ಬೆಂಗಳೂರು: ಇನ್ನೇನು ಕೆಲವೇ ದಿನಗಳಲ್ಲಿ ಬೆಳಕಿನ ಹಬ್ಬ ದೀಪಾವಳಿ ಪ್ರಾರಂಭವಾಗಲಿದ್ದು, ಸಾರ್ವಜನಿಕರು ಪರಿಸರ ಸ್ನೇಹಿ ಹಾಗೂ ಸುರಕ್ಷಿತ ರೀತಿಯಲ್ಲಿ ಹಬ್ಬವನ್ನು ಆಚರಿಸಲು ಅನುಕೂಲವಾಗುವಂತೆ ರಾಜ್ಯ ಪೊಲೀಸ್ ಇಲಾಖೆಯಿಂದ 19 ಅಂಶಗಳ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಮಾಲಿನ್ಯ ನಿಯಂತ್ರಣ, ಅಗ್ನಿ ಅವಘಡಗಳ ತಡೆ ಹಾಗೂ ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಪ್ರಮುಖ ಮಾರ್ಗದರ್ಶನಗಳನ್ನು ನೀಡಲಾಗಿದೆ.
1. ಹಸಿರು ಪಟಾಕಿಗಳನ್ನು ಖರೀದಿಸಿ, ಪರಿಸರ ಸ್ನೇಹಿ ದೀಪಾವಳಿಯನ್ನು ಆಚರಿಸಿ.
2. ಮಾನ್ಯ ಸರ್ವೋಚ್ಚ ನ್ಯಾಯಾಲಯದ ಆದೇಶದಲ್ಲಿ ಸೂಚಿಸಿರುವಂತೆ ನಿಗಧಿತ ಸಮಯದಲ್ಲಿ ಅಂದರೆ, ರಾತ್ರಿ 08.00 ರಿಂದ 10.00 ಗಂಟೆಯ ವರೆಗೆ ಮಾತ್ರ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ಪಟಾಕಿಗಳನ್ನು ಸಿಡಿಸುವುದು.
3. ಸಾರ್ವಜನಿಕ ಸೂಕ್ಷ್ಮ ಪುದೇಶಗಳಾದ ಆಸ್ಪತ್ರೆ, ಪೆಟ್ರೋಲ್ ಬಂಕ್, ಅನಿಲ ಕೇಂದ್ರಗಳು, ಧಾರ್ಮಿಕ ಸ್ಥಳಗಳು, ವೃದ್ಧಾಶ್ರಮ, ಶಿಶುಪಾಲನಾ ಕೇಂದ್ರಗಳ ಸುತ್ತ-ಮುತ್ತ ಪಟಾಕಿಗಳನ್ನು ಸಿಡಿಸದಂತೆ ನೋಡಿಕೊಳ್ಳುವುದು.
4. ಪಟಾಕಿ ಸಿಡಿಸುವ ಸಂದರ್ಭದಲ್ಲಿ ಕೈಗಳಿಗೆ ಗ್ಲೌಸ್ ಧರಿಸುವುದು, ಕಣ್ಣುಗಳಿಗೆ ಸುರಕ್ಷತಾ ಕನ್ನಡಕಗಳನ್ನು ಧರಿಸುವುದು ಹಾಗೂ ಅಗ್ನಿ ನಂದಿಸುವ ನೀರು, ಮರಳು, ಬೆಂಕಿ ನಂದಿಸುವ ಸಿಲಿಂಡರ್ ಗಳನ್ನು ಹತ್ತಿರದಲ್ಲಿ ಇಟ್ಟುಕೊಳ್ಳುವುದು.
5. ಪಟಾಕಿ ಸಿಡಿಸುವ ಸಂದರ್ಭದಲ್ಲಿ ಯಾವುದಾದರೂ ಅವಘಡಗಳು ಸಂಭವಿಸಿದಲ್ಲಿ ತಕ್ಷಣವೇ 112 ಹಾಗೂ 108 ಕ್ಕೆ ಸಂಪರ್ಕಿಸುವುದು ಹಾಗೂ ವೈದ್ಯರ ಸಲಹೆಯನ್ನು ಪಡೆದುಕೊಳ್ಳುವುದು.
6. ಪಟಾಕಿಗಳನ್ನು ಚಿಕ್ಕ ಮಕ್ಕಳು ಹಚ್ಚಲು ಅವಕಾಶ ಮಾಡಿಕೊಡಬೇಡಿ, ಚಿಕ್ಕ ಮಕ್ಕಳೊಂದಿಗೆ ಅವರ ಪೋಷಕರೂ ಸಹ ಜೊತೆಯಲ್ಲಿದ್ದು, ಸುರಕ್ಷಿತವಾಗಿ ಪಟಾಕಿ ಹಚ್ಚುವಂತೆ ಗಮನ ಹರಿಸಬೇಕು.
