ವಡಗೇರಾ ತಾಲೂಕಿನ ಹಯ್ಯಾಳ (ಬಿ) ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಭಾನುವಾರ ಹಮ್ಮಿಕೊಂಡ ವಿಶ್ವ ತಂಬಾಕು ವಿರೋಧಿ ದಿನ ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಉಮೇಶ ರೆಡ್ಡಿ ಮಾತನಾಡಿದರು. ಶ್ರೀಕಾಂತ, ಈರಮ್ಮ, ಮಂಜುಳಾ, ಮಹಾಲಿಂಗ, ಸೇವಾಪ್ರತಿನಿಧಿ ಮಹೇಶ್​ ಇತರರಿದ್ದರು. 
ರಾಜ್ಯ

ಮಹಿಳೆಯರಿಂದ ಮಾತ್ರ ದುಶ್ಚಟ ಮುಕ್ತ ಸಮಾಜ ನಿರ್ಮಾಣ ಸಾಧ್ಯ

ಪ್ರಮುಖ ಮುಖ್ಯಾಂಶಗಳು

  • ವೈದ್ಯಾಧಿಕಾರಿ ಡಾ.ಉಮೇಶರಡ್ಡಿ ಹೇಳಿಕೆ
  • ವಡಗೇರಾದಲ್ಲಿ ವಿಶ್ವ ತಂಬಾಕು ವಿರೋಧಿ ದಿನ
  • ವೈದ್ಯಾಧಿಕಾರಿ ಡಾ.ಉಮೇಶರಡ್ಡಿ ಹೇಳಿಕೆ
  • ವಡಗೇರಾದಲ್ಲಿ ವಿಶ್ವ ತಂಬಾಕು ವಿರೋಧಿ ದಿನ
ವಡಗೇರಾ: ತಾಯಿ ಮೊದಲ ಪಾಠಶಾಲೆಯಾಗಿದ್ದು, ಮಕ್ಕಳನ್ನು ದುಶ್ಚಟಗಳಿಂದ ದೂರವಿಡುವಲ್ಲಿ ಮಹಿಳೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹಯ್ಯಾಳ (ಬಿ) ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಉಮೇಶ ರೆಡ್ಡಿ ಹೇಳಿದರು.
ತಾಲೂಕಿನ ಹಯ್ಯಾಳ (ಬಿ) ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಭಾನುವಾರ ಹಮ್ಮಿಕೊಂಡ ವಿಶ್ವ ತಂಬಾಕು ವಿರೋಧಿ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಮಕ್ಕಳು ಹಾಗೂ ಯುವಕರು ದುಶ್ಚಟಗಳಿಗೆ ಒಳಗಾಗಿ ಆರೋಗ್ಯ ಹಾಳು ಮಾಡಿಕೊಳ್ಳುತ್ತಿರುವುದು ಹೆಚ್ಚಾಗುತ್ತಿದೆ. ತಂಬಾಕು ಸೇವನೆಯಿಂದ ಬಾಯಿ, ನಾಲಿಗೆ ಸೇರಿ ದೇಹದ ವಿವಿಧ ಅಂಗಗಳಿಗೆ ಕ್ಯಾನ್ಸರ್​ ಉಂಟಾಗುವ ಸಾಧ್ಯತೆ ಇದ್ದು, ಇದರಿಂದ ಹೃದಯ ಸಂಬಂಧಿ ಕಾಯಿಲೆ ಹೆಚ್ಚಾಗಲಿವೆ ಎಂದು ಎಚ್ಚರಿಸಿದರು.
ಯೋಜನೆಯ ಮೇಲ್ವಿಚಾರಕ ಶ್ರೀಕಾಂತ ಮಾತನಾಡಿ, ೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ತಾಲೂಕು ವ್ಯಾಪ್ತಿಯಲ್ಲಿ ವಿಶ್ವ ತಂಬಾಕು ವಿರೋಧಿ ದಿನ ಆಚರಿಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು.
ಶಾಲಾ&ಕಾಲೇಜು ವಿದ್ಯಾರ್ಥಿಗಳಿಗಾಗಿ ಆರೋಗ್ಯ ಸಂಕಲ್ಪ ಕಾರ್ಯಕ್ರಮಗಳು ಹಾಗೂ ಮದ್ಯವ್ಯಸನ ನಿವಾರಣಾ ಶಿಬಿರಗಳನ್ನು ನಡೆಸಲಾಗುತ್ತಿದ್ದು, ರಾಜ್ಯಾದ್ಯಂತ ಇದುವರೆಗೆ 1055ಕ್ಕೂ ಹೆಚ್ಚು ಮದ್ಯವರ್ಜನ ಶಿಬಿರಗಳನ್ನು ಆಯೋಜಿಸಿ ಲಾಂತರ ಕುಟುಂಬಗಳಿಗೆ ಆಶಾಕಿರಣವಾಗಿದೆ ಎಂದು ತಿಳಿಸಿದರು.
ಈ ವೇಳೆ ಒಕ್ಕೂಟದ ಅಧ್ಯೆ ಈರಮ್ಮ, ಸ್ಥಳಿಯ ವೈದ್ಯಕಿಯ ಸಹಾಯಕಿ ಮಂಜುಳಾ, ಕೃಷಿ ಮೇಲ್ವಿಚಾರಕ ಮಹಾಲಿಂಗ, ಸೇವಾಪ್ರತಿನಿಧಿ ಮಹೇಶ್​, ಸ್ವಸಹಾಯ ಸಂಗಳ ಸದಸ್ಯರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.