ವಿಜಯಪುರದ ದೇವನಹಳ್ಳಿ ರಸ್ತೆಯ ಬಸವೇಶ್ವರ ನಗರದ ಬಸ್ ನಿಲ್ದಾಣದ ಬಳಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಚಾಲನೆ ನೀಡಿದರು. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ದೇಶಕ ವಿ.ಮಂಜುನಾಥ್, ರಾಮಚಂದ್ರಪ್ಪ, ಜಿಪಂ ಮಾಜಿ ಅಧ್ಯಕ್ಷ ಬಿ.ರಾಜಣ್ಣ, ಪುರಸಭೆ ಅಧ್ಯಕ್ಷೆ ಭವ್ಯಾ ಮಹೇಶ್ ಇತರರು ಇದ್ದರು.
ವಿಜಯಪುರ : ಮುಂದಿನ ವರ್ಷದೊಳಗೆ ಎತ್ತಿನಹೊಳೆ ಹಾಗೂ ಕಾವೇರಿ 5ನೇ ಹಂತದ ಯೋಜನೆಯ ಮೂಲಕ ದೇವನಹಳ್ಳಿ ಮತ್ತು ವಿಜಯಪುರಕ್ಕೆ ಮಾತ್ರವಲ್ಲದೆ, ಪ್ರತಿ ಗ್ರಾಮಗಳಿಗೂ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು.
ಪಟ್ಟಣದ ದೇವನಹಳ್ಳಿ ರಸ್ತೆಯ ಬಸವೇಶ್ವರ ನಗರದ ಬಸ್ ನಿಲ್ದಾಣದ ಬಳಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಜನರಿಗೆ ಮೂಲ ಸೌಕರ್ಯಗಳಾದ ನೀರು, ವಿದ್ಯುತ್ ಹಾಗೂ ನೈರ್ಮಲ್ಯಕ್ಕೆ ಆದ್ಯತೆ ನೀಡಲಾಗುತ್ತಿದೆ. ಶೀಘ್ರದಲ್ಲಿಯೇ ಯುಜಿಡಿ (ಒಳಚರಂಡಿ) ಯೋಜನೆಗೆ ಅನುದಾನ ಬಿಡುಗಡೆಯಾಗಲಿದೆ ಎಂದು ಸಚಿವರು ಭರವಸೆ ನೀಡಿದರು.
ಎತ್ತಿನಹೊಳೆ ಯೋಜನೆಯಡಿ ಕುಂದಾಣ ಬಳಿ ಟ್ಯಾಂಕ್ ನಿರ್ಮಿಸಲಾಗುತ್ತಿದ್ದು, ಶೀಘ್ರದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಂದ ಶಂಕುಸ್ಥಾಪನೆ ನೆರವೇರಿಸಲಾಗುವುದು. ಪಟ್ಟಣದ ವೈದ್ಯರ ವರ್ಗಾವಣೆ ಬಗ್ಗೆ ಆರೋಗ್ಯ ಸಚಿವರೊಂದಿಗೆ ಚರ್ಚಿಸಲಾಗಿದೆ. ಶಾಲೆ ಮತ್ತು ಅಂಗನವಾಡಿಗಳ ಬಿಸಿಯೂಟಕ್ಕೆ ಬೇಳೆಕಾಳು ಪೂರೈಕೆಯಾಗದಿರುವ ಬಗ್ಗೆ ಕ್ರಮ ವಹಿಸಲಾಗುವುದು ಎಂದರು.
ಬೆಸ್ಕಾಂ ಹೊಸಕೋಟೆ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ವೆಂಕಟೇಶಪ್ಪ, ಹಾಲಿ ಸದಸ್ಯರಾದ ಎಂ.ಸತೀಶ್ ಕುಮಾರ್, ರಾಜಣ್ಣ, ಇಕ್ಬಾಲ್, ಕೇಶವಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿನ್ನೂರು ವೆಂಕಟೇಶ್, ಟೌನ್ ಕಾಂಗ್ರೆಸ್ ಅಧ್ಯಕ್ಷ ವಿ.ಎಂ.ನಾಗರಾಜು, ಕಾರ್ಯದರ್ಶಿ ಕೋಕೋ ಕೋಲಾ ಮಂಜುನಾಥ್, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಕಾಂಗ್ರೆಸ್ ಅಧ್ಯಕ್ಷ ಮುಬಾರಕ್, ಟೌನ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಫ್ಜಲ್, ಯುವ ಕಾಂಗ್ರೆಸ್ನ ಹರೀಶ್, ಗಿರೀಶ್, ಆರ್ಎಂಸಿಟಿ ಮಂಜುನಾಥ್, ಪ್ರಥಮ ದರ್ಜೆ ಗುತ್ತಿಗೆದಾರ ವೆಂಕಟೇಶ್, ಪುರಸಭೆ ಮುಖ್ಯಾಧಿಕಾರಿ ಸತ್ಯನಾರಾಯಣ, ಬೆಸ್ಕಾಂ ಅಧಿಕಾರಿಗಳಾದ ಲಕ್ಷಿ$್ಮಕಾಂತ್, ಭವಾನಿ ಶಂಕರ್, ನಾರಾಯಣಸ್ವಾಮಿ ಇತರರು ಇದ್ದರು.