ್ತಡ ಹೆಚ್ಚಾಗಿದೆ.
ಕಾಂಗ್ರೆಸ್ ಚುನಾವಣೆಗೂ ಮೊದಲು ತನ್ನ ಪ್ರಣಾಳಿಕೆಯಲ್ಲಿ ಎನ್‌ಆರ್‌ಐ ಸಚಿವಾಲಯ ಸ್ಥಾಪನೆ ಮಾಡುವುದಾಗಿ ಭರವಸೆ ನೀಡಿತ್ತು. ಆದರೆ, ಮೂರು ವರ್ಷಗಳ ಕಾಲ ಯಾವುದೇ ಬೆಳವಣಿಗೆ ಆಗಿರಲಿಲ್ಲ. ಇದೀಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಅಧಿಕಾರಕ್ಕೆ ಬಂದ ಕೂಡಲೇ ಎನ್‌ಆರ್‌ಐ ಸಚಿವಾಲಯ ಸ್ಥಾಪನೆ ಮಾಡುವುದಾಗಿ ಭರವಸೆ ನೀಡಿದರು. ಆದರಿಂದ ಇದೀಗ ರಾಜ್ಯದಲ್ಲಿ ಪ್ರತ್ಯೇಕ ಎನ್‌ಆರ್‌ಐ ಸಚಿವಾಲಯ ಶೀಘ್ರವೇ ಕಾರ್ಯರೂಪಕ್ಕೆ ತರಬೇಕು. ಅದಕ್ಕೆ ಪ್ರತ್ಯೇಕ ಸಚಿವರನ್ನು ನೇಮಕ ಮಾಡಬೇಕೆಂದು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ನಡೆಸಿದಾಗ ಎಕ್ಸ್‌ನಲ್ಲಿ ಟ್ರೆಂಡ್ ಆಗಿದೆ ಎಂದು ಡಾ. ಅಬ್ದುಲ್ ಶಕೀಲ್ ಹೇಳಿದ್ದಾರೆ.
ಕರ್ನಾಟಕದಲ್ಲಿ ಪ್ರಕೃತಿ ವಿಕೋಪ ಎದುರಾಗಾದ ಎನ್‌ಆರ್‌ಐಗಳು ಸ್ಪಂದಿಸುತ್ತಾರೆ. ಆದರೆ, ವಿದೇಶದಲ್ಲಿ ಇರುವ ಕನ್ನಡಿಗರ ಪರವಾಗಿ ಯಾರು ಧ್ವನಿಗೂಡಿಸುತ್ತಿಲ್ಲ. ಈ ಕೂಡಲೇ ಎನ್‌ಆರ್‌ಐ ಸಚಿವಾಲಯ ಸ್ಥಾಪನೆ ಮಾಡಿ ವಿಧಾನ ಪರಿಷತ್ತಿನ ಸದಸ್ಯೆ ಆರತಿಕೃಷ್ಣ ಅವರಿಗೆ ಜವಾಬ್ದಾರಿ ನೀಡುವಂತೆ ಸಾಮಾಜಿಕ ಜಾಲತಾಣದಲ್ಲಿ ಕೂಗು ಕೇಳಿಬಂದಿದೆ.