ಹಳೆ ಉತ್ಪತ್ತನಹಳ್ಳಿಯ ಮಾರುತಿ ನಗರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಚ್.ಕೆ.ಸುರೇಶ್ ಭೂಮಿಪೂಜೆ ನೆರವೇರಿಸಿದರು. ಪುಟ್ಟರಾಜು, ನಾಗರಾಜು, ಮಂಜುನಾಥ್, ರವಿ ಇತರರಿದ್ದರು. 
ರಾಜ್ಯ

ಸುಗಮ ಸಂಚಾರಕ್ಕಾಗಿ ರಸ್ತೆ ಅಭಿವೃದ್ಧಿಗೆ ಆದ್ಯತೆ

ಅಭಿನಯ್ ಎಚ್.ಎಂ

ಪ್ರಮುಖ ಮುಖ್ಯಾಂಶಗಳು

  • ಸನ್ಯಾಸಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳೇ ಉತ್ಪತ್ತನಹಳ್ಳಿ
  • ಮಾರುತಿ ನಗರ ರಸ್ತೆ ಅಭಿವೃದ್ಧಿ ಕಾಮಗಾರಿ
ಬೇಲೂರು: ಎತ್ತಿನಹೊಳೆ ನೀರಾವರಿ ಯೋಜನೆಯಡಿ ತಾಲೂಕಿನ ಸನ್ಯಾಸಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳೇ ಉತ್ಪತ್ತನಹಳ್ಳಿಯ ಮಾರುತಿ ನಗರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಚ್.ಕೆ.ಸುರೇಶ್ ಗ್ರಾಮಸ್ಥರ ಸಮ್ಮುಖದಲ್ಲಿ ಭೂಮಿಪೂಜೆ ನೆರವೇರಿಸಿದರು.
ಸನ್ಯಾಸಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳ ಅಭಿವೃದ್ಧಿಗೆ ಈಗಾಗಲೇ 4ರಿಂದ 5 ಕೋಟಿ ರೂ. ವೆಚ್ಚದಲ್ಲಿ ಹಲವು ಕಾಮಗಾರಿ ಕೈಗೊಳ್ಳಲಾಗಿದೆ. ಅಲ್ಲದೆ ಈ ಗ್ರಾಮದ ಮೂಲಕ ರಾಜ್ಯ ಹೆದ್ದಾರಿ ಹಾದು ಹೋಗಿದ್ದು, ನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳು ಸಂಚರಿಸುತ್ತವೆ. ಗ್ರಾಮೀಣ ಪ್ರದೇಶಗಳ ಸಂಪರ್ಕ ರಸ್ತೆ ಸುಗಮವಾಗಬೇಕು, ಸಾರ್ವಜನಿಕರಿಗೆ ಸುರಕ್ಷಿತ ಸಂಚಾರ ವ್ಯವಸ್ಥೆ ಕಲ್ಪಿಸಬೇಕೆಂಬ ನಿಟ್ಟಿನ ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದರು.
ಇದೀಗ ಎತ್ತಿನಹೊಳೆ ನೀರಾವರಿ ಯೋಜನೆಯ ಅನುದಾನದಡಿ ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ಹಳೇ ಉತ್ಪತ್ತಿನಹಳ್ಳಿ ಮಾರುತಿ ನಗರ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ. ಸರ್ಕಾರದ ವಿವಿಧ ಯೋಜನೆಗಳ ಮೂಲಕ ಲಭ್ಯವಾಗುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಅಗತ್ಯವಿರುವ ಕಡೆಗಳಲ್ಲಿ ಮೂಲಸೌಕರ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಗ್ರಾಮದ ಪುಟ್ಟರಾಜು ಮಾತನಾಡಿ, ಶಾಸಕ ಎಚ್.ಕೆ.ಸುರೇಶ್ ಅವರು ಶಾಸಕರಾದ ನಂತರ ಈ ಭಾಗದ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿದ್ದಾರೆ ಎಂದರು.
ಹಳೆ ಉತ್ಪತ್ತನಹಳ್ಳಿ ಗ್ರಾಮದ ನಾಗರಾಜು, ಮಂಜುನಾಥ್, ರವಿ ಸೇರಿದಂತೆ ಇತರರಿದ್ದರು.