ದೇವನಹಳ್ಳಿ ತಾಲೂಕಿನ ಜಾಲಿಗೆ, ಕೊಯಿರಾ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಿಕ್ಕಬಳ್ಳಾಪುರ ಲೋಕಸಭಾ ಸದಸ್ಯ ಡಾ.ಕೆ.ಸುಧಾಕರ್ ಭೂಮಿಪೂಜೆ ನೆರವೇರಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ರಾಮಕೃಷ್ಣ, ಮಾಜಿ ಪ್ರಧಾನ ಕಾರ್ಯದರ್ಶಿ ಎಚ್.ಎಂ. ರವಿಕುಮಾರ್, ಹಾಲಿ ಪ್ರಧಾನ ಕಾರ್ಯದರ್ಶಿ ನಾಗವೇಣಿ, ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ವಿ. ಮಂಜುನಾಥ್ ಇತರರಿದ್ದರು.
ಕುಂದಾಣ : ಗ್ರಾಮೀಣ ಭಾಗದಲ್ಲಿ ರಸ್ತೆ, ಚರಂಡಿ ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ರೂಪಿಸುತ್ತಿದೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಸದಸ್ಯ ಡಾ.ಕೆ. ಸುಧಾಕರ್ ತಿಳಿಸಿದರು.
ದೇವನಹಳ್ಳಿ ತಾಲೂಕಿನ ಜಾಲಿಗೆ, ಕೊಯಿರಾ ಗ್ರಾಮದಲ್ಲಿ ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಪರಿಶಿಷ್ಟ ಜಾತಿ ವಸತಿ ಪ್ರದೇಶಗಳಲ್ಲಿ ರಸ್ತೆ ಅಭಿವೃದ್ಧಿಗಾಗಿ ಒತ್ತು ನೀಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಿಜೆಪಿ ಪಕ್ಷ$ವನ್ನು ಉತ್ತಮವಾಗಿ ಸಂಘಟಿಸುವಲ್ಲಿ ನಮ್ಮ ಕಾರ್ಯಕರ್ತರ ಪಾತ್ರ ಶ್ಲಾಂಘನೀಯ. ಕಾಮಗಾರಿಯಲ್ಲಿ ಗುಣಮಟ್ಟಕ್ಕೆ ಆದ್ಯತೆ ನೀಡುವಂತೆ ಗುತ್ತಿಗೆದಾರರಿಗೆ ಸೂಚಿಸಿದರು.
ಭೋವಿಪಾಳ್ಯದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ, ರಬ್ಬನಹಳ್ಳಿಯಲ್ಲಿ ಹೈಮಾಸ್ಟ್ ದೀಪ, ವಿಜಯಪುರ ಕ್ರಾಸ್ ಬಳಿ ಬಸ್ ತಂಗುದಾಣ ಸೇರಿದಂತೆ ವಿವಿಧ ಕಾಮಗಾರಿಗೆ ಚಾಲನೆ ನೀಡಲಾಯಿತು. ತಾಲೂಕು ಅಧ್ಯಕ್ಷ ಅಂಬರೀಷ್ ಗೌಡ, ಮಾಜಿ ಅಧ್ಯಕ್ಷ ಸುನೀಲ್, ಮುಖಂಡರಾದ ಜಾಲಿಗೆ ಪ್ರಶಾಂತ್, ಬಿ.ಕೆ.ನಾರಾಯಣಸ್ವಾಮಿ, ನಂಜೇಗೌಡ, ರಮೇಶ್ ಬಾಬು, ಮಹಿಳಾ ಘಟಕದ ಯಶೋಧಾ, ನಯನಾ, ಭಾಗ್ಯಮ್ಮ ಇತರರಿದ್ದರು.