Participation is more important than winning or losing.
ಎಂ.ಎನ್.ಕೋಟೆ: ಕ್ರೀಡೆಯಲ್ಲಿ ಸೋಲು ಗೆಲುವು ಸಹಜ, ಅದರ ಬಗ್ಗೆ ಹೆಚ್ಚು ಯೋಚಿಸದೇ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ಮುಖಂಡ ಸಣ್ಣೀರಯ್ಯ ತಿಳಿಸಿದರು.
ಗುಬ್ಬಿ ತಾಲೂಕು ಹಾಗಲವಾಡಿ ಹೋಬಳಿಯ ಹರಳಕಟ್ಟೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಶ್ರೀ ಕೃಷ್ಣ ಟ್ರೋಪಿ 4ನೇ ವರ್ಷದ ಜಿಲ್ಲಾಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದ ಅವರು, ಯುವಕರು ಹೆಚ್ಚಾಗಿ ಕ್ರಿಕೆಟ್ ಆಟಕ್ಕೆ ಮನಸೋತಿದ್ದಾರೆ. ಗ್ರಾಮೀಣ ಮಟ್ಟದಲ್ಲಿ ಕ್ರಿಕೆಟ್ ಪಂದ್ಯಾವಳಿಗಳು ಹೆಚ್ಚಾಗಿ ಆಯೋಜಿಸಲಾಗುತ್ತಿದೆ. ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವ ಮಕ್ಕಳಿಗೆ ಪ್ರೋತ್ಸಾಹ ನೀಡಬೇಕು. ಸ್ಪರ್ಧಿಗಳು ಸೋಲು ಗೆಲುವನ್ನು ಚಿಂತೆ ಮಾಡದೇ ಕ್ರೀಡೆಯಲ್ಲಿ ಭಾಗವಹಿಸಬೇಕು ಎಂದರು.
ಮುಖಂಡ ಜಯರಾಮ್ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಹೆಚ್ಚು ಕ್ರೀಡಾಸಕ್ತರಿದ್ದಾರೆ, ಸ್ಪರ್ಧೆ ನಡೆಸಿ ಗೆಲ್ಲುವ ಛಲ ಆಟಗಾರರಲ್ಲಿ ಇರಬೇಕು ಎಂದು ತಿಳಿಸಿದರು.