ದಿಲೀಪ್ ರಾಜ್  
ರಾಜ್ಯ

47ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ನಿರ್ಮಾಪಕ ಮತ್ತು ನಟ ದಿಲೀಪ್ ರಾಜ್ ನಿಧನ | Dilip Raj

ಬೆಂಗಳೂರು: ಕನ್ನಡ ಕಿರುತೆರೆಯಲ್ಲಿ ಜನಪ್ರಿಯರಾಗಿದ್ದ ಸ್ಯಾಂಡಲ್​ವುಡ್ ನಟ ಮತ್ತು ನಿರ್ಮಾಪಕ ದಿಲೀಪ್ ರಾಜ್(actor Dilip Raj) ಇಂದು(ಮೇ 13) ಹೃದಯಾಘಾತದಿಂದ ನಿಧನರಾಗಿದ್ದಾರೆ. 
ದಿಲೀಪ್ ರಾಜ್​ ಅವರಿಗೆ 47 ವರ್ಷ ವಯಸ್ಸಾಗಿತ್ತು. ಇಂದು ಬೆಳಿಗ್ಗೆ ಮನೆಯಲ್ಲಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ತಪಾಸಣೆ ನಡೆಸಿದ ವೈದ್ಯರು ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಘೋಷಣೆ ಮಾಡಿದ್ದಾರೆ.
2005ರಲ್ಲಿ ಬಂದ ಬಾಯ್ ಫ್ರೆಂಡ್ ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ದಿಲೀಪ್ ರಾಜ್, ಮಿಲನ, ಟೋನಿ, ಪೊಲೀಸ್ ಕ್ವಾಟ್ರಸ್ ಸೇರಿದಂತೆ 20ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದಾರೆ. ಕಿರುತೆರೆಯಲ್ಲಿ ಹೆಚ್ಚು ಜನಪ್ರಿಯವಾಗಿದ್ದ ಅವರು, ಇತ್ತೀಚಿಗೆ ಜನಪ್ರಿಯವಾದ ಹಿಟ್ಲರ್ ಕಲ್ಯಾಣ ಧಾರಾವಾಹಿಯ ನಿರ್ಮಾಪಕರಾಗಿದ್ದು, ಅದರಲ್ಲಿ ನಟಿಸಿದ್ದರು.