- ಕುಡಿಯುವ ನೀರಿನ ಸಮಸ್ಯೆ
- ಅಂತರ್ಜಲ ಮಟ್ಟ
ಮುಧೋಳ: ಜಿಲ್ಲಾಡಳಿತದ ಆದೇಶದಂತೆ ಘಟಪ್ರಭಾ ಎಡ ಹಾಗೂ ಬಲದಂಡೆ ಕಾಲುವೆಗಳಿಗೆ ನೀರು ಬರದೇ ಇರುವುದರಿಂದ ಕೆಳಹಂತದ ರೈತಾಪಿ ವರ್ಗಕ್ಕೆ ಜನ ಜಾನುವಾರುವಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತಿದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಬಸವಂತಪ್ಪ ಕಾಂಬಳೆ ತಿಳಿಸಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಹದಿನೈದು ದಿನಗಳಿಂದಲೂ ಘಟಪ್ರಭಾ ಎಡದಂಡೆ ಕಾಲುವೆ ಬಳಿ ಅಂತರ್ಜಲ ಮಟ್ಟ ಕುಸಿಯುತ್ತಿದೆ. ನೀರಿಗಾಗಿ ಹಾಹಾಕಾರ ಎದುರಾಗುವ ಭೀತಿ ಎದುರಾಗಿದೆ. ಹಿಡಕಲ್ ಜಲಾಶಯದಿಂದ ಬಿಟ್ಟಿರುವ ನೀರಿನ ಪ್ರಮಾಣಕ್ಕೂ ಹರಿದು ಬರುತ್ತಿರುವ ನೀರಿನ ಪ್ರಮಾಣಕ್ಕೂ ಅಜಗಜಾಂತರ ವ್ಯತ್ಯಾಸವಾಗುತ್ತಿದೆ. ಕೂಡಲೇ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಕಾಲುವೆಗಳಿಗೆ ನೀರು ಹರಿಸಲು ಮರು ಪರಿಶೀಲನೆ ಮಾಡಿ ಕೊನೆಯ ಹಂತದವರಿಗೂ ನೀರು ಹರಿಸಲು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ರಸ್ತೆ ತಡೆದು ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಮುಖಂಡರಾದ ಸುಭಾಸ ಶಿರಬೂರ, ಮಹೇಶ ಪಾಟೀಲ, ಹಣಮಂತಗೌಡ ಪಾಟೀಲ, ಸುರೇಶ ಚಿಂಚಲಿ, ದುಂಡಪ್ಪ ಯರಗಟ್ಟಿ ಇದ್ದರು.