ಯಾದಗಿರಿ ನಗರಸಭೆಯಲ್ಲಿ ಗುರುವಾರ ಆಯೋಜಿಸಿದ್ದ ಆರೋಗ್ಯ ಶಿಬಿರದಲ್ಲಿ ಪೌರಕಾರ್ಮಿಕರ ಆರೋಗ್ಯ ತಪಾಸಣೆ ಮಾಡಲಾಯಿತು. ಪೌರಾಯುಕ್ತ ಉಮೇಶ ಚವ್ಹಾಣ್, ಡಾ.ವಿನಿತಾ, ಶ್ರೀಧರ್ಮ, ಶೇಖ್ ಮೊಯಿನುದ್ದೀನï, ಪದ್ಮಾವತಿ, ಕಾಂಚನಾ, ಮಾಲಿಂಗ ಇತರರಿದ್ದರು. 
ರಾಜ್ಯ

ಪೌರಕಾರ್ಮಿಕರು ಆರೋಗ್ಯದ ಕಾಳಜಿ ವಹಿಸಿ

ಪ್ರಮುಖ ಮುಖ್ಯಾಂಶಗಳು

  • ಪೌರಾಯುಕ್ತ ಉಮೇಶ ಚವ್ಹಾಣ್ ಸಲಹೆ
  • ನಗರಸಭೆಯಲ್ಲಿ ಉಚಿತ ಆರೋಗ್ಯ ಶಿಬಿರ
ಯಾದಗಿರಿ : ನಗರದ ಸ್ವಚ್ಛತೆಗಾಗಿ ಬೆಳಗ್ಗೆ ಎದ್ದು ಚರಂಡಿ ಶುಚಿಗೊಳಿಸಿ ಕಸ ವಿಲೇವಾರಿಯಲ್ಲಿ ತೊಡಗಿಸಿಕೊಳ್ಳುವ ಪೌರಕಾರ್ಮಿಕರು ತಮ್ಮ ಆರೋಗ್ಯದ ಕಡೆಗೂ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ನಗರಸಭೆ ಪೌರಾಯುಕ್ತ ಉಮೇಶ ಚವ್ಹಾಣ್ ಹೇಳಿದರು.
ನಗರಸಭೆ ಆವರಣದಲ್ಲಿ ಗುರುವಾರ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಹಮ್ಮಿಕೊಂಡ ಪೌರಕಾರ್ಮಿಕರ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದ ಅವರು, ಸ್ವಚ್ಛತಾ ಕಾರ್ಯ ಕೈಗೊಳ್ಳುವಾಗ ಆರೋಗ್ಯದ ದೃಷ್ಟಿಯಿಂದ ಪೌರಕಾರ್ಮಿಕರು ಕಡ್ಡಾಯವಾಗಿ ಸಮವಸö ಹಾಗೂ ಸುರಕ್ಷಾ ಕವಚ ಧರಿಸಬೇಕು ಎಂದು ಸಲಹೆ ನೀಡಿದರು.
ನಗರದ ಸ್ವಚ್ಛತೆ ಕಾಪಾಡುವ ಜತೆಗೆ ಪೌರಕಾರ್ಮಿಕರು ತಮ್ಮ ವೈಯಕ್ತಿಕ ನೈರ್ಮಲ್ಯ ಮತ್ತು ಸ್ವಚ್ಛತೆಗೂ ಆದ್ಯತೆ ನೀಡಬೇಕು. ಎಲ್ಲಕ್ಕೂ ಹೆಚ್ಚಾಗಿ ಕೆಲಸ ಮಾಡುವಾಗ ಆರೋಗ್ಯ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ನಿಮ್ಮ ಆರೋಗ್ಯ ಕಾಳಜಿಗಾಗಿಯೇ ನಗರಸಭೆ ಇಂದು ಆರೋಗ್ಯ ಶಿಬಿರ ಹಮ್ಮಿಕೊಂಡಿದ್ದು, ಪ್ರತಿಯೊಬ್ಬರೂ ಇದರ ಲಾಭ ಪಡೆಯಬೇಕು ಎಂದರು.
ನಿಮ್ಮ ಯಾವುದೇ ಸಮಸ್ಯೆಗಳಿದ್ದರೂ ನಾನು ನಿಮ್ಮೊಂದಿಗಿರುತ್ತೇನೆ. ಪ್ರತಿಯೊಬ್ಬರೂ ಪ್ರಾಮಾಣಿಕವಾಗಿ ಕೆಲಸ ಮಾಡಿ ನಗರದ ಸೌಂದರ್ಯೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದರು.
ಉಚಿತ ಶಿಬಿರದಲ್ಲಿ ನೂರಾರು ಪೌರಕಾರ್ಮಿಕರು ಭಾಗವಹಿಸಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಈ ವೇಳೆ ಡಾ.ವಿನಿತಾ, ಆರೋಗ್ಯ ಇಲಾಖೆ ಸಿಬ್ಬಂದಿ ಶ್ರೀಧರ್ಮ, ಶೇಖ್ ಮೊಯಿನುದ್ದೀನ್, ಪದ್ಮಾವತಿ, ಕಾಂಚನಾ, ಮಾಲಿಂಗ, ಬಸಪ್ಪ, ನಗರಸಭೆಯ ಕಿರಿಯ ಆರೋಗ್ಯ ನಿರೀಕ್ಷಕ ಸಿz್ದÁರ್ಥ, ಕಿರಿಯ ಆರೋಗ್ಯ ನಿರೀಕ್ಷಕ ಶರಣಮ್ಮ, ಮಂಜುನಾಥ್ ಚವ್ಹಾಣ್ ಇತರರಿದ್ದರು.