ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ 
ರಾಜ್ಯ

ಸಂಗೀತ ವಿವಿ ಕುಲಪತಿಯಾಗಿ ಪ್ರೊ. ರಾಮಕೃಷ್ಣಯ್ಯ ನೇಮಕ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಪ್ರದರ್ಶನ ಕಲೆ ವಿಭಾಗದ ಮುಖ್ಯಸ್ಥ ಪ್ರೊ. ಕೆ. ರಾಮಕೃಷ್ಣಯ್ಯ ಅವರನ್ನು ಮೈಸೂರಿನ ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಕುಲಪತಿಯನ್ನಾಗಿ ನೇಮಿಸಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.
ಮುಂದಿನ ನಾಲ್ಕು ವರ್ಷಗಳ ಅವಧಿಗೆ ಕುಲಪತಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.
ಹಿಂದಿನ ಕುಲಪತಿ ಪ್ರೊ. ನಾಗೇಶ್ ವಿ. ಬೆಟ್ಟಕೋಟೆ ಅವರ ಅವಧಿಯು 2025ರಜನವರಿಯಲ್ಲಿಯೇ ಮುಕ್ತಾಯವಾಗಿತ್ತು. ಬಳಿಕೆ ಎರಡು ಬಾರಿ ತಲಾ 6 ತಿಂಗಳ ಅವಧಿಗೆ ಮುಂದುವರಿಸಲಾಗಿತ್ತು.