ಬೆಳೆ ನಷ್ಟಕ್ಕೊಳಗಾದ Parameshwara ರೈತರಿಗೆ ಎಕರೆಗೆ 40ರಿಂದ 50 ಸಾವಿರದವರೆಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಡಿಸಿಎಂ ಡಾ.ಜಿ.ಪರಮೇಶ್ವರಗೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮನವಿ ಸಲ್ಲಿಸಿದರು. ರೈತ ಸಂಘದ ಮಲ್ಲಪ್ಪ, ರಾಜಣ್ಣ, ನಾರಾಯಣ ನಾಯ್ಕ, ಚಿತ್ತಯ್ಯ, ಸದಾಶಿವಪ್ಪ ಇದ್ದರು. 
ರಾಜ್ಯ

ಎಕರೆಗೆ 50 ಸಾವಿರ ಪರಿಹಾರ ನೀಡಿ Parameshwara

ಪ್ರಮುಖ ಮುಖ್ಯಾಂಶಗಳು

  • ರಾಜ್ಯ ರೈತ ಸಂಘ, ಹಸಿರು ಸೇನೆಯಿಂದ ಡಿಸಿಎಂಗೆ ಮನವಿ

ಪಾವಗಡ:

ಮಧುಗಿರಿ, ಕೊರಟಗೆರೆ, ಪಾವಗಡ ಹಾಗೂ ಶಿರಾ ತಾಲೂಕುಗಳನ್ನು ತಕ್ಷಣ

Parameshwara

ಬರಪೀಡಿತ ಪ್ರದೇಶವೆಂದು ಘೋಷಿಸಿ, ಬೆಳೆ ನಷ್ಟಕ್ಕೊಳಗಾದ ರೈತರಿಗೆ ಎಕರೆಗೆ 40ರಿಂದ 50 ಸಾವಿರದವರೆಗೆ ಪರಿಹಾರ ನೀಡಬೇಕೆಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಒತ್ತಾಯಿಸಿ ಬರ ಪರಿಸ್ಥಿತಿ ಪರಿಶೀಲನೆ ಹಾಗೂ ರೈತರ ಸಮಸ್ಯೆ ಆಲಿಸಲು ತಾಲೂಕಿಗೆ ಭೇಟಿ ನೀಡಿದ್ದ ಡಿಸಿಎಂ ಡಾ.ಜಿ.ಪರಮೇಶ್ವರ ಅವರಿಗೆ ಮನವಿ ಸಲ್ಲಿಸಿದರು.

ರೈತ ಸಂಘದ ತುಮಕೂರು ಜಿಲ್ಲಾ ಅಧ್ಯಕ್ಷ ಪೂಜಾರಪ್ಪ ಮಾತನಾಡಿ, ಪ್ರಸ್ತುತ ಸಾಲಿನಲ್ಲಿ ಅಲ್ಪ ಪ್ರಮಾಣದ ಮಳೆಯಾದ ಹಿನ್ನೆಲೆಯಲ್ಲಿ ರೈತರು ಸಾಲ ಮಾಡಿ ಜಮೀನು ಉಳುಮೆ ಮಾಡಿ ಶೇಂಗಾ, ತೊಗರಿ, ಜೋಳ, ರಾಗಿ ಸೇರಿ ವಿವಿಧ ಬೆಳೆಗಳನ್ನು ಬಿತ್ತಿದ್ದರು. ಆದರೆ ಬಿತ್ತನೆ ಬಳಿಕ ಮಳೆ ಕೈಕೊಟ್ಟ ಪರಿಣಾಮ ಬೆಳೆಗಳು ಒಣಗಿ ನಷ್ಟವಾಗಿವೆ.
ಸಣ್ಣ ಮತ್ತು ಅತಿಸಣ್ಣ ರೈತರು ಬೆಳೆ ನಷ್ಟದ ಜತೆಗೆ ಸಾಲದ ಹೊರೆಗೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ತಿಳಿಸಿದರು. ಕಳೆದ ಮೂರ್ನಾಲ್ಕು ದಶಕಗಳಿಂದ ಈ ಭಾಗದಲ್ಲಿ ಸಮರ್ಪಕ ಮಳೆಯಾಗದೆ ಪದೇಪದೆ ಬರ ಪರಿಸ್ಥಿತಿ ಎದುರಾಗುತ್ತಿದೆ. ಆದ್ದರಿಂದ ಬೆಳೆ ನಷ್ಟದ ಸಮರ್ಪಕ ಸಮೀಕ್ಷೆ ನಡೆಸಿ ತಕ್ಷಣ ಪರಿಹಾರ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.