People's cooperation is essential to control AIDS
ಚಿಕ್ಕನಾಯಕನಹಳ್ಳಿ: ಸರ್ಕಾರಗಳು ಏಡ್ಸ್ ನಿಯಂತ್ರಣಕ್ಕೆ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದ್ದರೂ ಅದರಲ್ಲಿ ಆರೋಗ್ಯ ಇಲಾಖೆ ಹಾಗೂ ಸಾರ್ವಜನಿಕರ ಪಾತ್ರ ಮುಖ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎಸ್.ಓ.ಸತೀಶ್ ತಿಳಿಸಿದರು.
ಪಟ್ಟಣದ ನೆಹರು ವೃತ್ತದಲ್ಲಿ ಸೋಮವಾರ ಆರೋಗ್ಯ ಇಲಾಖೆ, ತಾಲೂಕು ಕಾನೂನು ಸೇವಾಸಮಿತಿ ಹಾಗೂ ವಿವಿಧ ಸಂಘ&ಸಂಸ್ಥೆಗಳ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನದ ಅಂಗವಾಗಿ ಆಯೋಜಿಸಿದ್ದ ಎಚ್ಐವಿ ಬಗ್ಗೆ ಸಾರ್ವಜನಿಕ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಎಚ್ಐವಿ ನಿಯಂತ್ರಣಕ್ಕೆ ಸರ್ಕಾರವು ಯೋಜನೆಗಳನ್ನು ಜಾರಿಗೊಳಿಸಿದೆ. ಸೂಕ್ತ ಚಿಕಿತ್ಸೆ ಮೂಲಕ ಸೋಂಕಿತರು ಉತ್ತಮ ಜೀವನ ರೂಪಿಸಿಕೊಳ್ಳಬಹುದಾಗಿದೆ ಎಂದರು.
ನವೋದಯ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ರವಿಕುಮಾರ್ ಮಾತನಾಡಿ, ಆರೋಗ್ಯ ಇಲಾಖೆ ಎಚ್ಐವಿ ನಿಯಂತ್ರಣದ ಬಗೆಗಿನ ಕಾರ್ಯ ಪ್ರಶಂಸನೀಯ. ಸಾರ್ವಜನಿಕರು ಸೂಕ್ತ ಮಾರ್ಗಗಳನ್ನು ಅನುಸರಿಸುವ ಮೂಲಕ ಹಾಗೂ ಜಾಗರೂಕರಾಗುವ ಮೂಲಕ ಎಚ್ಐವಿ ಮುಕ್ತ ಭಾರತ ನಿಮಾರ್ಣಕ್ಕೆ ಮುಂದಾಗಬೇಕಿದೆ ಎಂದರು.
ವಕೀಲರ ಸಂಘದ ಅಧ್ಯಕ್ಷ ವಕೀಲ ಜ್ಞಾನಮೂರ್ತಿ ಮಾತನಾಡಿ, ಸೋಂಕಿತರಿಗೆ ಇರುವ ಕಾನೂನು ಸೇವೆಗಳ ಬಗ್ಗೆ ವಿವರಿಸಿದರು.