ಬೆಸ್ಕಾಂ ನಿರ್ವಹಣೆ ಹಿನ್ನೆಲೆಯಲ್ಲಿ ಭಾನುವಾರ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ  
ರಾಜ್ಯ

ಭಾನುವಾರ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

ಪೀಣ್ಯಾ, ಲಗ್ಗೆರೆ ಸುತ್ತಮುತ್ತ ಹಲವು ಬಡಾವಣೆಗಳಲ್ಲಿ ವ್ಯತ್ಯಯ

ಬೆಂಗಳೂರು: 220/66/11 ಕೆವಿ ಎಸ್‌ಆರ್‌ಎಸ್ ಪೀಣ್ಯ ಸಬ್‌ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತ್ರೈಮಾಸಿಕ ನಿರ್ವಹಣೆ ಹಿನ್ನೆಲೆಯಲ್ಲಿ ಪೀಣ್ಯವಿಭಾಗದ ಎನ್-4, ಎನ್-5, ಎನ್-7 ಉಪ ವಿಭಾಗದಲ್ಲಿ ಭಾನುವಾರ (ನ.29) ಬೆಳಗ್ಗೆ 10ರಿಂದ ಸಂಜೆ 5:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಪೀಣ್ಯ 10ನೇ ಮುಖ್ಯರಸ್ತೆ, 11ನೇ ಮುಖ್ಯರಸ್ತೆ, ಉಡುಪಿ ಹೋಟೆಲ್ ಸುತ್ತಮುತ್ತ, ಐಆರ್ ಪಾಲಿಟೆಕ್ನಿಕ್ ರಸ್ತೆ, ಲಕ್ಷ್ಮೀದೇವಿ ನಗರ, ಲಗ್ಗೆರೆ ಹಳೆ ಗ್ರಾಮ, ಲವಕುಶನಗರ, ರಾಜೀವ್‌ಗಾಂಧಿನಗರ, ಚೌಡೇಶ್ವರಿ ನಗರ 6, 7, 8, 9ನೇ ಕ್ರಾಸ್, 1ನೇ ಹಂತ ಪಿಐಎ 7ನೇ ಕ್ರಾಸ್, 1ನೇ ಹಂತ ಪಿಯುಎ, ಟಿವಿಎಸ್ ಕ್ರಾಸ್ ರಸ್ತೆ ಬಳಿ, ಇಸ್ರೋ 1, 2ನೇ ಕ್ರಾಸ್, 1ನೇ ಹಂತದ ಪಿಐಎ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಗೃಹಲಕ್ಷ್ಮಿಅಪಾರ್ಟ್‌ಮೆಂಟ್, ಎಸ್‌ಎಂ ರಸ್ತೆ, ಜಾಲಹಳ್ಳಿ ಕ್ರಾಸ್, ಚೊಕ್ಕಸಂದ್ರ, ಮಾರುತಿ ಲೇಔಟ್, ಕೆಂಪಯ್ಯ ಲೇಔಟ್, ಜಿ.ಜಿ ಪಾಳ್ಯ, ಇಸ್ರೋ, ನಾರಾಯಣಪುರ, ಎನ್.ಟಿ.ಟಿ.ಎಫ್ ಸರ್ಕಲ್, ಗಣಪತಿನಗರ ಮುಖ್ಯರಸ್ತೆ, ಪೊಲೀಸ್ ಠಾಣೆ ರಸ್ತೆ, ಚಾಮುಂಡಿಪುರ, ರಾಜೇಶ್ವರಿನಗರ, ಆಕಾಶ್ ಥಿಯೇಟರ್ ರಸ್ತೆ, ವಿ ಇಗ್ನಾನ ಪಬ್ಲಿಕ್ ಸರ್ಕಲ್ ರಸ್ತೆ. ಭೈರವೇಶ್ವರ ನಗರ, ಬ್ಯಾಂಕ್ ಕಾಲೋನಿ, ಮುನೇಶ್ವರ ಲೇಔಟ್, ಎಫ್‌ಎಫ್ ಲೇಔಟ್, ಎನ್‌ಎಸ್ ಬಡಾವಣೆ, ಕೆಜಿ ಲೇಔಟ್ ಏರಿಯಾಗಳಲ್ಲಿ ಕೂಡಾ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.