ರೌಡಿ ಶೀಟರ್ಗಳಿಗೆ ಬಿಸಿ ಮುಟ್ಟಿಸಿದ ಪೊಲೀಸರು Police crack
kgf_ ರೌಡಿ ಆಸಾಮಿಗಳು ಯಾವುದೇ ರೀತಿಯ ಕಾನೂನುಬಾಹಿರ ಕೃತ್ಯಗಳಲ್ಲಿ ಭಾಗವಹಿಸುತ್ತಿರುವ ಕುರಿತು ಮಾಹಿತಿ ಬಂದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕೆಜಿಎ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್ ಎಚ್ಚರಿಸಿದರು. Police crack
ರೌಡಿ ಆಸಾಮಿಗಳ ಇರುವಿಕೆಯ ಬಗ್ಗೆ ಹಾಗೂ ರೌಡಿ ಕೃತ್ಯಗಳಲ್ಲಿ ಸಕ್ರಿಯವಾಗಿರುವ ಬಗ್ಗೆ ಖುದ್ದು ಪರಿಶೀಲನೆ ನಡೆಸಲು ಮುಂಜಾಗೃತ ಕ್ರಮವಾಗಿ ಪೊಲೀಸರು ರೌಡಿಶೀಟರ್ಗಳ ಮನೆಗಳ ಮೇಲೆ ಭಾನುವಾರ ಬೆಳ್ಳಂಬೆಳಗ್ಗೆ ದಿಢೀರ್ ದಾಳಿ ನಡೆಸಿ ಮಾತನಾಡಿದರು.
ರಾರ್ಬಟ್ಸನ್ಪೇಟೆ, ಆಂಡ್ರಸನ್ಪೇಟೆ ಮತ್ತು ಉರಿಗಾಂ ಪೊಲೀಸ್ ಠಾಣಾ ಸರಹದ್ದುಗಳಲ್ಲಿನ 10 ರೌಡಿ ಆಸಾಮಿಗಳ ಮನೆಗಳ ಮೇಲೆ 5ಐವರು ಪೊಲೀಸ್ ಇನ್ಸ್ಪೆಕ್ಟರ್, 10 ಪೊಲೀಸ್ ಸಬ್ಇನ್ಸ್ಪೆಕ್ಟರ್ ಮತ್ತು 60 ಮಂದಿ ಪೊಲೀಸ್ ಸಿಬ್ಬಂದಿಯ 5 ತಂಡಗಳಲ್ಲಿ ದಾಳಿ ನಡೆಸಿ ರೌಡಿಯೊಬ್ಬನ ಮನೆಯಲ್ಲಿದ್ದ ಎರಡು ಹರಿತವಾದ ಆಯುಧಗಳನ್ನು ವಶಕ್ಕೆ ಪಡೆಯಲಾಗಿದೆ.
ರೌಡಿ ಆಸಾಮಿ ಜಯಕಾಂತ್ ಎಂಬುವವನ ಮನೆಯಲ್ಲಿ 2 ಹರಿತವಾದ ಆಯುಧಗಳು ಪತ್ತೆಯಾಗಿದ್ದು, ಆತನನ್ನು ವಶಕ್ಕೆ ಪಡೆದುಕೊಂಡು ರಾಬರ್ಟಸನ್ಪೇಟೆ ಪೊಲೀಸ್ ಠಾಣೆಯಲ್ಲಿ ಶಸಾಸ ಕಾಯ್ದೆಯಡಿಪ್ರಕರಣ ದಾಖಲಿಸಲಾಗಿದೆ. ಇನ್ನೋರ್ವ ರೌಡಿ ಆಸಾಮಿ ಶರತ್ ಕುಮಾರ್ ಎಂಬುವನ ಮನೆಯ ಮೇಲೆ ದಾಳಿ ನಡೆಸಿದಾಗ ಅಲ್ಲೂ ಹರಿತವಾದ ಆಯುಧ ಪತ್ತೆಯಾಗಿದ್ದು, ಆಂಡ್ರಸನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಇವರಿಬ್ಬರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದರು.
ಸಾರ್ವಜನಿಕರು ನೆಮ್ಮದಿಯ ಜೀವನ ನಡೆಸಲು ಅನುಕೂಲವಾಗುವಂತೆ, ಪೊಲೀಸರು ಮುಂಜಾಗ್ರತ ಕ್ರಮವಾಗಿ ರೌಡಿ ಆಸಾಮಿಗಳ ಮನೆಗಳ ಮೇಲೆ ದಾಳಿ ನಡೆಸಿ, ಖುದ್ದು ಪರಿಶೀಲನೆ ನಡೆಸಿದ್ದು, ಮುಂದೆಯೂ ಸಹ ಇದೇ ರೀತಿಯ ದಾಳಿಗಳನ್ನು ನಡೆಸಿ ಸಾರ್ವಜನಿಕ ನೆಮ್ಮದಿಗೆ ಭಂಗ ತರುವಂತಹ ಕೃತ್ಯಗಳಲ್ಲಿ ಭಾಗವಹಿಸಿರುವವರ ಮೇಲೆ ನಿರ್ದಾಣ್ಯ ಕ್ರಮ ವಹಿಸಲಾಗುವುದು ಎಂದು ಎಚ್ಚರಿಸಿದರು.
ಡಿವೈಎಸ್ಪಿ ಲಕ್ಷ$್ಮಯ್ಯ ಸೇರಿ ಕೆಜಿಎಫ್ ಪೊಲೀಸ್ ಜಿಲ್ಲೆಯ ವೃತ್ತ ನಿರೀಕ್ಷಕರು, ಉಪ ನಿರೀಕ್ಷಕರು ಮತ್ತು ಸಿಬ್ಬಂದಿ ಇದ್ದರು.