photo 
ರಾಜ್ಯ

ಫೆಬ್ರವರಿ 23ರಂದು ಸಾರ್ವಜನಿಕರ ಅಭಿಪ್ರಾಯ ಸಂಗ್ರಹಣಾ ಸಭೆ

ಪ್ರಮುಖ ಮುಖ್ಯಾಂಶಗಳು

  • ಜೆಸ್ಕಾಂ ವಿದ್ಯುತ್ ದರ ಪರಿಷ್ಕರಣೆ
ಕಲಬುರಗಿ,
-ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿಯು (ಜೆಸ್ಕಾಂ) ಆರ್ಥಿಕ ವರ್ಷ 2024-25ನೇ ಸಾಲಿಗೆ ವಿದ್ಯುತ್ ದರ ಪರಿಷ್ಕರಿಸಬೇಕೆಂದು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆ.ಇ.ಆರ್.ಸಿ.)ಕ್ಕೆ ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ 2024-25ನೇ ಸಾಲಿನ ವಿದ್ಯುತ್ ದರ ಪರಿಷ್ಕರಣೆ ಕುರಿತು ಸಾರ್ವಜನಿಕರ ಅಭಿಪ್ರಾಯ ಸಂಗ್ರಹಣಾ ಸಭೆಯು 2026ರ ಫೆಬ್ರವರಿ 23 ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣ/ ಕೋರ್ಟ್ ಹಾಲ್‍ದಲ್ಲಿ ಜರುಗಲಿದೆ.
ವಿದ್ಯುತ್ ದರ ಪರಿಷ್ಕರಣೆಗೆ ಸಂಬಂಧಿಸಿದಂತೆ ನಡೆಯುವ ಈ ಸಭೆಗೆ ಆಸಕ್ತ ವ್ಯಕ್ತಿಗಳು, ಸಂಘ-ಸಂಸ್ಥೆಗಳು ಮತ್ತು ಇತರೆ ಸಾರ್ವಜನಿಕರು ಆಗಮಿಸಿ ತಮ್ಮ ಅಭಿಪ್ರಾಯಗಳನ್ನು ಮೌಖಿಕವಾಗಿ ಅಥವಾ ಲಿಖಿತ ರೂಪದಲ್ಲಿ ಆಯೋಗದ ಮುಂದೆ ಮಂಡಿಸಬಹುದಾಗಿದೆ ಎಂದು ಗುಲಬರ್ಗಾ ಜೆಸ್ಕಾಂ ಕಾರ್ಯಾಚರಣೆ (ವಿದ್ಯುಚ್ಛಕ್ತಿ) ಮುಖ್ಯ ಅಭಿಯಂತರರು ತಿಳಿಸಿದ್ದಾರೆ.