Opposition to aeronautical sewerage works
ಹುಲಿಯೂರುದುರ್ಗ: ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ವ್ಯಾಪ್ತಿಯ ಹಂದಲಗೆರೆಯಲ್ಲಿ ಕೆಆರ್ಐಡಿಎಲ್ ವತಿಯಿಂದ ಸುಮಾರು 5 ಲ ರೂ. ವೆಚ್ಚದಲ್ಲಿ ಕಾಂಕ್ರೀಟ್ ಚರಂಡಿ ನಿರ್ಮಿಸಲಾಗುತ್ತಿದ್ದು, ಇದಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ.
ಗ್ರಾಮದ ಖಾಸಗಿ ಜಮೀನಿನಲ್ಲಿ ಸರ್ಕಾರಿ ಹಣ ಬಳಸಿ ಅವೈಾನಿಕ ಚರಂಡಿ ನಿರ್ಮಿಸಲಾಗುತ್ತಿದ್ದು, ಇದರಿಂದ ಉತ್ಪತ್ತಿಯಾಗುವ ಕಲುಷಿತ ನೀರು ಪಕ್ಕದ ಕೆರೆಗೆ ಸೇರಿ ಜಾನುವಾರು ಕುಡಿಯುವ ನೀರು ಕಲುಷಿತಗೊಳ್ಳುತ್ತದೆ. ಕೂಡಲೇ ಕಾಮಗಾರಿ ಸ್ಥಗಿತಗೊಳಿಸುವಂತೆ ಒತ್ತಾಯಿಸಿದ್ದಾರೆ.
ಗ್ರಾಮ ಪಂಚಾಯಿತಿ, ತಹಸೀಲ್ದಾರ್, ತಾಪಂ ಇಒ ಹಾಗೂ ಕೆಆರ್ಡಿಎಲ್ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ವಿರೋಧದ ನಡುವೆ ಗುತ್ತಿಗೆದಾರ ಕಾಮಗಾರಿ ನಡೆಸುತ್ತಿದ್ದಾನೆ. ಕಾಮಗಾರಿ ನಿಲ್ಲಿಸದಿದ್ದಲ್ಲಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಗ್ರಾಮಸ್ಥರಾದ ಕಾಂತರಾಜು, ನಂದೀಶ, ರಮೇಶ್, ಲೊಕೇಶ್ ಆಗ್ರಹಿಸಿದ್ದಾರೆ.