ಹೊತ್ತಿ ಉರಿದ ಓಮ್ನಿ ಕಾರು 
ರಾಜ್ಯ

ಸಿಲಿಂಡರ್​ ಸೋರಿಕೆಯಾಗಿ ಹೊತ್ತಿ ಉರಿದ ಓಮ್ನಿ

ಧಾರವಾಡ: ಗ್ಯಾಸ್​ ಸಿಲಿಂಡರ್​ ಸೋರಿಕೆಯಾಗಿ ಓಮ್ನಿ ಕಾರು ಸಂಪೂರ್ಣ ಹೊತ್ತಿ ಉರಿದ ಘಟನೆ ಇಲ್ಲಿನ ಮಣಿಕಂಠನಗರದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ರಘು ಎಂಬಾತ ತನ್ನ ವಾಹನದಲ್ಲಿ ನಿತ್ಯ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ. ಎಂದಿನಂತೆ ಮಕ್ಕಳನ್ನು ಶಾಲೆಗೆ ಬಿಟ್ಟು ಮನೆ ಎದುರು ಓಮ್ನಿ ನಿಲ್ಲಿಸಿ ಸ್ವಚ್ಚಗೊಳಿಸುತ್ತಿದ್ದ. ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದು, ರಘುಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಅಗ್ನಿಶಾಮಕ ದಳ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್​ ಶಾಲಾ ಮಕ್ಕಳಿದ್ದ ಸಂದರ್ಭದಲ್ಲಿ ಬೆಂಕಿ ತಗುಲಿಲ್ಲ. ಈ ಕುರಿತು ಶಹರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.