ಕನ್ನಡ ಸಾಹಿತ್ಯ ಪರಿಷತ್ 
ರಾಜ್ಯ

ನೃಪತುಂಗ ಸಾಹಿತ್ಯ ಪ್ರಶಸ್ತಿ ಪ್ರಕಟ

ಪ್ರಮುಖ ಮುಖ್ಯಾಂಶಗಳು

  • * ಪ್ರಶಸ್ತಿಯು ತಲಾ 7 ಲಕ್ಷ ರೂ. ನಗದು, ಲಕ ಹಾಗೂ ಪ್ರಮಾಣ ಪತ್ರ ಒಳಗೊಂಡಿದೆ.
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ನೀಡುವ ‘ನೃಪತುಂಗ ಸಾಹಿತ್ಯ ಪ್ರಶಸ್ತಿ’ ಪ್ರಕಟಗೊಂಡಿದ್ದು, ಸಾಹಿತಿಗಳಾದ ಎಸ್.ಜಿ.ಸಿದ್ಧರಾಮಯ್ಯ, ಮೂಡ್ನಾಕೂಡು ಚಿನ್ನಸ್ವಾಮಿ ಹಾಗೂ ಸರಜೂ ಕಾಟ್ಕರ್ ಆಯ್ಕೆಯಾಗಿದ್ದಾರೆ.
2023, 2024 ಮತ್ತು 2025ನೇ ಸಾಲಿಗೆ ಈ ಆಯ್ಕೆಗಳನ್ನು ಮಾಡಲಾಗಿದೆ. ಪ್ರಶಸ್ತಿಯು ತಲಾ 7 ಲಕ್ಷ ರೂ. ನಗದು, ಲಕ ಹಾಗೂ ಪ್ರಮಾಣ ಪತ್ರ ಒಳಗೊಂಡಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಒಂದೂವರೆ ಕೋಟಿ ರೂಪಾಯಿ ದತ್ತಿನಿಧಿ ಸ್ಥಾಪಿಸಿದ್ದು, ಅದರಿಂದ ಬರುವ ಬಡ್ಡಿ ಹಣದಲ್ಲಿ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಮೌಲಿಕವಾದ ಕೊಡುಗೆ ನೀಡಿದ ಲೇಖಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತಿದೆ.
ಪರಿಷತ್ತಿನ ಆಡಳಿತಾಧಿಕಾರಿ ಕೆ.ಎ. ದಯಾನಂದ ಅವರ ನೇತೃತ್ವದ ಸಮಿತಿ ಆಯ್ಕೆ ಮಾಡಿದೆ ಎಂದು ಪರಿಷತ್ ತಿಳಿಸಿದೆ.