ವಿಜಯವಾಣಿ ಸುದ್ದಿಜಾಲ ಕೊರಟಗೆರೆ
ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ಕೆ ಮಂಗಳವಾರ ಅಧಿಕೃತ ಚಾಲನೆ ದೊರೆಯಿತು.
ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ 6 ಹೋಬಳಿ, 386 ಗ್ರಾಮ, 240 ಮತಗಟ್ಟೆಗಳು ಹಾಗೂ ಒಟ್ಟು 2,09,945 ಮತದಾರರು ಇದ್ದಾರೆ. ಪ್ರತಿ ಮತಗಟ್ಟೆಗೆ ಒಬ್ಬರಂತೆ 240 ಬೂತ್ ಮಟ್ಟದ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ಅಭಿಯಾನದ ಪ್ರಯುಕ್ತ ಬೂತ್ ಮಟ್ಟದ ಅಧಿಕಾರಿಗಳು, ತಾಲೂಕು ಹಾಗೂ ಹೋಬಳಿ ನೋಡಲ್ ಅಧಿಕಾರಿಗಳೊಂದಿಗೆ ಮನೆ-ಮನೆಗೆ ಭೇಟಿ ನೀಡಿ ಮತದಾರರ ಹೆಸರು, ವಿಳಾಸ, ಫೋಟೋ ಹಾಗೂ ಇತರ ವಿವರಗಳನ್ನು ಪರಿಶೀಲಿಸಲಿದ್ದಾರೆ.
ಈ ಅಭಿಯಾನದ ಪ್ರಗತಿಯನ್ನು ಪರಿಶೀಲಿಸಲು ತುಮಕೂರು ಜಿಲ್ಲಾ ನೋಂದಣಾಧಿಕಾರಿ ಡಿ.ಆರ್.ವಿಜಯಲಕ್ಷಿ$್ಮ , ಕೃಷಿ ಇಲಾಖೆ ಉಪನಿರ್ದೇಶಕ ಡಾ.ಚಂದ್ರಕುಮಾರ್, ಕೊರಟಗೆರೆ ತಹಸೀಲ್ದಾರ್ ಕೆ.ಮಂಜುನಾಥ್, ಪುರಸಭೆ ಮುಖ್ಯಾಧಿಕಾರಿ ಉಮೇಶ್, ಕಸಬಾ ಹೋಬಳಿ ಆರ್ಐ ಬಸವರಾಜು ಹಾಗೂ ಗ್ರಾಮ ಆಡಳಿತಾಧಿಕಾರಿ ಪವನ್ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೂತ್ಮಟ್ಟದ ಅಧಿಕಾರಿಗಳ ಕಾರ್ಯವೈಖರಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಮತದಾರರ ಪಟ್ಟಿ ಪ್ರಜಾಪ್ರಭುತ್ವದ ಭದ್ರ ಬುನಾದಿಯಾಗಿದೆ. ಒಬ್ಬ ಅರ್ಹ ಮತದಾರನೂ ಪಟ್ಟಿಯಿಂದ ಹೊರಗುಳಿಯಬಾರದು ಹಾಗೂ ಅನರ್ಹ ಅಥವಾ ನಕಲಿ ಹೆಸರು ಸೇರ್ಪಡೆಯಾಗಬಾರದು. ಈ ಅಭಿಯಾನದ ಮೂಲಕ ಶೇ.100ರಷ್ಟು ನಿಖರ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವ ಗುರಿ ಹೊಂದಿದ್ದೇವೆ. ಬಿಎಲ್ಒಗಳು ಪ್ರತಿ ಮನೆಗೂ ಭೇಟಿ ನೀಡಿ ಮಾಹಿತಿಯನ್ನು ಖಚಿತಪಡಿಸಿ ಕೊಳ್ಳಲಿದ್ದಾರೆ ಎಂದು ತಿಳಿಸಿದರು.
ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯದ ಪ್ರಗತಿಯನ್ನು ನೋಂದಣಾಧಿಕಾರಿ ವಿಜಯಲಕ್ಷಿ$್ಮ ಪರಿಶೀಲಿಸಿದರು. ಕೃಷಿ ಇಲಾಖೆ ಉಪನಿರ್ದೇಶಕ ಡಾ.ಚಂದ್ರಕುಮಾರ್, ತಹಸೀಲ್ದಾರ್ ಕೆ.ಮಂಜುನಾಥ್ ಮತ್ತಿತರರು ಇದ್ದರು.