ಭಾಲ್ಕಿಯಯಲ್ಲಿ ಶುಕ್ರವಾರ ಗಂಗಾ ಕಲ್ಯಾಣ ಯೋಜನೆಯಡಿ ಫಲಾನುಭವಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮೋಟಾರ್​, ಪಂಪ್​ಸೆಟ್​ ವಿತರಿಸಿದರು. 
ರಾಜ್ಯ

ನೀರಾವರಿ ಸೌಲಭ್ಯ ವಿಸ್ತರಿಸಲು ಆದ್ಯತೆ

ಪ್ರಮುಖ ಮುಖ್ಯಾಂಶಗಳು

  • ಭಾಲ್ಕಿಯಲ್ಲಿ ಫಲಾನುಭವಿಗಳಿಗೆ ಮೋಟಾರ್​, ಪಂಪ್​ಸೆಟ್​ ವಿತರಣೆ
ಭಾಲ್ಕಿ: ರೈತರ ಆರ್ಥಿಕ ಪರಿಸ್ಥಿತಿ ಸುಧಾರಿಸಲು ನೀರಾವರಿ ಸೌಲಭ್ಯ ವಿಸ್ತರಿಸಲು ಆದ್ಯತೆ ನೀಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು. ಪಟ್ಟಣದಲ್ಲಿ ಗಂಗಾ ಕಲ್ಯಾಣ ಯೋಜನೆಯ ಫಲಾನುಭವಿಗಳಿಗೆ ಶುಕ್ರವಾರ ಮೋಟಾರ್​ ಮತ್ತು ಪಂಪಸೆಟ್​ ವಿತರಿಸಿ ಅವರು ಮಾತನಾಡಿದ ಅವರು, ರಾಜ್ಯ ಸರ್ಕಾರ ರೈತರ ಅಭಿವೃದ್ಧಿಗೆ ಹಾಗೂ ನೀರಾವರಿ ಸೌಲಭ್ಯ ವಿಸ್ತರಣೆಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಗಂಗಾ ಕಲ್ಯಾಣ ಯೋಜನೆಯ ಮೂಲಕ ಸಣ್ಣ ರೈತರಿಗೆ ನೀರಿನ ಸೌಲಭ್ಯ ಒದಗಿಸಿ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡಲಾಗುತ್ತಿದೆ. ಫಲಾನುಭವಿಗಳು ಈ ಸೌಲಭ್ಯವನ್ನು ಪಡೆದು ಉತ್ತಮ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು. ನೀರಾವರಿ ಸೌಲಭ್ಯವನ್ನು ಸಮರ್ಥವಾಗಿ ಬಳಸಿಕೊಂಡು ರೈತರು ವಿವಿಧ ಬೆಳೆಗಳನ್ನು ಬೆಳೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ತಿಳಿಸಿದರು. ನಿಗಮದ ಅಧಿಕಾರಿಗಳು, ಪ್ರಮುಖರು, ಫಲಾನುಭವಿಗಳು ಇದ್ದರು.