ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿದ ಜಾಹೀರಾತು ನೀತಿ ಸ್ಥಗಿತಗೊಳಿಸುವಂತೆ ಒತ್ತಾಯಿಸಿ ಜಿಲ್ಲಾ ಹಾಗೂ ಪ್ರಾದೇಶಿಕ ಪತ್ರಿಕೆಗಳ ಸಂಪಾದಕರು ವಿಜಯಪುರದಲ್ಲಿ ಸಚಿವ ಶಿವಾನಂದ ಪಾಟೀಲರಿಗೆ ಮನವಿ ಸಲ್ಲಿಸಿದರು. ಅಶೋಕ ಯಡಳ್ಳಿ, ಮೋಹನ ಕುಲಕರ್ಣಿ, ಪಾಂಡುರಂಗ ಮಮದಾಪುರ ಮತ್ತಿತರರಿದ್ದಾರೆ. 
ರಾಜ್ಯ

ಜಾಹೀರಾತು ನೀತಿ ಸ್ಥಗಿತಗೊಳಿಸಿ

ಮಾರುತಿ ತಳ್ಳಳ್ಳಿ

ಪ್ರಮುಖ ಮುಖ್ಯಾಂಶಗಳು

  • ಸಚಿವರಿಗೆ ಪ್ರತ್ಯೇಕವಾಗಿ ಮನವಿ
  • ಜಿಲ್ಲಾ, ಪ್ರಾದೇಶಿಕ ಪತ್ರಿಕೆಗಳ ಸಂಪಾದಕರಿಂದ ಒತ್ತಾಯ
ವಿಜಯಪುರ: ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿದ ಜಾಹೀರಾತು ನೀತಿ-2026ನ್ನು ಸ್ಥಗಿತಗೊಳಿಸುವಂತೆ ಒತ್ತಾಯಿಸಿ ಜಿಲ್ಲಾ ಹಾಗೂ ಪ್ರಾದೇಶಿಕ ಪತ್ರಿಕೆಗಳ ಸಂಪಾದಕರು ಶನಿವಾರ ಸಚಿವರಾದ ಎಂ.ಬಿ. ಪಾಟೀಲ ಮತ್ತು ಶಿವಾನಂದ ಪಾಟೀಲರಿಗೆ ಪ್ರತ್ಯೇಕವಾಗಿ ಮನವಿ ಸಲ್ಲಿಸಿದರು.
ಜಿಲ್ಲಾ ಹಾಗೂ ಪ್ರಾದೇಶಿಕ ಪತ್ರಿಕೆಗಳು ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿವೆ. ಆದರೆ ಹೊಸ ಜಾಹೀರಾತು ನೀತಿಯಲ್ಲಿ ಈ ಪತ್ರಿಕೆಗಳ ಹಿತಾಸಕ್ತಿಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎಂದು ಆರೋಪ ಬಂದಿದ್ದು, ವಿಶೇಷವಾಗಿ, ಈ ನೀತಿಯನ್ನು ರೂಪಿಸುವ ವೇಳೆ ಯಾವುದೇ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸದೆ ಏಕಪಕ್ಷೀಯವಾಗಿ ತಯಾರಿಸಿರುವುದು ವಿಷಾದನೀಯವಾಗಿದೆ.
ಹೊಸ ಜಾಹೀರಾತು ನೀತಿಯಿಂದಾಗಿ ಪತ್ರಿಕೆಗಳು ಮುಚ್ಚುವ ಸ್ಥಿತಿಗೆ ಬಂದು ತಲುಪಿದಂತಾಗಿದೆ. ಹೀಗಾಗಿ, ತಕ್ಷಣವೇ ಹೊಸ ಜಾಹೀರಾತು ನೀತಿಯನ್ನು ನಿಲ್ಲಿಸಿ ಪತ್ರಿಕೆಗಳಿಗೆ ಪೂರಕವಾಗುವ ನೀತಿಯನ್ನು ತರಬೇಕೆಂದು ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರುವಂತೆ ಮನವಿಯಲ್ಲಿ ತಿಳಿಸಲಾಗಿದೆ.
ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಅಶೋಕ ಯಡಳ್ಳಿ, ಇರ್ಫಾನ್ ಶೇಖ, ಹಿರಿಯ ಸಂಪಾದಕ ಮೋಹನ ಕುಲಕರ್ಣಿ, ಪಾಂಡುರಂಗ ಮಮದಾಪುರ, ಮಹೇಶ ಶೆಟಗಾರ, ಮಾಧವರಾವ ಕುಲಕರ್ಣಿ, ಸುಶೀಲೇಂದ್ರ ನಾಯಕ, ಕೌಶಲ್ಯ ಪನಾಳಕರ, ಸಂಜಯ ಕೊಂಡಗೂಳಿ, ಸೀತಾರಾಮ ಕುಲಕರ್ಣಿ, ಇಂದುಶೇಖರ ಮಣೂರ, ಸಂಜೀವ ಕುಲಕರ್ಣಿ, ಶರದಕುಮಾರ ಅರ್ಜುಣಗಿ, ಸಿದ್ದಣ್ಣ ವಿಜಾಪುರ, ಅವಿನಾಶ ಬಿದರಿ, ಚಿದಂಬರ ಕುಲಕರ್ಣಿ, ಪವನ ಕುಲಕರ್ಣಿ, ಶರಣು ಮಸಳಿ, ವಿನೋದ ಸಾರವಾಡ, ಕೆ.ಕೆ. ಕುಲಕರ್ಣಿ, ಗುರು ಗದ್ದನಕೇರಿ, ಫಯಾಜ್ ಕಲಾದಗಿ, ಪುಂಡಲಿಕ ಮುರಾಳ ಮತ್ತಿತರರಿದ್ದರು.