ದೇವರಹಿಪ್ಪರಗಿ ತಾಲೂಕಿನ ಪಡಗಾನೂರ ತಾಂಡಾದಲ್ಲಿ ಸಿಸಿ ರಸ್ತೆಗೆ ಶಾಸಕ ರಾಜುಗೌಡ ಪಾಟೀಲ ಭೂಮಿಪೂಜೆ ನೆರವೇರಿಸಿದರು. ಗುರುರಾಜ ಆಕಳವಾಡಿ, ಸಂಗನಗೌಡ ಬಿರಾದಾರ, ಸುರೇಶ ರಾಠೋಡ, ಶಂಕರ ರಾಠೋಡ, ಶ್ರೀಶೈಲ ಮುಳಜಿ, ನಿಂಗನಗೌಡ ಹಲಸಗುಂದ ಇತರರಿದ್ದರು. 
ರಾಜ್ಯ

ಗ್ರಾಮಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ

ಮಾರುತಿ ತಳ್ಳಳ್ಳಿ

ಪ್ರಮುಖ ಮುಖ್ಯಾಂಶಗಳು

  • ಶಾಸಕ ರಾಜುಗೌಡ ಪಾಟೀಲ ಹೇಳಿಕೆ
  • ಭೂಮಿಪೂಜೆ
ದೇವರಹಿಪ್ಪರಗಿ : ಗ್ರಾಮೀಣ ಭಾಗದ ರಸ್ತೆಗಳ ಸುಧಾರಣೆಗಾಗಿ ವಿಶೇಷ ಕಾಳಜಿ ವಹಿಸಲಾಗುತ್ತಿದ್ದು, ಪ್ರತಿಯೊಂದು ಗ್ರಾಮಗಳಲ್ಲಿ ಹಂತ ಹಂತವಾಗಿ ಸಿಸಿ ರಸ್ತೆ ನಿರ್ಮಾಣ ಮಾಡಿ ಅನುಕೂಲ ಮಾಡಿಕೊಡಲಾಗುವುದು ಎಂದು ಶಾಸಕ ರಾಜುಗೌಡ ಪಾಟೀಲ ಹೇಳಿದರು.

ತಾಲೂಕಿನ ಪಡಗಾನೂರ ತಾಂಡಾ, ಹರನಾಳ, ಹಿಟ್ನಳ್ಳಿ ಸೇರಿ ವಿವಿಧ ಗ್ರಾಮಗಳಲ್ಲಿ ಒಟ್ಟು 2 ಕೋಟಿ ರೂ. ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಗ್ರಾಮೀಣ ಭಾಗದ ಅಭಿವೃದ್ಧಿಯೇ ನಿಜವಾದ ಅಭಿವೃದ್ಧಿ. ಜನರು ಎದುರಿಸುತ್ತಿರುವ ರಸ್ತೆ, ಸಿಸಿ ರಸ್ತೆ, ಒಳಚರಂಡಿ, ಶಿಕ್ಷಣ, ವಿದ್ಯುತ್, ನೀರಾವರಿ, ಆರೋಗ್ಯ, ಸಾರಿಗೆ, ಕುಡಿಯುವ ನೀರಿನ ಸಮಸ್ಯೆ ಹಾಗೂ ಸಂಪರ್ಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡುವುದು ನಮ್ಮ ಮುಖ್ಯ ಗುರಿ. ಯಾವುದೇ ಗ್ರಾಮ ಅಭಿವೃದ್ಧಿಯಿಂದ ಹಿಂದೆ ಉಳಿಯಬಾರದು ಎಂಬ ಉದ್ದೇಶದಿಂದ ಈ ಕಾಮಗಾರಿಗಳನ್ನು ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ತಾಲೂಕಿನ ಪಡಗಾನೂರ ತಾಂಡಾ ಗ್ರಾಮದಲ್ಲಿ ಸುಮಾರು 50 ಲಕ್ಷ ರೂ., ಹರನಾಳ ಗ್ರಾಮದಲ್ಲಿ 50 ಲಕ್ಷ ರೂ. ಹಾಗೂ ಹಿಟ್ನಳ್ಳಿ ಗ್ರಾಮದಲ್ಲಿ ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸಿಸಿ ರಸ್ತೆ ತಮ್ಮ ಅಧಿಕಾರದ ಅವಧಿಯಲ್ಲಿ ಗುಣಮಟ್ಟದ ವಿಚಾರದಲ್ಲಿ ರಾಜಿ ಇಲ್ಲ ಆದ್ದರಿಂದ ಕಾಮಗಾರಿಯಲ್ಲಿ ಉತ್ತಮ ಗುಣಮಟ್ಟವನ್ನು ಕಾಯ್ದುಕೊಳ್ಳಲು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.

ಗುರುರಾಜ ಆಕಳವಾಡಿ ಹಾಗೂ ಸಂಗನಗೌಡ ಬಿರಾದಾರ ಮಾತನಾಡಿ, ಕಳೆದ 50 ವರ್ಷಗಳಿಂದ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಣದ ಕುಗ್ರಾಮಗಳಿಗೂ ಶಾಸಕರು ಕೋಟಿ, ಕೋಟಿ ಅನುದಾನ ತಂದು ಅಭಿವೃದ್ಧಿ ಪಡಿಸಿದ್ದಾರೆ ಎಂದರು. ಗ್ರಾ.ಪಂ. ಮಾಜಿ ಅಧ್ಯಕ್ಷ ಸುರೇಶ ರಾಠೋಡ, ಶಂಕರ ರಾಠೋಡ, ಶ್ರೀಶೈಲ ಮುಳಜಿ, ನಿಂಗನಗೌಡ ಹಲಸಗುಂದ, ಸಂಗನಗೌಡ ಬಿರಾದಾರ ಇತರರಿದ್ದರು.