ಹುಮನಾಬಾದ್ ಕೃಷಿ ಇಲಾಖೆಯ ಕಚೇರಿಯಲ್ಲಿ ಗುರುವಾರ ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆಣೆ ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್ ಚಾಲನೆ ನೀಡಿದರು. ಪ್ರಮುಖರಾದ ವಿಶ್ವನಾಥ ಪಾಟೀಲ್, ಸತೀಶ ನನ್ನೂರೆ, ಕೆ.ಎಂ ಗಜೇಂದ್ರ, ಗಿರೀಶ ಪಾಟೀಲ್, ಸೂರ್ಯಕಾಂತ ಬಿರಾದಾರ, ಅನೀಲ ಪಸರ್ಗಿ ಇತರರಿದ್ದರು.
- ಅಧಿಕಾರಿಗಳಿಗೆ ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ ಸೂಚನೆ
- ಹುಮನಾಬಾದ್ನಲ್ಲಿ ವಿತರಣೆ ಚಾಲನೆ
ಹುಮನಾಬಾದ್: ತಾಲೂಕಿನಲ್ಲಿ ಯಾವುದೇ ರೈತರಿಗೆ ಬೀಜಗಳ ಕೊರತೆ ಉಂಟಾಗದಂತೆ ನೋಡಿಕೊಳ್ಳುವ ಜತಗೆ ಸಮರ್ಪಕವಾಗಿ ವಿತರಣೆ ಮಾಡಬೇಕೆಂದು ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್ ಹೇಳಿದರು.
ಪಟ್ಟಣದ ಕೃಷಿ ಇಲಾಖೆಯ ಕಚೇರಿಯಲ್ಲಿ ಗುರುವಾರ ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ರೈತರಿಗೆ ವಿತರಿಸಲಾಗುವ ಬಿತ್ತನೆ ಬೀಜಗಳ ಗುಣಮಟ್ಟವನ್ನು ಸಮರ್ಪಕವಾಗಿ ಪರಿಶೀಲಿಸಿ, ಉತ್ತಮ ಗುಣಮಟ್ಟದ ಬೀಜಗಳನ್ನು ಮಾತ್ರ ಪೂರೈಸುವಂತೆ ಹಾಗೂ ರೈತರ ಬೇಡಿಕೆಗೆ ಅನುಗುಣವಾಗಿ ಅಗತ್ಯ ಪ್ರಮಾಣದಲ್ಲಿ ಬೀಜಗಳನ್ನು ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಮುಂಗಾರು ಹಂಗಾಮಿನಲ್ಲಿ ರೈತರು ವೈಜ್ಞಾನಿಕ ಪದ್ಧತಿಯಲ್ಲಿ ಕೃಷಿ ಕೈಗೊಂಡು ಉತ್ತಮ ಇಳುವರಿ ಪಡೆಯಬೇಕು. ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ರೈತರಿಗೆ ಕರೆ ನೀಡಿದರು.
ಕೃಷಿ ನಿರ್ದೇಶಕ ಸೂರ್ಯಕಾಂತ ಬಿರಾದಾರ, ಕೃಷಿಕ ಸಮಾಜದ ತಾಲೂಕು ಅಧ್ಯಕ್ಷ ವಿಶ್ವನಾಥ ಪಾಟೀಲ್ ಮಾಡಗೂಳ, ಸದಸ್ಯರಾದ ಸತೀಶ ನನ್ನೂರೆ, ಗಿರೀಶ ಪಾಟೀಲ್, ಕಲ್ಲಪ್ಪ ಇಟಗಿ, ಪ್ರಮುಖರಾದ ಕೆ.ಎಂ.ಗಜೇಂದ್ರ, ಮಲ್ಲಿಕಾರ್ಜುನ ಸೀಗಿ, ಅನೀಲ ಪಸರ್ಗಿ, ಗೌತಮ ಸೆಡೋಳ ಇತರರಿದ್ದರು. ಸಹಾಯಕ ಕೃಷಿ ನಿರ್ದೇಶಕ ಶರಣಕುಮಾರ ಕಲ್ಯಾಣಿ ಸ್ವಾಗತಿಸಿದರು.