7. ಹೆಚ್ಚು ಶಬ್ದ ಬರುವಂತಹ ಪಟಾಕಿಗಳನ್ನು ಹಚ್ಚುವುದರಿಂದ ನೆರೆ-ಹೊರೆಯವರಲ್ಲಿರುವ ಹಿರಿಯ ನಾಗರೀಕರಿಗೆ, ಆನಾರೋಗ್ಯ ಪೀಡಿತರಿಗೆ, ವಿದ್ಯಾರ್ಥಿಗಳಿಗೆ ತೊಂದರೆಯಾಗುವ ಸಂಭವವಿರುವುದರಿಂದ ಈ ವಿಷಯವನ್ನು ಮನಗಂಡು ಕಡಿಮೆ ಶಬ್ದಬರುವ ಹಸಿರು ಪಟಾಕಿಗಳನ್ನೇ ಹಚ್ಚುವುದು ಸೂಕ್ತವಾಗಿರುತ್ತದೆ.
8. ಹಸಿರು ಪಟಾಕಿಗಳನ್ನು ಖರೀದಿಸುವಾಗ ಅದರ ಮೇಲಿರುವ QR ಕೋಡ್ ಸ್ಕ್ಯಾನ್ ಮಾಡಿ ಖಚಿತ ಪಡಿಸಿಕೊಂಡು ಖರೀದಿ ಮಾಡುವುದು.
9. ಉತ್ತಮ ಗುಣಮಟ್ಟದ ಪಟಾಕಿಗಳನ್ನು ಅಧಿಕೃತವಾಗಿ ಪರವಾನಿಗೆ ಪಡೆದ ಅಂಗಡಿ/ಮಳಿಗೆಗಳಿಂದ ಖರೀದಿಸಿ ಹಾಗೂ ಲೈಸನ್ಸಳನ್ನು ಅಂಗಡಿಗಳಲ್ಲಿ ಪುದರ್ಶಿಸಿರುವುದನ್ನು ಖಚಿತ ಪಡಿಸಿಕೊಂಡು ಪಟಾಕಿಗಳನ್ನು ಖರೀದಿಸುವುದು.
10. ದೀಪಾವಳಿ ಸಮಯದಲ್ಲಿ ಆನಧಿಕೃತವಾಗಿ ಕೆಲವೊಂದು ಅಂಗಡಿಗಳು ಪಟಾಕಿಗಳನ್ನು ಮಾರುತ್ತಿರುತ್ತಾರೆ. ಇಂತಹ ಅಂಗಡಿಗಳಿಂದ ಪಟಾಕಿಗಳನ್ನು ಖರೀದಿಸಬೇಡಿ ಹಾಗೂ ಅಕ್ರಮವಾಗಿ ಪಟಾಕಿಯನ್ನು ಮಾರಾಟ ಮಾಡುತ್ತಿರುವುದು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ಅಥವಾ 112 ಕರೆ ಮಾಡಿ ಮಾಹಿತಿ ನೀಡುವುದು.
11. ಅತಿ ಹೆಚ್ಚು ಶಬ್ದ ಹಾಗೂ ವಾಯುಮಾಲಿನ್ಯ ಉಂಟುಮಾಡುವ ನಿಷೇಧಿತ ಪಟಾಕಿಗಳನ್ನು ಖರೀದಿ ಮಾಡಬೇಡಿ.
12. ಜನನಿಬಿಡ ಪುದೇಶಗಳಲ್ಲಿ ಮುಖ್ಯ ರಸ್ತೆಗಳಲ್ಲಿ ಹಾಗೂ ವಾಹನಗಳನ್ನು ಪಾರ್ಕಿಂಗ್ ಮಾಡಿರುವ ಸ್ಥಳಗಳಲ್ಲಿ ಪಟಾಕಿಗಳನ್ನು ಸಿಡಿಸಬಾರದು.
13. ಪಟಾಕಿಗಳನ್ನು ತರದ ಮೈದಾನಗಳಲ್ಲಿ. ಜನಜಂಗುಳಿ ಕಡಿಮೆ ಇರುವ ಪುದೇಶಗಳಲ್ಲಿ ಸುರಕ್ಷಿತ ಕ್ರಮಗಳನ್ನು ಅನುಸರಿಸಿಕೊಂಡು ಪಟಾಕಿಗಳನ್ನು ಹಚ್ಚುವುದು ಒಳ್ಳೆಯ ಬೆಳವಣಿಗೆಯಾಗಿರುತ್ತದೆ.
