ಚಿಟಗುಪ್ಪ ತಾಲೂಕಿನ ಉಡಬಾಳ ಗ್ರಾಮದಲ್ಲಿ ವಿಬಿ&ಜಿ- ರಾಮ್- ಜಿ ಯೋಜನೆಯಡಿ ನಡೆಯುತ್ತಿರುವ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಮಂಗಳವಾರ ಜಿಪಂ ಸಿಇಒ ಡಾ. ಗಿರೀಶ್ ಬದೋಲೆ ಭೇಟಿ ನೀಡಿ ಪರಿಶೀಲಿಸಿ ಜಾಬ್ ಕಾರ್ಡ್ ಮೇಳಕ್ಕೆ ಚಾಲನೆ ನೀಡಿದರು. ಅಧಿಕಾರಿಗಳಾದ ಜಯಪ್ರಕಾಶ ಚವ್ಹಾಣ್, ದೀಪಕ ಕಡಿಮನಿ, ಲಿಂಗರಾಜ ಪಾಟೀಲ್, ಸುದೇಶ್ ಕೊಡ್ಡೆ, ಸವಿತಾ ಇತರರಿದ್ದರು.
ಚಿಟಗುಪ್ಪ: ವಿಬಿ-ಜಿ- ರಾಮ್- ಜಿ ಯೋಜನೆಯಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಕೂಲಿ ಕಾರ್ಮಿಕರಿಗೆ ನಿರಂತರವಾಗಿ ಕೆಲಸ ಒದಗಿಸುವಂತೆ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಗಿರೀಶ್ ಬದೋಲೆ ಸೂಚಿಸಿದರು.
ತಾಲೂಕಿನ ಉಡಬಾಳ ಗ್ರಾಮದಿಂದ ಬನ್ನಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಬದಿಯಲ್ಲಿ ವಿಬಿ&ಜಿ -ರಾಮ್ -ಜಿ ಯೋಜನೆಯಡಿ ನಡೆಯುತ್ತಿರುವ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಜಾಬ್ ಕಾರ್ಡ್ ಮೇಳಕ್ಕೆ ಚಾಲನೆ ನೀಡಿ ಮಾತನಾಡಿ, ಯೋಜನೆಯಡಿ ಪ್ರತಿ ಕುಟುಂಬಕ್ಕೆ ವರ್ಷಕ್ಕೆ 125 ದಿನಗಳ ಕೂಲಿ ಕೆಲಸ ನೀಡಲಾಗುತ್ತಿದೆ. ಪ್ರತಿ ಕಾರ್ಮಿಕರಿಗೆ ದಿನಕ್ಕೆ 382 ರೂ.ಕೂಲಿ ಪಾವತಿಸಲಾಗುತ್ತಿದ್ದು, ಅರ್ಹ ಕಾರ್ಮಿಕರು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಅರ್ಹ ಕಾರ್ಮಿಕರಿಗೆ ನಿರಂತರವಾಗಿ ಕೆಲಸ ದೊರೆಯುವಂತೆ ಕ್ರಮವಹಿಸಬೇಕು ಎಂದು ಅಭಿವೃದ್ಧಿ ಅಧಿಕಾರಿ ಹಾಗೂ ತಾಂತ್ರಿಕ ಸಹಾಯಕರಿಗೆ ಸೂಚಿಸಿದರು.
ಸಹಾಯಕ ಕಾರ್ಯದರ್ಶಿ (ಅಭಿವೃದ್ಧಿ) ಜಯಪ್ರಕಾಶ ಚವ್ಹಾಣ್ ಎಡಿಪಿಸಿ ದೀಪಕ ಕಡಿಮನಿ, ಕಾರ್ಯನಿರ್ವಹಣಾಧಿಕಾರಿ ಲಿಂಗರಾಜ ಪಾಟೀಲ್, ಸಹಾಯಕ ನಿರ್ದೇಶಕ (ವಿಬಿ&ಜಿ- ರಾಮ್- ಜಿ) ಸುದೇಶ್ ಕೊಡ್ಡೆ, ಅಭಿವೃದ್ಧಿ ಅಧಿಕಾರಿ ಸವಿತಾ, ಐಇಸಿ ಸಂಯೋಜಕ ವಿಶ್ವನಾಥ, ಬಿಎಫ್ಟಿ ರಜನೀಕಾಂತ ವಮಾರ್ ಇತರರಿದ್ದರು. ಸುಮಾರು 25 ಕೂಲಿ ಕಾರ್ಮಿಕರಿಗೆ ಹೊಸ ಜಾಬ್ ಕಾರ್ಡ್ಗಳನ್ನು ವಿತರಿಸಲಾಯಿತು.