ಸುರಪುರ ತಾಲೂಕಿನ ಬಂಡೋಳ್ಳಿ ಗ್ರಾಮದಲ್ಲಿ ಸೋಮವಾರ ಕಸ್ತೂರಬಾ ಗಾಂಽ ಬಾಲಕಿಯರ ವಸತಿ ಶಾಲೆ ಕಟ್ಟಡಕ್ಕೆ ಶಾಸಕ ರಾಜಾ ವೇಣುಗೋಪಾಲ ನಾಯಕ ಭೂಮಿ ಪೂಜೆ ನೆರವೇರಿಸಿದರು. ರಾಜಶೇಖರಗೌಡ ವಜ್ಜಲ್, ವೆಂಕೋಬ ಯಾದವ, ಗುಂಡಪ್ಪ ಸೊಲ್ಲಾಪುರ, ಮಲ್ಲಣ್ಣ ಸಾಹುಕಾರ ಮುಧೋಳ, ಅಬ್ದುಲ್ ಗ-Áರ್ ನಗನೂರಿ ಸೇರಿ ಇತರರಿದ್ದರು. 
ರಾಜ್ಯ

ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಆದ್ಯತೆ

ಪ್ರಮುಖ ಮುಖ್ಯಾಂಶಗಳು

  • ಶಾಸಕ ರಾಜಾ ವೇಣುಗೋಪಾಲ ನಾಯಕ ಅಭಿಮತ
  • ಬಂಡೋಳ್ಳಿಯಲ್ಲಿ ಶಾಲಾ ಕಟ್ಟಡಕ್ಕೆ ಶಂಕುಸ್ಥಾಪನೆ
ಸುರಪುರ :

ಗ್ರಾಮೀಣ ಮಕ್ಕಳ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ಹೇಳಿದರು.

ತಾಲೂಕಿನ ಬಂಡೋಳ್ಳಿ ಗಾಮದಲ್ಲಿ ಸೋಮವಾರ ೩ ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಕಸ್ತೂರಬಾ ಗಾಂಽ ಬಾಲಕಿಯರ ವಿದ್ಯಾಲಯದ (ಟೈಪ್-೩) ವಸತಿ ಶಾಲಾ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಗ್ರಾಮೀಣ ಭಾಗದ ವಿದ್ಯಾರ್ಥಿನಿಯರಿಗೆ ಗುಣಮಟ್ಟದ ಶಿಕ್ಷಣದೊಂದಿಗೆ ಉತ್ತಮ ವಸತಿ ಸೌಲಭ್ಯ ಕಲ್ಪಿಸುವುದು ನಮ್ಮ ಆದ್ಯತೆಯಾಗಿದೆ. ಗ್ರಾಮೀಣ ಹೆಣ್ಣು ಮಕ್ಕಳ ಶೈಕ್ಷಣಿಗೆ ಪ್ರಗತಿಗೆ ಉತ್ತೇಜನ ನೀಡುವ ಉದ್ದೇಶದಿಂದ ಈ ಮಹತ್ವದ ಯೋಜನೆ ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು.
ನೂತನ ವಸತಿ ಶಾಲೆಯು ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ಪೂರಕ ವಾತಾವರಣ ಕಲ್ಪಿಸುವುದರ ಜತೆಗೆ ಆಧುನಿಕ ಸೌಲಭ್ಯ ಹೊಂದಿರಲಿದೆ. ಸುಮಾರು ೩ ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸುಸಜ್ಜಿತ ಕಟ್ಟಡ ಬಂಡೋಳ್ಳಿ ಸೇರಿ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿನಿಯರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.
ಈ ವೇಳೆ ರಾಜಶೇಖರಗೌಡ ವಜ್ಜಲ್, ವೆಂಕೋಬ ಯಾದವ, ಗುಂಡಪ್ಪ ಸೊಲ್ಲಾಪುರ, ಮಲ್ಲಣ್ಣ ಸಾಹುಕಾರ ಮುಧೋಳ, ಅಬ್ದುಲ್ ಗ-Áರ್ ನಗನೂರಿ ಸೇರಿ ಇತರರಿದ್ದರು.