14. ಪಟಾಕಿಗಳನ್ನು ಸಿಡಿಸುವಾಗ ಮೂಕ ಪ್ರಾಣಿಗಳಿಗೆ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸುವುದು.
15. ಪಟಾಕಿಗಳನ್ನು ಸಿಡಿಸುವಾಗ ಹೆಚ್ಚು ಜಾಗರೂಕರಾಗಿರಬೇಕು, ಪಟಾಕಿಗಳನ್ನು ನಂದಿಸುವ ಕೆಲಸವನ್ನು ಹಚ್ಚು ಎಚ್ಚರಿಕೆಯಿಂದ ಮಾಡಬೇಕು. ಬಳಸಿದ ಪಟಾಕಿಗಳನ್ನು ಬಕೇಟ್ ನಲ್ಲಿಟ್ಟು ಅದಕ್ಕೆ ಮರಳು ಅಥವಾ ನೀರನ್ನು ಹಾಕಿ ನಂದಿಸಬೇಕು.
16. ಪಟಾಕಿ ಹಚ್ಚುವ ವೇಳೆಯಲ್ಲಿ ಬಟ್ಟೆಗಳ ಮೇಲೆ ಹೆಚ್ಚು ಜಾಗರೂಕತೆಯಿಂದಿರಬೇಕು. ಈ ಸಮಯದಲ್ಲಿ ಹತ್ತಿಯ ಬಟ್ಟೆಯನ್ನು ಧರಿಸುವುದು ಉತ್ತಮ ಆದಷ್ಟು ಸಿಂಥಟೆಕ್, ನೈಲಾನ್, ಪಾಲಿಸ್ಟರ್ ಬಟ್ಟೆಗಳನ್ನು ಧರಿಸಬೇಡಿ.
17. ಕೈಯಲ್ಲಿ ಪಟಾಕಿಗಳನ್ನು ಹಿಡಿದು ಹಚ್ಚುವುದು ಅಪಾಯಕಾರಿ ದೇಹದ ಸೂಕ್ಷ್ಮ ಅಂಗಾಂಗಗಳಾದ ಕಿವಿ, ಕಣ್ಣು, ಬಾಯಿ, ಅಂಗಗಳ ಮೇಲೆ ಹೆಚ್ಚು ಗಮನವಿರಲಿ ಪಟಾಕಿ ಸಿಡಿಸುವ ಸಂದರ್ಭದಲ್ಲಿ ಪಥಮ ಚಿಕಿತ್ಸಾ ಪೆಟ್ಟಿಗೆಯನ್ನು ಹತ್ತಿರದಲ್ಲಿ ಇಟ್ಟುಕೊಳ್ಳುವುದು.
18. ಪಟಾಕಿ ಸಿಡಿಸಿದ ನಂತರ ಮೈದಾನ/ರಸ್ತೆಗಳು/ಮನ ಮುಂದಿನ ಅಂಗಳಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವುದು.
19. ಸರ್ಕಾರ, ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳು-ಆರೋಗ್ಯ ಇಲಾಖೆ, ಮಾಲಿನ್ಯ ನಿಯಂತ್ರಣಾ ಇಲಾಖೆಗಳಿಂದ ನೀಡಿರುವ ಆದೇಶಗಳು ಹಾಗೂ ಸಲಹಾ ಸೂಚನೆಗಳನ್ನು ಚಾಚು ತಪ್ಪದೇ ಪಾಲಿಸುವುದು.
ಪಟಾಕಿಯನ್ನು ಸಿಡಿಸಲು ಮಾನ್ಯ ಸುಪ್ರೀಂಕೋರ್ಟ್ ಹೊರಡಿಸಿರುವ ಆದೇಶದನ್ವಯ ಸರ್ಕಾರವು ಸಮಯವನ್ನು ನಿಗಧಿಪಡಿಸಿದ್ದು, ನಿಗಧಿತ ಅವಧಿ ಮೀರಿ ಪಟಾಕಿ ಸಿಡಿಸಿದಲ್ಲಿ ಪೊಲೀಸರು ಬಿಎನ್ಎಸ್ ಸ್ಪೋಟಕ ಕಾಯ್ದೆ, ಮಾಲಿನ್ಯ ನಿಯಂತ್ರಣ ಕಾಯ್ದೆಗಳ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ. ನಿಯಮಗಳನ್ನು ಉಲ್ಲಂಘಿಸಿ ಅಕ್ರಮವಾಗಿ ಪಟಾಕಿ ಸಿಡಿಸುವವರ ವಿರುದ್ಧ ಸಾರ್ವಜನಿಕರು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಬಹುದಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಿಲಾಗಿದೆ.