ಬಾಗೇಪಲ್ಲಿ ತಾಲೂಕಿನ ಪಾತಪಾಳ್ಯ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಕ್ಕಬಳ್ಳಾಪುರ ಸದಿಯಹಿಂದ್ ಉರ್ದು ಅಂಜುಮನ್ ತರಕಿ ವತಿಯಿಂದ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಮುಖ್ಯಶಿಕ್ಷಕಿ ಶಹನಾಜ್, ಸಂಸ್ಥೆಯ ಅಧ್ಯಕ್ಷ ಮೌಲಾನ ಇಂತಿಯಜುಲ್ಲಾಖಾನ್ ಇದ್ದರು
ಪಾತಪಾಳ್ಯ: ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಬದುಕಿಗೆ ದಾರಿದೀಪ ಎಂದು ನಿವೃತ್ತ ಮುಖ್ಯಶಿಕ್ಷಕ ಮುನೀರ್ ಅಹಮದ್ ತಿಳಿಸಿದರು.extracurricular activities.
ಪಾತಪಾಳ್ಯ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಚಿಕ್ಕಬಳ್ಳಾಪುರ ಸದಿಯಹಿಂದ್ ಉರ್ದು ಅಂಜುಮನ್ ತರಕಿ ವತಿಯಿಂದ ಹಮ್ಮಿಕೊಂಡಿದ್ದ ಪಠ್ಯೇತರ ಚಟುವಟಿಕೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಮಾನಸಿಕ, ದೈಹಿಕ ಸದೃಢತೆ ಹೊಂದಬೇಕು. ಭವಿಷ್ಯವನ್ನು ರೂಪಿಸಿಕೊಳ್ಳಲು ಜ್ಞಾನಾರ್ಜನೆ ಸಮಯದಲ್ಲಿಯೇ ಸಾಂಸತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದರು.
ಮುಖ್ಯಶಿಕ್ಷಕಿ ಶಹನಾಜ್ ಮಾತನಾಡಿ, ಪಾಲಕರು ಕೂಡ ಮಕ್ಕಳನ್ನು ಮನೆಯಲ್ಲಿಯೇ ಕೂಡಿ ಹಾಕದೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಗಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಪರಿಪೂರ್ಣ ವ್ಯಕ್ತಿತ್ವ ರೂಪುಗೊಳ್ಳುವಂತೆ ನೋಡಿಕೊಳ್ಳಬೇಕು ಎಂದರು. ಸಂಸ್ಥೆಯ ಅಧ್ಯಕ್ಷ ಮೌಲಾನ ಇಂತಿಯಜುಲ್ಲಾಖಾನ್, ಅಲ್ಲಾಜ್, ಷಫಿವುಲ್ಲಾಖಾನ್, ಕಲಿಮುಲ್ಲಾ, ಅಬ್ದುಲ್ ಮಜೀದ್, ಎಸ್ಡಿಎಂಸಿ ಅಧ್ಯೆ ಸಬೀಹ ಬಾನು, ನಸಿಯಾಬಾನು, ರಿಜ್ವಾನಬೇಗಂ ಇದ್ದರು.