ದೇವನಹಳ್ಳಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಪಾಲಕರು, ಶಿಕ್ಷಕರ ಮಹಾಸಭೆಯಲ್ಲಿ ವಿದ್ಯಾರ್ಥಿಗಳ ಜತೆಗೆ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಸಸಿ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾಲೇಜು ಪ್ರಾಂಶುಪಾಲ ಜಿ.ಎಂ.ನಂಜಪ್ಪ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಸಿ.ಭಾಸ್ಕರ್​, ಭಾನುಪ್ರಕಾಶ್​, ಗಣೇಶ್​, ಆಸೀಫ್​, ಜ್ಯೋತಿ, ಶಿಕ್ಷಕರಾದ ಮುಕ್ತಾಂಭ, ಎಂ.ಎಸ್​.ರುದ್ರಮುನಿ, ದೀಪಕ್​, ಕೆ.ಜೆ.ಶಿವಮೂರ್ತಿ ಇದ್ದರು.  
ರಾಜ್ಯ

ಮಕ್ಕಳ ಆರೋಗ್ಯಕ್ಕೂ ಆದ್ಯತೆ ನೀಡಿ / DEVANAHALLI

ದೇವನಹಳ್ಳಿ : ಸರ್ಕಾರಿ ಶಾಲಾ, ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣದ ಜತೆಗೆ ಮಕ್ಕಳ ಆರೋಗ್ಯಕ್ಕೂ ಆದ್ಯತೆ ನೀಡಿ ಎಂದು ಶಿಕ್ಷಣ ಇಲಾಖೆ ಪದವಿಪೂರ್ವ ಕಾಲೇಜುಗಳ ವಿಭಾಗದ ಉಪನಿರ್ದೇಶಕ ಎನ್​.ಮೋಹನಕುಮಾರ್​ ಹೇಳಿದರು.
ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಪಾಲಕರು ಹಾಗೂ ಶಿಕ್ಷಕರ ಮಹಾಸಭೆಯಲ್ಲಿ ಮಾತನಾಡಿದ ಅವರು, ಮಕ್ಕಳ ಶಿಕ್ಷಣದ ಗುಣಮಟ್ಟವ ಹೆಚ್ಚಿಸಲು ಹಾಗೂ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸರ್ಕಾರ ಹಲವು ಯೋಜನೆ ನೀಡುತ್ತಿದ್ದು, ಪಾಲಕರು ಸಭೆಗಳಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾಗಲಿದೆ. ಮಕ್ಕಳ ಕಲಿಕೆ, ಅವರು ಪಡೆದ ಅಂಕಗಳು ತಿಳಿಯುವುದಲ್ಲದೆ, ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಅಗತ್ಯ ಕ್ರಮ ಕೈಗೊಳ್ಳಲು ಪಾಲಕರಿಗೆ ಸಲಹೆ ಸೂಚನೆ ನೀಡಬಹುದಾಗಿದೆ ಎಂದರು.
ಎಸ್​ಡಿಎಂಸಿ ಅಧ್ಯಕ್ಷ ಎಸ್​.ಆರ್​.ಮುನಿರಾಜು ಮಾತನಾಡಿ, ಸರ್ಕಾರಿ ಶಾಲೆಗಳೆಂಬ ಕೀಳರಿಮೆ ಸಲ್ಲದು. ಉನ್ನತ ಸ್ಥಾನದಲ್ಲಿರುವ ಅಧಿಕಾರಿಗಳೆಲ್ಲರೂ ಸರ್ಕಾರಿ ಶಾಲೆಗಳಲ್ಲಿಯೇ ವಿದ್ಯಾಭ್ಯಾಸ ಮಾಡಿದವರಾಗಿದ್ದಾರೆ. ಆದರೆ ಇತ್ತೀಚೆಗೆ ಸರ್ಕಾರಿ ಶಾಲೆಗಳ ಹಾಜರಾತಿ ಕುಸಿಯುತ್ತಿದ್ದು, ಶಾಲೆಗಳ ಉಳಿವಿಗಾಗಿ ದಾಖಲಾತಿ ಆಂದೋಲನ ಆರಂಭಿಸಲಾಗಿದೆ. ಇದ್ಕಕೆ ಎಲ್ಲ ಪ್ರತಿಯೊಬ್ಬರ ಸಹಕಾರ ಅವಶ್ಯಕ ಎಂದು ಹೇಳಿದರು.