Provide minimum wage, job security
ಚಿಕ್ಕಬಳ್ಳಾಪುರ: ರಾಜ್ಯ ಹಾಸ್ಟೆಲ್, ವಸತಿ ಶಾಲೆ ನೌಕರರಿಗೆ ಕನಿಷ್ಠ ವೇತನ, ಸೇವಾ ಭದ್ರತೆ ಸೇರಿ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಹಾಸ್ಟೆಲ್, ವಸತಿ ಶಾಲೆ ಹೊರ ಗುತ್ತಿಗೆ ನೌಕರರ ಸಂ ಪ್ರತಿಭಟಿಸಿತು.
ಉಪ ವಿಭಾಗಾಧಿಕಾರಿ ಡಿ.ಎಚ್.ಅಶ್ವಿನ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರ್ಮಿಕ ಸಚಿವ ಸಂತೋಷ್ ಲಾಡ್ಗೆ ಮನವಿ ಸಲ್ಲಿಸಲಾಯಿತು.
15 ವರ್ಷಗಳಿಂದಲೂ ವಸತಿ ಶಾಲೆಯಲ್ಲಿ ಅಡುಗೆ ಸಹಾಯಕ, ಸ್ವಚ್ಛತಗಾರರು, ಶಿಕ್ಷಕರು, ಅಂಟೆಂಡರ್, ಕಂಪ್ಯೂಟರ್ ಆಪರೇಟರ್ ಸೇರಿ ದಿನಗೂಲಿ ನೌಕರರು ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ ಯಾವುದೇ ಸೇವಾ ಭದ್ರತೆ ಇಲ್ಲ. ಸವಲತ್ತುಗಳು ಸಮರ್ಪಕವಾಗಿ ಸಿಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಸಂದ ರಾಜ್ಯ ಉಪಾಧ್ಯಕ್ಷ ಕೆ.ಮುನಿಯಪ್ಪ, ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಬಿ.ಎನ್.ಮುನಿಕೃಷ್ಣಪ್ಪ, ಮುಖಂಡರಾದ ನಾಗರತ್ನಮ್ಮ, ಲಕ್ಷ$್ಮಯ್ಯ, ರಾಮಪ್ಪ, ವೆಂಕಟಲಕ್ಷ$್ಮಮ್ಮ, ಭಾಗ್ಯಮ್ಮ, ಸುಶೀಲಮ್ಮ, ಎನ್.ಮಂಜುನಾಥ್ ಮತ್ತಿತರರು ಇದ್ದರು.