ಪಾಲಕರಿಗೆ ಸೌಲಭ್ಯಗಳ ಮಾಹಿತಿ ನೀಡಿ parents
ಬಂಗಾರಪೇಟೆ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ತಾಲೂಕಿನ ಎಲ್ಲ ವಿದ್ಯಾರ್ಥಿಗಳು ಕಡ್ಡಾಯವಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ದಾಖಲಾಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೆ.ಶಶಿಕಲಾ ಹೇಳಿದರು. parents
ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸರ್ಕಾರಿ ಪ್ರೌಢಶಾಲೆಗಳ ಮುಖ್ಯಶಿಕ್ಷಕರ ಸಭೆಯಲ್ಲಿ ಮಾತನಾಡಿ, ಶಿಕ್ಷಕರು ಸರ್ಕಾರಿ ಕಾಲೇಜುಗಳಲ್ಲಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿ ಪಾಲಕರ ಮನವೊಲಿಸಬೇಕು. ಸರ್ಕಾರಿ ಶಾಲಾ-&ಕಾಲೇಜುಗಳು ಸಮಾಜದ ಆಸ್ತಿ. ಈ ಸಂಸ್ಥೆ ಬಲಪಡಿಸುವ ಮೂಲಕ ಬಡ ಮತ್ತು ಮಧ್ಯಮ ವರ್ಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ತಲುಪಿಸಲು ಸಾಧ್ಯ ಎಂದು ಹೇಳಿದರು.
ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುಬ್ರಹ್ಮಣ್ಯಂ ಮಾತನಾಡಿ, ಖಾಸಗಿ ಕಾಲೇಜುಗಳ ದುಬಾರಿ ಶುಲ್ಕದ ಹೊರೆ ಇರುವುದಿಲ್ಲ. ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಇದು ಪ್ರಧಾನವಾಗಿದ್ದು, ಸರ್ಕಾರಿ ಕಾಲೇಜುಗಳಲ್ಲಿ ಕೆಪಿಎಸ್ಸಿ ಮೂಲಕ ಆಯ್ಕೆಯಾದ ಅತ್ಯಂತ ನುರಿತ ಮತ್ತು ಹೆಚ್ಚಿನ ಅರ್ಹತೆ ಹೊಂದಿದ ಉಪನ್ಯಾಸಕರಿದ್ದು, ಸರ್ಕಾರದಿಂದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ನೀಡಲಾಗುತ್ತದೆ ಎಂದು ಹೇಳಿದರು.
ಕ್ಷೇತ್ರ ಸಮನ್ವಯಾಧಿಕಾರಿ ಎಂ.ಎಸ್.ನಾರಾಯಣಸ್ವಾಮಿ ಮಾತನಾಡಿ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಇಂದು ಸರ್ಕಾರಿ ಶಾಲಾ-&ಕಾಲೇಜುಗಳ ವಿದ್ಯಾರ್ಥಿಗಳೇ ಹೆಚ್ಚು ಸಂಖ್ಯೆಯಲ್ಲಿ ಆಯ್ಕೆಯಾಗುತ್ತಿದ್ದಾರೆ. ದಾಖಲಾತಿ ಹೆಚ್ಚಿಸುವ ಆತ್ಮಸ್ಥೆ$ರ್ಯ ಮತ್ತು ಮನಸ್ಥಿತಿ ಶಿಕ್ಷಕರಲ್ಲಿ ಬರಬೇಕು ಎಂದು ಕಿವಿಮಾತು ಹೇಳಿದರು.
ಗಿರಿಯಪ್ಪ, ಹನುಮಂತ ವಗ್ಗರ್, ಕೃಷ್ಣಾರೆಡ್ಡಿ ಇತರರು ಇದ್ದರು.