Pedestrian injured in car collision
ಚಿಂತಾಮಣಿ: ನಗರದ ಬೆಂಗಳೂರು ರಸ್ತೆಯ ಬ್ಯಾಂಕ್ ಬಳಿ ಭಾನುವಾರ ಬೆಳಗ್ಗೆ ಕಾರು ಡಿಕ್ಕಿಯಾಗಿ ಪಾದಚಾರಿಗೆ ಗಾಯಗೊಂಡಿದ್ದಾರೆ. ನಗರದ ಎನ್ಎನ್ಟಿ ರಸ್ತೆಯ ನಿವಾಸಿ ನಂಜುಂಡಾಚಾರಿ(55) ಗಾಯಾಳು.
ಸೆಕ್ಯೂರಿಟಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿದೆ. ಗಾಯಾಳನ್ನು ಸಾರ್ವಜನಿಕರು ಉಪಚರಿಸುವಾಗ ಕಾರಿನ ಚಾಲಕ ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ಜನರು ಬೈಕ್ನಲ್ಲಿ ಹಿಂಬಾಲಿಸಿದ್ದಾಗ ಚಾಲಕ ಮಾಳಪಲ್ಲಿಯ ಹತ್ತಿರ ಕಾರು ಬಿಟ್ಟು ಪರಾರಿಯಾಗಿದ್ದಾನೆ.
ನಂಜುಂಡಾಚಾರಿ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದರಿಂದ ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ಸ್ಗೆ ದಾಖಲಿಸಲಾಗಿದೆ. ನಗರಠಾಣೆ ಪೊಲೀಸರು ಸ್ಥಳ ಪರಿಶೀಲಿಸಿ, ಕಾರನ್ನು ವಶ ಪಡಿಸಿಕೊಂಡಿದ್ದಾರೆ.