ಕನಕಪುರ ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಎಂ.ಸಂಜಯ್ ಧ್ವಜಾರೋಹಣ ನೆರವೇರಿಸಿದರು.  
ರಾಜ್ಯ

ನೀರಾವರಿ ಯೋಜನೆಗೆ ಆದ್ಯತೆ

ರೇಷ್ಮೆ ನಗರ ಡೆಸ್ಕ್

ದೇಶಭಕ್ತರ ತ್ಯಾಗ ಬಲಿದಾನದಿಂದ ಭಾರತಕ್ಕೆ ಸ್ವಾತಂತ್ರ್ಯ ಬಂದು 80 ವರ್ಷ ಸಂದಿದೆ. ಸ್ವಾತಂತ್ರ್ಯಾ ನಂತರ ದೇಶ ಶೈಕ್ಷಣಿಕ, ವೈಜ್ಞಾನಿಕವಾಗಿ ವಿಶ್ವವೇ ಗುರುತಿಸುವ ಹಂತಕ್ಕೆ ಅಭಿವೃದ್ಧಿ ಹೊಂದಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ರವಿ ತಿಳಿಸಿದರು.

ತಾಲೂಕು ಕ್ರೀಡಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸ್ವಾತಂತ್ರ್ಯ ದಿನದಲ್ಲಿ ಮಾತನಾಡಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ರಾಜ್ಯದ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಕೊಳ್ಳೇಗಾಲದ ಸತ್ತೇಗಾಲದಿಂದ ಜಿಲ್ಲೆಯ ತಾಲೂಕುಗಳ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಅವರ ಮುಂದಿದೆ ಎಂದರು. ತಹಸೀಲ್ದಾರ್ ಎಂ. ಸಂಜಯ್ ಧ್ವಜಾರೋಹಣ ನೆರವೇರಿಸಿದರು.
ಸ್ಥಳೀಯ ಪೊಲೀಸ್ ಹಾಗೂ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನದ ಬಳಿಕ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಕೆ.ಎನ್. ದಿಲೀಪ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಹರೀಶ್, ಬಿಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಎಂ.ಡಿ. ವಿಜಯದೇವ್, ಟಿಎಪಿಸಿಎಂಎಸ್ ಉಪಾಧ್ಯಕ್ಷ ಚಿಕ್ಕಣ್ಣ ಇತರರಿದ್ದರು.