ಇಂಡಿ ನಗರದ ಕಷಿ ಉಪ ನಿರ್ದೇಶಕರ ಕಚೇರಿಯ ಆವರಣದಲ್ಲಿ ಖೇತ ಬಚಾವೋ ಅಂದೋಲನದ ಜಾಗತಿ ಕಾರ್ಯಕ್ರಮದಲ್ಲಿ ಚಂದ್ರಕಾಂತ ಪವಾರ ಮಾತನಾಡಿದರು. ಮಲ್ಲಪ್ಪ ದೊಡಮನಿ, ಶಾಂತುಗೌಡ ಬಿರಾದಾರ, ಭೀಮಾಶಂಕರ ಹಿರೇಮಠ, ಕಾಶಿನಾಥ ತೇಲಿ, ರಾಮಣ್ನ ವಗ್ಗಿ, ಸುರೇಶ ಮಾಡಬಾಳ ಮತ್ತಿತರರಿದ್ದರು.
- ಕೃಷಿ ಉಪ ನಿರ್ದೇಶಕ ಚಂದ್ರಕಾಂತ ಪವಾರ ಸಲಹೆ
- ಖೇತ್ ಬಚಾವೋ ಆಂದೋಲನ
ಇಂಡಿ: ಮಣ್ಣಿನ ಆರೋಗ್ಯವನ್ನು ಕಾಪಾಡಿಕೊಂಡು ಕೃಷಿ ಉತ್ಪಾದಕತೆಯನ್ನು ಹೆಚ್ಚಿಸಿ ರೈತರು ಸಮತೋಲಿತ ರಸಗೊಬ್ಬರ ಬಳಕೆಗೆ ಆದ್ಯತೆ ನೀಡಬೇಕು ಎಂದು ಕೃಷಿ ಉಪ ನಿರ್ದೇಶಕ ಚಂದ್ರಕಾಂತ ಪವಾರ ಹೇಳಿದರು.
ನಗರದ ಕೃಷಿ ಉಪ ನಿರ್ದೇಶಕರ ಕಚೇರಿಯ ಆವರಣದಲ್ಲಿ ಕೇಂದ್ರ ಸರ್ಕಾರದ ಖೇತ ಬಚಾವೋ ಅಂದೋಲನದ ಅಂಗವಾಗಿ ಆಯೋಜಿಸಲಾದ ಸಮತೋಲಿತ ರಸಗೊಬ್ಬರ ಬಳಕೆ ಕುರಿತು ರೈತರ ಜಾಗತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕೃಷಿ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ಉತ್ಪಾದನಾ ವೆಚ್ಚ ಮಣ್ಣಿನ ಲವತ್ತತೆ ಕುಸಿತ ಹಾಗೂ ಪರಿಸರದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಗಟ್ಟಲು ವೈಜ್ಞಾನಿಕ ಹಾಗೂ ಸುಸ್ಥಿರ ಕೃಷಿ ಪದ್ದತಿಗಳನ್ನು ಅಳವಡಿಸಿಕೊಳ್ಳುವುದು ಇಂದಿನ ಅಗತ್ಯವಾಗಿದೆ ಎಂದರು.
ಸಹಾಯಕ ಕಷಿ ನಿರ್ದೇಶಕ ಮಹಾದೇವಪ್ಪ ಏವೂರ ಮಾತನಾಡಿ, ಮಣ್ಣಿನ ಆರೋಗ್ಯ ಸಂರಕ್ಷಣೆ ಹಾಗೂ ಸುಸ್ಥಿರ ಕಷಿಯನ್ನು ಉತ್ತೇಜಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ದೇಶಾದ್ಯಂತ ಖೇತ ಬಚಾವೋ ಅಭಿಯಾನವನ್ನು ಹಮ್ಮಿಕೊಂಡಿದೆ. ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯನ್ನು ನಿಯಂತ್ರಿಸುವುದು ನೈಸರ್ಗಿಕ ಕೃಷಿ ಪದ್ದತಿಗಳನ್ನು ಉತ್ತೇಜಿಸುವುದು ಹಾಗೂ ಮಣ್ಣು ಪರೀಕ್ಷೆ ಆಧಾರಿತ ಗೊಬ್ಬರ ಬಳಕೆಗೆ ಬಗ್ಗೆ ರೈತರಿಗೆ ಅರಿವು ಮೂಡಿಸುವುದು ಈ ಅಭಿಯಾನದ ಪ್ರಮುಖ ಗುರಿಯಾಗಿದೆ ಎಂದರು.
ಕಷಿ ಅಧಿಕಾರಿ ದಾನಪ್ಪ ಕತ್ನಳ್ಳಿ, ರೈತರು ಮಣ್ಣಿನ ಆರೋಗ್ಯ ಕಾರ್ಡ್‌ಗಳನ್ನು ಸಮರ್ಪಕವಾಗಿ ಬಳಸಿಕೊಂಡು ವೈಜ್ಞಾನಿಕ ಶಿಾರಸ್ಸುಗಳಂತೆ ಗೊಬ್ಬರ ಬಳಕೆ ಮಾಡುವಂತೆ ಕರೆ ನೀಡಿದರು. ಮಲ್ಲಪ್ಪ ದೊಡಮನಿ, ಶಾಂತುಗೌಡ ಬಿರಾದಾರ, ಭೀಮಾಶಂಕರ ಹಿರೇಮಠ, ಕಾಶಿನಾಥ ತೇಲಿ, ರಾಮಣ್ನ ವಗ್ಗಿ, ಸುರೇಶ ಮಾಡಬಾಳ, ಕಾಳಪ್ಪ ರೂಗಿ ಮತ್ತಿತರರಿದ್ದರು.