ಮಾಳಹಳ್ಳಿ ಗ್ರಾಮದ ಮಾಳಿಂಗರಾಯ ದೇವಸ್ಥಾನ ಅಭಿವೃದ್ಧಿಗೆ ಅನುದಾನ ನೀಡುವಂತೆ ಅರ್ಚಕ ಕೆಂಚರಾಯ ಪೂಜಾರಿ ಅವರು ಇತ್ತೀಚೆಗೆ ಬೆಂಗಳೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಭೇಟಿ ಮಾಡಿ ಮನವಿ ಸಲ್ಲಿಸಿದರು. ರಾಜಕುಮಾರ ಇದ್ದರು.
- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅರ್ಚಕ ಕೆಂಚರಾಯ ಪೂಜಾರಿ ಮನವಿ
ಕೆಂಭಾವಿ: ಇತಿಹಾಸ ಪ್ರಸಿದ್ಧ ಮಾಳಹಳ್ಳಿ ಗ್ರಾಮದ ಮಾಳಿಂಗರಾಯ ದೇವಸ್ಥಾನದ ಅಭಿವೃದ್ಧಿಗೆ ಅನುದಾನ ನೀಡುವಂತೆ ಅರ್ಚಕ ಕೆಂಚರಾಯ ಪೂಜಾರಿ ಅವರು ಇತ್ತೀಚೆಗೆ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಕಾವೇರಿ ನಿವಾಸದಲ್ಲಿ ಅವರನ್ನು ಭೇಟಿ ಮಾಡಿದ ಪೂಜಾರಿ ಅವರು, ರಾಜ್ಯಲ್ಲಿ ಅಹಿಂದ ವರ್ಗಗಳ ಏಳಿಗೆಗಾಗಿ ಸದಾ ಶ್ರಮಿಸುತ್ತಿರುವ ತಾವು, ಶೋಶಿತ ಸಮುದಾಯಗಳ ಹಕ್ಕುಗಳ ಪರವಾಗಿ ಸದಾ ಧ್ವನಿ ಎತ್ತಿ ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ರಾಜಕೀಯ ಜೀವನ ನಿರಂತರ ಮುಂದುವರೆಯಲಿ ಹಾರೈಸಿರು.
ಸಮಾಜದಲ್ಲಿ ಸಮಾನತೆ, ಸಮ ಸಮಾಜ ನಿರ್ಮಾಣ, ಸಾಮಾಜಿಕ ನ್ಯಾಯ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ನಿಮ್ಮ ಸರ್ಕಾರ ಕೈಗೊಂಡಿರುವ ಕ್ರಮ ಮತ್ತಷ್ಟು ಪರಣಾಮಕಾರಿಯಾಗಿ ಮುಂದುವರೆಯಲಿ ಆಶಯ ವ್ಯಕ್ತಪಡಿಸಿದರು.
ಈ ವೇಳೆ ವಿಧಾನಸಭೆ ಚುನಾವಣೆ ಸಮಯದಲ್ಲಿ ಮಾಳಹಳ್ಳಿಗೆ ಗ್ರಾಮಕ್ಕೆ ಸಿದ್ದರಾಮಯ್ಯ ಅವರು ಭೇಟಿ ನೀಡಿದ್ದನ್ನು ಅವರ ಗಮನಕ್ಕೆ ತಂದರು. ಅಲ್ಲದೆ ದೇವಸ್ಥಾನದ ಅಭಿವೃದ್ಧಿಗೆ ಅನುದಾನ ನೀಡುವಂತೆ ಮನವಿ ಮಾಡಿದರು. ರಾಜಕುಮಾರ ಇದ್ದರು.