- ಪ್ರಜಾಸೇವೆಗೆ ಸಂಬಂಧಿಸಿದ ವಿವಿಧ ಅರ್ಜಿಗಳ ವಿಲೇವಾರಿ ಮತ್ತು ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಆದ್ಯತೆ
- ಐಪಿಜಿಆರ್‌ಎಸ್ ಪೋರ್ಟಲ್‌ನಲ್ಲಿ ದಾಖಲಾಗಿರುವ ದೂರುಗಳು ಹಾಗೂ 21 ದಿನಗಳಿಗಿಂತ ಹೆಚ್ಚು ಕಾಲ ಬಾಕಿ ಉಳಿದಿರುವ ಪ್ರಕರಣಗಳಿಗೆ ಆದ್ಯತೆ ನೀಡಿ
ರಾಜ್ಯದಲ್ಲಿ ನಡೆಯುತ್ತಿರುವ ಪ್ರಜಾಸೇವೆಗೆ ಸಂಬಂಧಿಸಿದ ಅಭಿಯಾನವನ್ನು ಯಶಸ್ವಿಗೊಳಿಸುವ ಉದ್ದೇಶದಿಂದ ಸರ್ಕಾರ ಸೆ.5ರಿಂದ ರಾಜ್ಯಾದ್ಯಂತ ವಿಶೇಷ ಕಾರ್ಯಯೋಜನೆ ಜಾರಿಗೊಳಿಸಿದೆ.
ಪ್ರಜಾಸೇವೆಗೆ ಸಂಬಂಧಿಸಿದ ವಿವಿಧ ಅರ್ಜಿಗಳ ವಿಲೇವಾರಿ ಮತ್ತು ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಆದ್ಯತೆ ನೀಡಬೇಕು ಎಂದು ಸರ್ಕಾರದ ಉಪ ಕಾರ್ಯದರ್ಶಿ ಸುಮಾ ಬಿ.ಎಸ್. ಹೊರಡಿಸಿರುವ ಸುತ್ತೋಲೆಯಲ್ಲಿ ಸೂಚಿಸಲಾಗಿದೆ.
ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಹಾಗೂ ತಾಲೂಕು ಮಟ್ಟದಲ್ಲಿ ತಹಶೀಲ್ದಾರರ ನೇತೃತ್ವದಲ್ಲಿ ವಿಶೇಷ ಪರಿಶೀಲನಾ ಸಭೆಗಳನ್ನು ನಡೆಸಬೇಕು. ನಾಗರಿಕರಿಂದ ಸ್ವೀಕರಿಸಿರುವ ಅರ್ಜಿಗಳು, ದೂರುಗಳು ಹಾಗೂ ಮನವಿಗಳನ್ನು ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಸೇವಾಸಿಂಧು ಕೇಂದ್ರಗಳ ಮೂಲಕ ಸಮಗ್ರವಾಗಿ ಪರಿಶೀಲಿಸಿ ಶೀಘ್ರ ವಿಲೇವಾರಿ ಮಾಡಬೇಕು ಎಂದು ಆದೇಶಿಸಲಾಗಿದೆ.
ಅಲ್ಲದೆ, ಐಪಿಜಿಆರ್‌ಎಸ್ ಪೋರ್ಟಲ್‌ನಲ್ಲಿ ದಾಖಲಾಗಿರುವ ದೂರುಗಳು ಹಾಗೂ 21 ದಿನಗಳಿಗಿಂತ ಹೆಚ್ಚು ಕಾಲ ಬಾಕಿ ಉಳಿದಿರುವ ಪ್ರಕರಣಗಳಿಗೆ ಆದ್ಯತೆ ನೀಡಿ ಇತ್ಯರ್ಥಗೊಳಿಸುವಂತೆ ಸೂಚಿಸಲಾಗಿದೆ.
ಜಿಲ್ಲಾಧಿಕಾರಿಗಳು, ಉಪ ವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರರು ಬೆಳಿಗ್ಗೆ ಮತ್ತು ಮಧ್ಯಾಹ್ನ ನಿಗದಿತ ವೇಳಾಪಟ್ಟಿಯಂತೆ ಜನಸ್ಪಂದನ ಸಭೆಗಳನ್ನು ನಡೆಸಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಅಭಿಯಾನದ ಅನುಷ್ಠಾನದ ಕುರಿತು ಎಲ್ಲಾ ಜಿಲ್ಲೆಗಳು ನಿಯಮಿತವಾಗಿ ಪ್ರಗತಿ ವರದಿ ಸಲ್ಲಿಸಬೇಕು ಎಂದು ಸರ್ಕಾರ ಸೂಚಿಸಿದೆ
*ಜಿಲ್ಲಾಧಿಕಾರಿಗಳು, ಉಪ ವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರರು ಬೆಳಿಗ್ಗೆ ಮತ್ತು ಮಧ್ಯಾಹ್ನ ನಿಗದಿತ ವೇಳಾಪಟ್ಟಿಯಂತೆ ಜನಸ್ಪಂದನ ಸಭೆಗಳನ್ನು ನಡೆಸಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.