ಹುಮನಾಬಾದ್ನಲ್ಲಿ ಸೋಮವಾರ ಮಾಜಿ ಸಚಿವ ರಾಜಶೇಖರ ಪಾಟೀಲ್ ಅವರ ನಿವಾಸಕ್ಕೆ ಭೇಟಿ ನೀಡಿದ ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರನ್ನು ಮಾಜಿ ಸಚಿವ ರಾಜಶೇಖರ ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಪಾಟೀಲ್ ಹಾಗೂ ಭೀಮರಾವ ಪಾಟೀಲ್ ಕಂಬಳಿ ಹೊದಿಸಿ ಸನ್ಮಾನಿಸಿದರು. ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು.
ಹುಮನಾಬಾದ್: ಬೀದರ್ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಹಾಗೂ ಮುಚ್ಚಿರುವ ಬಿಎಸ್ಎಸ್ಕೆ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಪುನರಾರಂಭಿಸಲು ಸರ್ಕಾರದ ಮಟ್ಟದಲ್ಲಿ ಅಗತ್ಯ ಒತ್ತಡ ಹೇರುವಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಮಾಜಿ ಸಚಿವ ರಾಜಶೇಖರ ಪಾಟೀಲ್ ಮನವಿ ಮಾಡಿದರು.
ಪಟ್ಟಣದಲ್ಲಿ ಸೋಮವಾರ ಅವರನ್ನು ಸನ್ಮಾನಿಸಿ ಅವರೊಂದಿಗೆ ಚರ್ಚಿಸಿ ಹುಮನಾಬಾದ್ ವಿಧಾನಸಭಾ ಕ್ಷೇತ್ರ ಸೇರಿ ಜಿಲ್ಲೆಯಾದ್ಯಂತ ಮಳೆಯ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯನ್ನು ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸುವ ಅಗತ್ಯವಿದೆ ಎಂದು ಅವರು ತಿಳಿಸಿದರು.
ಬಿಎಸ್ಎಸ್ಕೆ ಸಹಕಾರ ಸಕ್ಕರೆ ಕಾರ್ಖಾನೆ ಸ್ಥಗಿತಗೊಂಡಿರುವುದರಿಂದ ಕಬ್ಬು ಬೆಳೆಗಾರರು ಮತ್ತು ಕಾರ್ಖಾನೆ ಕಾರ್ಮಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಆದ್ದರಿಂದ ಕಾರ್ಖಾನೆಯನ್ನು ಪುನರಾರಂಭಿಸುವುದು ಅಥವಾ ಲೀಸ್ಗೆ ನೀಡುವ ಕುರಿತು ಸರ್ಕಾರದಿಂದ ಶೀಘ್ರ ನಿರ್ಧಾರ ಕೈಗೊಳ್ಳುವಂತೆ ತಾವೂ ಸಹ ಸರ್ಕಾರದ ಮೇಲೆ ಒತ್ತಡ ತರಬೇಕೆಂದು ಮನವಿ ಮಾಡಿದರು.
ಈಗಗಾಲೇ ಮುಖ್ಯಮಂತ್ರಿ ಜಿಲ್ಲೆಗೆ ಆಗಮಿಸಿದಾಗ ಅವರಿಗೂ ಗಮನಕ್ಕೆ ತರುವ ಮೂಲಕ ಮನವಿ ಮಾಡಲಾಗಿದೆ ಎಂದು ತಿಳಿಸಿದರು. ಸಚಿವರು ಮನವಿಗೆ ಸ್ಪಂದಿಸಿ ಸರಕಾರದ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು.
ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಪಾಟೀಲ್, ಭೀಮರಾವ್ ಪಾಟೀಲ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಅಭಿಷೇಕ್ ಪಾಟೀಲ್, ಪಕ್ಷದ ರಾಜ್ಯ ಸಹಕಾರಿ ಘಟಕದ ಅಧ್ಯಕ್ಷ ಧನರಾಜ ತಾಳಂಪಳ್ಳಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಫ್ಸರ್ಮಿಯಾ, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಓಂಕಾರ ತುಂಬಾ, ಯುವ ಕಾಂಗ್ರೆಸ್ ಅಧ್ಯಕ್ಷ ಉಮೇಶ ಜಮಗಿ, ಜಿಪಂ ಮಾಜಿ ಅಧ್ಯಕ್ಷೆ ಭಾರತಬಾಯಿ ಶೇರಿಕಾರ, ಪ್ರಮುಖರಾದ ಸುಮಿತ್ರಾ ಪರೀಟ್, ಕಲಾವತಿ ರಜಪೂತ್, ಮುಕ್ರಮ್ ಜಾ, ಕಂಟೆಪ್ಪ ದಾನ, ಕೇಶಪ್ಪ ಬಿರಾದಾರ, ಅಶೋಕ ಸೊಂಡೆ, ಪ್ರಭು ತಾಳಮಡಗಿ, ಸತೀಶ ರಾಂಪುರೆ, ಅಶೋಕ ಚಳಕಾಪುರೆ, ಮಾಣಿಕ ಬೆಳಕೇರಾ, ಶಿವಾನಂದ ಕಟ್ಟಿಮನಿ, ರಾಹುಲ್ ಉದ್ದಾ, ಸೈಯದ್ ಯಾಸೀನ್, ಲಖನ ಕೋಳಿವಾಡ, ಸುರೇಶ ಘಾಂಗ್ರೆ, ತಾನಾಜಿ ಪಾಟೀಲ್, ವಿಠಲ್ ಡಾವರಗಾಂವ, ಜೈರಾಜ ವೈದ್ಯ, ವಿಜಯಕುಮಾರ ಬಾಸಪಳ್ಳಿ ಇತರರಿದ್ದರು.