ಹಳೇ ಕಟ್ಟಡ ಶ್ರೀ ತೆರವುಗೊಳಿಸಲಿ old building 
ರಾಜ್ಯ

ಹಳೇ ಕಟ್ಟಡ ಶ್ರೀ ತೆರವುಗೊಳಿಸಲಿ old building

ಕೋಲಾರ ಡೆಸ್ಕ್
ವೇಮಗಲ್​: ಮಳೆಯಿಂದ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗದಂತೆ ತಡೆಯಲು ಅಧಿಕಾರಿಗಳು ಕ್ರಿಯಾಶೀಲರಾಗಬೇಕಿದೆ ಎಂದು ವೇಮಗಲ್​ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಸಿ.ಎಸ್​. ವೆಂಕಟೇಶ್​ ಕರೆ ನೀಡಿದರು.old building
ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸಾಮಾನ್ಯ ಸಭೆಯಲ್ಲಿ ಮಾತನಾಡಿ, ಪಟ್ಟಣ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಶಿಥಿಲಾವಸ್ಥೆ ತಲುಪಿರುವ ಹಾಗೂ ಬೀಳುವ ಹಂತದಲ್ಲಿರುವ ಹಳೆಯ ಕಟ್ಟಡಗಳು ಮತ್ತು ಗೋಡೆಗಳನ್ನು ತಕ್ಷಣವೇ ಗುರುತಿಸಬೇಕು. ಅಪಾಯಕಾರಿ ಕಟ್ಟಡಗಳ ಮಾಲೀಕರಿಗೆ ಕಾನೂನುಬದ್ಧವಾಗಿ ನೋಟಿಸ್​ ಜಾರಿ ಮಾಡಿ, ಅವುಗಳನ್ನು ತೆರವುಗೊಳಿಸಲು ತಕ್ಷಣವೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಪಟ್ಟಣದಲ್ಲಿ ಸ್ವಚ್ಛತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ನಿರ್ದೇಶನದಂತೆ ಜಾರಿಗೆ ತರಲಾಗುತ್ತಿರುವ ಹೊಸ "ಘನತ್ಯಾಜ್ಯ ನಿರ್ವಹಣಾ ನಿಯಮಗಳು-&2026'ರ ಕಟ್ಟುನಿಟ್ಟಿನ ಅನುಷ್ಠಾನದ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ನೂತನ ಕಾಯ್ದೆ ಜಾರಿಗೆ ತರಲು ಸಾರ್ವಜನಿಕರ ಸಹಭಾಗಿತ್ವ ಅತ್ಯಗತ್ಯವಾಗಿದ್ದು, ಪ್ರತಿ ಮನೆಯಿಂದಲೇ ಕಸದ ಸಮರ್ಪಕ ವಿಂಗಡಣೆ ಆರಂಭವಾಗಬೇಕಿದೆ. ನಾಗರಿಕರು ಮನೆ ಹಾಗೂ ವಾಣಿಜ್ಯ ಮಳಿಗೆಗಳಲ್ಲಿ ಉತ್ಪತ್ತಿಯಾಗುವ ಹಸಿ ಮತ್ತು ಒಣ ಕಸವನ್ನು ಬೇರ್ಪಡಿಸಿ ಪೌರಕಾರ್ಮಿಕರಿಗೆ ನೀಡುವಂತೆ ಜಾಗೃತಿ ಮೂಡಿಸಬೇಕಾಗಿದೆ. ಈ ನಿಟ್ಟಿನಲ್ಲಿ ವಾರ್ಡ್​ ಮಟ್ಟದಲ್ಲಿ ಅರಿವು ಕಾರ್ಯಕ್ರಮ ಹಾಗೂ ನಿಯಮ ಉಲ್ಲಂಘಿಸುವವರ ವಿರುದ್ಧ ದಂಡ ವಿಧಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಅತ್ಯಂತ ಕಡಿಮೆ ವೇತನಕ್ಕೆ ನೇಮಗೊಂಡು 15 ರಿಂದ 20 ವರ್ಷ ಸೇವೆ ಸಲ್ಲಿಸಿ ನಿವೃತ್ತಿಯಾದ ನೀರಟಿಗೆ, ಒಂದು ಬಾರಿಗೆ ಅನ್ವಯವಾಗುವಂತೆ ತಲಾ 75 ಸಾವಿರ ರೂ. ನಿವೃತ್ತಿ ಭತ್ಯೆಯನ್ನು ಪಪಂನಿಂದ ಸ್ವಂತ ನಿಧಿಯಿಂದ ನೀಡಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಬೀದಿ ದೀಪಗಳ ಅಳವಡಿಕೆ, ಕುಡಿಯುವ ನೀರಿನ ಪೈಪ್​ಲೈನ್​ ವಿಸ್ತರಣೆ ಮತ್ತು ಸಾರ್ವಜನಿಕ ಉದ್ಯಾನವನಗಳ ಅಭಿವೃದ್ಧಿ ಕಾಮಗಾರಿಗಳಿಗೆ ಕ್ರಿಯಾ ಯೋಜನೆ ಸಿದ್ಧಪಡಿಸಲಾಯಿತು.