ಬೈಲಗೊಂಗಲ ತಾಪಂ ಇಒ ಸಂಜು ಜುನ್ನೂರ, ವಿಜಯಲಕ್ಷಿ$್ಮ ಅನಿಗೋಳ, ಎಚ್.ವಿಶ್ವನಾಥ, ಎಸ್.ಕಲ್ಲೂರ ಇತರರಿದ್ದರು. ಚಿಕ್ಕಬಾಗೇವಾಡಿ ಗ್ರಾಪಂಗೆ ಬಸವರಾಜ ಹೆಗ್ಗನಾಯಕ ಭೇಟಿ ನೀಡಿದರು. ಸಂಜು ಜುನ್ನೂರ, ಎಚ್.ವಿಶ್ವನಾಥ, ವಿಜಯಲಕ್ಷಿ$್ಮ ಅನಿಗೋಳ ಇತರರಿದ್ದರು.
ವಿಜಯವಾಣಿ ಸುದ್ದಿಜಾಲ ಬೆಳಗಾವಿ
ಪ್ರತಿಯೊಬ್ಬರೂ ಶೌಚಗೃಹ ಬಳಸುವ ಮೂಲಕ ಬಯಲು ಶೌಚಮುಕ್ತ ಗ್ರಾಮ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ ಹೇಳಿದರು.
ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ, ಸಂಪಗಾವಿ, ಕೆಂಗಾನೂರು ಹಾಗೂ ವಣ್ಣೂರು ಗ್ರಾಪಂ ವ್ಯಾಪ್ತಿಯಲ್ಲಿ ವಿವಿಧ ಸರ್ಕಾರಿ ಯೋಜನೆಗಳ ಅನುಷ್ಠಾನ ಕುರಿತು ಸೋಮವಾರ ಪರಿಶೀಲಿಸಿದ ಬಳಿಕ ಮಾತನಾಡಿ, ನೀರಿನ ಅಭಾವ, ಮೂಢನಂಬಿಕೆ ಹೀಗೆ ಕುಂಟು ನೆಪದಲ್ಲಿ ಬಹುತೇಕ ಜನರು ಶೌಚಗೃಹ ಬಳಕೆಗೆ ಹಿಂದೇಟು ಹಾಕುತ್ತಿರುವುದು ಸರಿಯಲ್ಲ. ಶೌಚಗೃಹ ನಿರ್ಮಾಣಕ್ಕೆ ಸರ್ಕಾರ ಸಹಾಯಧನ ಸೌಲಭ್ಯ ಕಲ್ಪಿಸಿದ್ದು, ಸದುಪಯೋಗ ಪಡಿಸಿಕೊಳ್ಳಬೇಕು ಎಂದರು. ತಾಪಂ, ಗ್ರಾಪಂ ಅಧಿಕಾರಿ, ಸಿಬ್ಬಂದಿ ಜನರಿಗೆ ಸರ್ಕಾರಿ ಸೌಲಭ್ಯ ಮುಟ್ಟಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ವಸತಿ ಸೇರಿ ವಿವಿಧ ಯೋಜನೆಗಳನ್ನು ಅರ್ಹರಿಗೆ ತಲುಪಿಸಬೇಕು ಎಂದರು.
ಗ್ರಾಮಗಳಲ್ಲಿ ಹಸಿ ಕಸ ಮತ್ತು ಒಣ ಕಸ ಪ್ರತ್ಯೇಕವಾಗಿ ವಿಂಗಡಿಸಿ ಗ್ರಾಪಂ ಕಸ ಸಂಗ್ರಹಣೆ ವಾಹನಕ್ಕೆ ನೀಡುವ ಮೂಲಕ ಪರಿಸರ ರಣೆಗೆ ಸಹಕರಿಸಬೇಕು. ವಿದ್ಯಾರ್ಥಿಗಳು ಗ್ರಂಥಾಲಯ, ಸರ್ಕಾರಿ ಶಾಲೆ, ಆರೋಗ್ಯ ಕೇಂದ್ರ ಹಾಗೂ ಪಶು ಆಸ್ಪತ್ರೆಗಳ ಸೇವೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.