Protest against anti-farmer attitude on 9th 
ರಾಜ್ಯ

9ರಂದು ರೈತ ವಿರೋಧಿ ಧೋರಣೆ ಖಂಡಿಸಿ ಪ್ರತಿಭಟನೆ

ತುರುವೇಕೆರೆ: ರಾಜ್ಯ ಸರ್ಕಾರದ ರೈತ ವಿರೋಧಿ ಧೋರಣೆ ಖಂಡಿಸಿ ವಾ.9ರಂದು ತುಮಕೂರು ಜಿಲ್ಲಾ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಹಸಿರು ಸೇನೆ ಸಂಚಾಲಕ ಕೆ.ಎಸ್.ಆನಂದ್ ಪಟೇಲ್ ತಿಳಿಸಿದರು.
ಪಟ್ಟಣದ ಎಪಿಎಂಸಿ ಆವರಣದಲ್ಲಿ ಸುದ್ದಿಗಾರರೊಂದಿಗೆ ವಾತನಾಡಿದ ಅವರು, ಜಿಲ್ಲೆಯಲ್ಲಿ ರೈತರು ನಾನಾ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಮುಖ್ಯವಾಗಿ ರೈತರ ಜಮೀನಿಗೆ ಕೆರೆಗಳಲ್ಲಿನ ಮಣ್ಣು ತುಂಬಲು ಸರ್ಕಾರ ಅವಕಾಶ ವಾಡಿಕೊಡದೆ ಅಧಿಕಾರಿಗಳು ರೈತರ ಮೇಲೆ ದಬ್ಬಾಳಿಕೆ ವಾಡುತ್ತಿದ್ದಾರೆ ಎಂದು ಆರೋಪಿಸಿದರು.
ಜಿಲ್ಲಾಧ್ಯಕ್ಷ ಕೆ.ಎಸ್.ಧನಂಜಯಾರಾದ್ಯ ವಾತನಾಡಿ, ಅರಣ್ಯ ಪ್ರದೇಶದಲ್ಲಿ ಕೃಷಿ ವಾಡುತ್ತಿರುವ ರೈತರನ್ನು ಭೂಮಿಯಿಂದ ಒಕ್ಕಲೆಬ್ಬಿಸಬಾರದು. ಭದ್ರಾ ಮೇಲ್ದಂಡೆ, ಎತ್ತಿನ ಹೊಳೆ, ಹೇವಾವತಿ ನೀರಿನ ಯೋಜನೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಕೆರೆಕಟ್ಟೆಗಳಿಗೆ ನೀರೊದಗಿಸಬೇಕು. ನಗರ ವ್ಯಾಪ್ತಿಯಲ್ಲಿ ಸಾಗುವಳಿ ವಾಡಿಕೊಂಡು ಬಂದಿರುವ ರೈತರಿಗೆ ಮಂಜೂರು ವಾಡಿಕೊಡಬೇಕು ಎಂದು ಒತ್ತಾಯಿಸಿದರು.
ಚಿನಾ ಹಳ್ಳಿ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನಯ್ಯ, ಹಸಿರು ಸೇನೆ ಅಧ್ಯಕ್ಷ ನಾಗಣ್ಣ, ಪ್ರಧಾನ ಕಾರ್ಯದರ್ಶಿ ಬಾಳೇಗೌಡ್ರು, ತೋಂಟಾರಾದ್ಯ, ಮಹಿಳಾ ಅಧ್ಯಕ್ಷೆ ರೇಣುಕಮ್ಮ ಇದ್ದರು.