ಹೊಸಕೋಟೆಯಲ್ಲಿ ಹಮ್ಮಿಕೊಂಡಿದ್ದ ಗಾಣಿಗ ಸಂದ 4ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಸಮುದಾಯದ ಸಾಧಕರಿಗೆ, ನಿವೃತ್ತರಿಗೆ ಶಾಸಕ ಶರತ್​ ಬಚ್ಚೇಗೌಡ, ಶ್ರೀ ಪೂರ್ಣಾನಂದಪುರಿ ಸ್ವಾಮೀಜಿ ಸನ್ಮಾನಿಸಿದರು. 
ರಾಜ್ಯ

ಸಾಕ್ಷರತೆಯಿಂದಲೇ ಹಿಂದುಳಿದ ವರ್ಗಗಳ ಪ್ರಗತಿ / HOSAKOTE

ಬೆಂಗಳೂರು ಗ್ರಾಮಾಂತರ ಡೆಸ್ಕ್
ಹೊಸಕೋಟೆ : ಸಮುದಾಯದ ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಮೂಲಕ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಜನಾಂಗದ ಹೆಸರನ್ನು ಎತ್ತರಕ್ಕೆ ಕೊಂಡ್ಯೊಯ್ಯ ಬೇಕು ಎಂದು ಶಾಸಕ ಶರತ್​ ಬಚ್ಚೇಗೌಡ ಕಿವಿಮಾತು ಹೇಳಿದರು.
ನಗರದ ಖಾಸಗಿ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಗಾಣಿಗ ಸಂದ 4ನೇ ವಾರ್ಷಿಕೋತ್ಸವ, ಸಮುದಾಯದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಮಾಜದ ಅಭಿವೃದ್ಧಿಗೆ ಶಿಕ್ಷಣ, ಸಂಟನೆ ಹಾಗೂ ರಾಜಕೀಯ ಪ್ರಾತಿನಿಧ್ಯ ಅತ್ಯಂತ ಅಗತ್ಯ. ಗಾಣಿಗ ಸಮುದಾಯಕ್ಕೆ ಸೂಕ್ತ ರಾಜಕೀಯ ಅವಕಾಶ ಕಲ್ಪಿಸಲು ಗ್ರಾಪಂ, ತಾಪಂ, ಜಿಪಂ ಹಾಗೂ ನಗರಸಭೆ ಚುನಾವಣೆಗಳಲ್ಲಿ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಲು ಕ್ರಮವಹಿಸಲಾಗುವುದು. ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸುವ ಮೂಲಕ ಮುಂದಿನ ಪೀಳಿಗೆಯನ್ನು ಪೋತ್ಸಾಹಿಸುವ ಕಾರ್ಯ ಶ್ಲಾನೀಯ. ಹಿಂದುಳಿದ ವರ್ಗಗಳ ಸಣ್ಣ ಸಮುದಾಯಗಳಿಗೂ ರಾಜಕೀಯದಲ್ಲಿ ಧ್ವನಿ ಸಿಗಬೇಕು. ಸಮಾಜದ ಆಶೋತ್ತರಗಳನ್ನು ಪ್ರತಿನಿಧಿಸುವ ನಾಯಕರನ್ನು ಬೆಳೆಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.
ಕಳೆದ ವರ್ಷ ಸಮುದಾಯ ಸಲ್ಲಿಸಿದ್ದ ಮನವಿಯಂತೆ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ 40 ಲಕ್ಷ ರೂ. ವೆಚ್ಚದಲ್ಲಿ ಗಾಣಿಗ ಸಮುದಾಯದ ರುದ್ರಭೂಮಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. ಸಮುದಾಯ ಭವನ ನಿರ್ಮಾಣಕ್ಕೆ ಜಾಗ ಒದಗಿಸುವ ಕುರಿತು ಸಹ ಸಮಾಜದ ಮುಖಂಡರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಶಾಸಕರು ತಿಳಿಸಿದರು.
ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೇಶವಮೂರ್ತಿ, ಬಿಡಿಸಿಸಿ ಬ್ಯಾಂಕ್​ ಉಪಾಧ್ಯಕ್ಷ ಕೃಷ್ಣಮೂರ್ತಿ, ಹಿರಿಯ ಮುಖಂಡ ರಾಜ್​ ಕುಮಾರ್​ ಹಾಗೂ ತಾಲೂಕು ಸಂದ ಪದಾಧಿಕಾರಿಗಳು ಇದ್ದರು.
ರಾಜಕೀಯ ಪ್ರಾತಿನಿಧ್ಯ ಅಗತ್ಯ : ನೆಲಮಂಗಲದ ಶ್ರೀೇತ್ರ ತೈಲೇಶ್ವರ ಗಾಣಿಗ ಮಹಾಸಂಸ್ಥಾನ ಮಠದ ಪೀಠಾಧಿಪತಿ ಶ್ರೀ ಪೂರ್ಣಾನಂದಪುರಿ ಸ್ವಾಮೀಜಿ ಮಾತನಾಡಿ, ಗಾಣಿಗರು ಸೌಕರ್ಯ ಇರುವಕಡೆ ನೆಲೆಸುವ ಹಿಂದುಳಿದ ಸಮುದಾಯವಾಗಿದ್ದು, ಶಿಕ್ಷಣ, ಸಂಟನೆ ಹಾಗೂ ಸಂಸ್ಕಾರಕ್ಕೆ ಶಾಸಕರು ಆದ್ಯತೆ ನೀಡಬೇಕು. ಸಮಾಜದ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ಆಡಳಿತ, ರಾಜಕೀಯ ಹಾಗೂ ವಿವಿಧ ೇತ್ರಗಳಲ್ಲಿ ಸಾಧನೆ ಮಾಡುವ ಮೂಲಕ ಸಮುದಾಯದ ಹೆಸರನ್ನು ಎತ್ತರಕ್ಕೆ ಕೊಂಡೊಯ್ಯಬೇಕು. ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ಸಿಗುವುದು ಅತ್ಯಗತ್ಯವಾಗಿದ್ದು, ಜನಪ್ರತಿನಿಧಿಗಳು ಈ ನಿಟ್ಟಿನಲ್ಲಿ ಸಹಕಾರ ನೀಡಬೇಕು ಎಂದರು.