ಬೈಲಹೊಂಗಲದಲ್ಲಿ ಪಲ್ಸ್​ ಪೋಲಿಯೋ ಕಾರ್ಯಕ್ರಮಕ್ಕೆ ಶಾಸಕ ಮಹಾಂತೇಶ ಕೌಜಲಗಿ ಚಾಲನೆ ನೀಡಿದರು. ಪ್ರಭಾ, ಡಾ.ಎಸ್​.ಎಸ್​.ಸಿದ್ದಣ್ಣವರ ಇತರರಿದ್ದರು. 
ರಾಜ್ಯ

ಕಡ್ಡಾಯವಾಗಿ ಪೋಲಿಯೋ ಹಾಕಿಸಿ

ಬೈಲಹೊಂಗಲ: ಐದು ವರ್ಷದೊಳಗಿನ ಪ್ರತಿ ಮಗುವಿಗೂ ಪೋಲಿಯೋ ಲಸಿಕೆ ಹಾಕಿಸುವುದು ಪಾಲಕರ ಆದ್ಯ ಕರ್ತವ್ಯ ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು. ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಪಲ್ಸ್​ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಪೋಲಿಯೋಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ತಿಳಿಸಿದರು. ತಾಲೂಕು ಆರೋಗ್ಯಾಧಿಕಾರಿ ಡಾ.ಎಸ್​.ಎಸ್​.ಸಿದ್ದಣ್ಣವರ ಮಾತನಾಡಿ, ತಾಲೂಕಿನಲ್ಲಿ ಒಟ್ಟು 189 ಲಸಿಕಾ ಕೇಂದ್ರ ಹಾಗೂ 4 ಸಂಚಾರಿ ತಂಡ ರಚಿಸಲಾಗಿದೆ. ಐದು ವರ್ಷದೊಳಗಿನ 34,315 ಮಕ್ಕಳಿಗೆ ಪಲ್ಸ್​ ಪೋಲಿಯೋ ಲಸಿಕೆ ನೀಡುವ ಗುರಿ ಹೊಂದಿದೆ ಎಂದು ತಿಳಿಸಿದರು. ಪ್ರಜಾಪಿತ ಬ್ರಹ್ಮಕುಮಾರಿಯ ಪ್ರಭಾ, ನಗರಸಭೆ ಪೌರಾಯುಕ್ತೆ ಭಾಗ್ಯಶ್ರೀ ಹುಗ್ಗಿ, ಹಿರಿಯ ಆರೋಗ್ಯ ನಿರೀಕ ಡಿ.ಎಸ್​.ಝೆಡೆಕರ, ಗ್ಯಾರಂಟಿ ಸಮಿತಿ ತಾಲೂಕಾಧ್ಯ ಮಹಾಂತೇಶ ಕಳ್ಳಿಬಡ್ಡಿ, ಬಸವರಾಜ ತಿಗಡಿ ಇತರರಿದ್ದರು.