ಶಹಾಪುರದಲ್ಲಿ ಶನಿವಾರ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮದಲ್ಲಿ ಶಾಸಕ ಶರಣಬಸಪ್ಪ ದರ್ಶನಾಪುರ ಸಾರ್ವಜನಿಕರ ಅರ್ಜಿಗಳನ್ನು ಸ್ವೀಕರಿಸಿದರು. ಡಿಸಿ ರಾಹುಲ್ ಪಾಂಡ್ವೆ, ಎಡಿಸಿ ರಮೇಶ ಕೋಲಾರ ಇತರರಿದ್ದರು. 
ರಾಜ್ಯ

ಸ್ಥಳದಲ್ಲಿಯೇ ಸಮಸ್ಯೆಗೆ ಪರಿಹಾರ ಕಲ್ಪಿಸಿ

ಚನ್ನಬಸಯ್ಯ ಗುರುವಿನ
ಶಹಾಪುರ: ಜನರ ಸಮಸ್ಯೆಯನ್ನು ಅಧಿಕಾರಿಗಳು ಹಾಗೂ ಜನಪ್ರತಿನಿಽಗಳು ಒಗ್ಗೂಡಿ, ಸಾಧ್ಯವಾದಷ್ಟು ಶೀಘ್ರವಾಗಿ ಸ್ಥಳದಲ್ಲಿಯೇ ಇತ್ಯರ್ಥಪಡಿಸಬೇಕು ಎಂದು ಶಾಸಕ ಶರಣಬಸಪ್ಪ ದರ್ಶನಾಪುರ ಅಽಕಾರಿಗಳಿಗೆ ಸೂಚನೆ ನೀಡಿದರು.
ನಗರದ ಆರಬೋಳ ಕಲ್ಯಾಣ ಮಂಟಪದಲ್ಲಿ ಶನಿವಾರ ನಡೆದ ತಾಲೂಕು ಮಟ್ಟದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅವಽಯಲ್ಲಿ ನಡೆದ ಜನಸಂಪರ್ಕ ಸಭೆಗಳ ಆಶಯವನ್ನು ಮುಂದುವರೆಸಿಕೊಂಡು ಪ್ರಜಾಸೇವಾ ಆಂದೋಲನ ರೂಪಿಸಲಾಗಿದೆ ಎಂದರು. ಜನರು ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಸರ್ಕಾರಿ ಕಚೇರಿಗಳಿಗೆ ಪದೇಪದೆ ಅಲೆದಾಡುವ ಪರಿಸ್ಥಿತಿ ತಪ್ಪಬೇಕು. ಅಽಕಾರಿಗಳು ಜನರ ಬಳಿಗೆ ತೆರಳಿ ಅವರ ಅಹವಾಲು ಆಲಿಸಿ, ಸಾಧ್ಯವಾದಷ್ಟು ಸ್ಥಳೀಯ ಮಟ್ಟದಲ್ಲಿಯೇ ಪರಿಹಾರ ಕಲ್ಪಿಸಬೇಕು ಎಂದು ಹೇಳಿದರು.
ಅಗತ್ಯವಿರುವ ಪ್ರಕರಣಗಳನ್ನು ಜಿಲ್ಲಾಮಟ್ಟಕ್ಕೆ ಹಾಗೂ ಬೆಂಗಳೂರಿನ ಸಂಬAಧಪಟ್ಟ ಇಲಾಖೆಗಳ ಗಮನಕ್ಕೆ ಕೊಂಡೊಯ್ದು ಇತ್ಯರ್ಥಪಡಿಸುವ ಕಾರ್ಯ ನಡೆಯಲಿದೆ. ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ನಗರಸಭೆ ಸೇರಿ ವಿವಿಧ ಇಲಾಖೆಗಳ ಅಽಕಾರಿಗಳು ಹಾಗೂ ಜನಪ್ರತಿನಿಽಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಸಾರ್ವಜನಿಕರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಅವರು ಸೂಚಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಮುಖರು

ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ, ಅಪರ ಜಿಲ್ಲಾಧಿಕಾರಿ ರಮೇಶ ಕೋಲಾರ್, ಸಹಾಯಕ ಆಯುಕ್ತ ಶ್ರೀಧರ ಗೋಟೂರ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ರತೇಂದ್ರನಾಥ್ ಸೂಗೂರ, ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಶರಣಪ್ಪ ಪಾಟೀಲ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ಸೋಮಶೇಖರ ಬಿರಾದಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ ಬಿರಾದಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ಚನ್ನಬಸಪ್ಪ ಮುಧೋಳ್, ಪಶುಸಂಗೋಪನೆ ಇಲಾಖೆ ಉಪ ನಿರ್ದೇಶಕ ಡಾ. ರಾಜಶೇಖರ್ ಖಾಸಬಾಗ, ಶಹಾಪುರ ನಗರ ಯೋಜನಾ ಪ್ರಾಽಕಾರದ ಅಧ್ಯಕ್ಷ ಸಿದ್ದಪ್ಪ ಸಾಹು ಆರಗೋಳ, ತಹಸೀಲ್ದಾರ್ ಸಿದ್ದಾರೂಢ ಬನ್ನಿಕೊಪ್ಪ, ತಾಪಂ ಕಾರ್ಯನಿರ್ವಾಹಕ ಅಽಕಾರಿ ಬಸವರಾಜ ಶರಬೈ, ನಗರಸಭೆ ಪೌರಾಯುಕ್ತ ಜೀವನ್ ಕಟ್ಟಿಮನಿ ಸೇರಿ ಅನೇಕರು ಭಾಗವಹಿಸಿದ್ದರು.

ಸಚಿವರ ಗೈರುಹಾಜರಿ-ಅರ್ಜಿದಾರರಲ್ಲಿ ನಿರಾಸೆ

ತಾಲೂಕು ಮಟ್ಟದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಆಗಮಿಸಲಿದ್ದಾರೆ ಎಂಬ ನಿರೀಕ್ಷೆಯಲ್ಲಿ ಹಲವು ಅರ್ಜಿದಾರರು ತಮ್ಮ ಸಮಸ್ಯೆಯನ್ನು ಸಚಿವರ ಗಮನಕ್ಕೆ ತಂದು ಪರಿಹಾರ ಪಡೆಯುವ ಆಶಯದಿಂದ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಆದರೆ ಸಚಿವರು ಕಾರ್ಯಕ್ರಮಕ್ಕೆ ಗೈರುಹಾಜರಾದ ಹಿನ್ನೆಲೆಯಲ್ಲಿ ಅವರೊಂದಿಗೆ ನೇರವಾಗಿ ಸಮಸ್ಯೆಗಳನ್ನು ಚರ್ಚಿಸಿ ಪರಿಹಾರ ಪಡೆಯುವ ನಿರೀಕ್ಷೆಯಲ್ಲಿದ್ದ ಕೆಲ ಅರ್ಜಿದಾರರಲ್ಲಿ ನಿರಾಸೆ ಮೂಡಿತು.