ಶಾಸಕ ವಿಶ್ವಾಸ ವೈದ್ಯ 
ರಾಜ್ಯ

ಯಲ್ಲಮ್ಮ ಪ್ರಾಧಿಕಾರದಲ್ಲಿ ಸಿಬ್ಬಂದಿ ಕೊರತೆ ನೀಗಿಸಿ

ಸವದತ್ತಿ: ಬೆಂಗಳೂರಿನಲ್ಲಿ ಸೋಮವಾರ ನಡೆದ ಬಜೆಟ್​ ಅಧಿವೇಶನದಲ್ಲಿ ಸವದತ್ತಿ ೇತ್ರದ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಹುದ್ದೆ ನೇಮಕಾತಿ ಹಾಗೂ ಮುಜರಾಯಿ ಇಲಾಖೆ ಸಿಬ್ಬಂದಿ ಹಿತರಣೆ ಕುರಿತು ಚರ್ಚೆ ನಡೆಯಿತು.
ಸವದತ್ತಿ ಶಾಸಕ ವಿಶ್ವಾಸ ವೈದ್ಯ ಅವರು ಚುಕ್ಕಿ ಗುರುತಿನ ಪ್ರಶ್ನೆ ಮೂಲಕ ವಿಷಯ ಮಂಡಿಸಿ, ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಹಾಗೂ ಸಿಬ್ಬಂದಿ ಕುಟುಂಬಗಳ ಭವಿಷ್ಯದ ಕುರಿತು ಸರ್ಕಾರದ ಗಮನ ಸೆಳೆದರು.
ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ವಿಳಂಬವಾಗಿರುವ ಬಗ್ಗೆ ಪ್ರಶ್ನಿಸಿ, ಅಲ್ಲಿನ ಸಿಬ್ಬಂದಿ ಹಿತರಣೆಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಜತೆಗೆ ಕರ್ತವ್ಯದ ಅವಧಿಯಲ್ಲಿ ಮೃತಪಟ್ಟ ಮುಜರಾಯಿ ಇಲಾಖೆ ಸಿಬ್ಬಂದಿ ಕುಟುಂಬಗಳಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡುವ ವ್ಯವಸ್ಥೆ ಇಲ್ಲದಿರುವುದು 36 ಕುಟುಂಬ ಸಂಕಷ್ಟದ ಸ್ಥಿತಿಗೆ ತಳ್ಳಿದೆ ಎಂದು ವಿವರಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ, ಪ್ರಸ್ತುತ ಇಲಾಖೆಯಲ್ಲಿ ಅನುಕಂಪದ ಆಧಾರದ ನೇಮಕಾತಿಗೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು. ಆದರೆ, ಇತರ ಇಲಾಖೆಗಳಂತೆ ಇಲ್ಲಿಯೂ ಕಾನೂನು ತಿದ್ದುಪಡಿ ಮಾಡುವ ಕುರಿತು ಕಾನೂನು ಸಚಿವರೊಂದಿಗೆ ಚರ್ಚಿಸಿ ಮಾಹಿತಿ ನೀಡುವುದಾಗಿ ಭರವಸೆ ನೀಡಿದರು.
ಎಲ್ಲ ಇಲಾಖೆಗಳಲ್ಲಿರುವ ಅನುಕಂಪ ಆಧಾರದ ನೇಮಕಾತಿ ವ್ಯವಸ್ಥೆಯನ್ನು ಮುಜರಾಯಿ ಇಲಾಖೆಯಲ್ಲೂ ಜಾರಿಗೆ ತರಲು ಕಾನೂನು ತಿದ್ದುಪಡಿ ಅಗತ್ಯವಿದೆ. ಯಲ್ಲಮ್ಮ ಪ್ರಾಧಿಕಾರದಲ್ಲಿ ಸಿಬ್ಬಂದಿ ಕೊರತೆ ನಿವಾರಣೆಗಾಗಿ
ಶ್ರೀವೇ ಖಾಲಿ ಹುದ್ದೆ ಭರ್ತಿ ಮಾಡುವಂತೆ ಶಾಸಕ ವಿಶ್ವಾಸ ವೈದ್ಯ ಕೋರಿದರು.