Public, please cooperate with the SI. 
ರಾಜ್ಯ

ಎಸ್​ಐಆರ್​ಗೆ ಸಾರ್ವಜನಿಕರು ಸಹಕರಿಸಿ

ತುಮಕೂರು ಡೆಸ್ಕ್
ಗುಬ್ಬಿ: ಮತದಾರರ ಸಮಗ್ರ ಪರಿಷ್ಕರಣೆ ಬಗ್ಗೆ ಸಾರ್ವಜನಿಕರಲ್ಲಿ ವ್ಯಾಪಕ ಅರಿವು ಮೂಡಿಸುವ ಉದ್ದೇಶದಿಂದ ತಾಲೂಕು ಪಂಚಾಯಿತಿ, ತಾಲೂಕು ಸ್ವೀಪ್​ ಸಮಿತಿ ಹಾಗೂ ಎಂ.ಎಚ್​.ಪಟ್ಟಣ ಗ್ರಾಪಂನಿಂದ ಮುದಿಗೆರೆಯಲ್ಲಿ ಕಾಲ್ನಡಿಗೆ ಜಾಥಾ ಆಯೋಜಿಸಲಾಗಿತ್ತು.
ಎಂ.ಎಚ್​.ಪಟ್ಟಣ ಗ್ರಾಪಂ ಪಿಡಿಒ ಕೆ.ಎಂ.ಶೇಖರ್​ ಮಾತನಾಡಿ, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ&2026ರ ಅಂಗವಾಗಿ ಜುಲೈ 29ರವರೆಗೆ ಬೂತ್​ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಪ್ರತಿಯೊಬ್ಬ ಮತದಾರರಿಗೆ ಗಣತಿ ನಮೂನೆಯನ್ನು ಎರಡು ಪ್ರತಿಗಳಲ್ಲಿ ವಿತರಿಸಿ, ಭರ್ತಿ ಮಾಡಿದ ನಮೂನೆಗಳನ್ನು ಮರಳಿ ಸ್ವೀಕರಿಸಲಿದ್ದಾರೆ. ಈ ಕಾರ್ಯ ಯಶಸ್ವಿಯಾಗಲು ಸಾರ್ವಜನಿಕರು ಅಗತ್ಯ ಮಾಹಿತಿ ನೀಡಿ ಸಂಪೂರ್ಣ ಸಹಕಾರ ನೀಡುವಂತೆ ಮನವಿ ಮಾಡಿದರು.
ಪ್ರಜಾಪ್ರಭುತ್ವದ ಯಶಸ್ಸಿಗೆ ಮತದಾರರ ಪಟ್ಟಿಯು ಅತ್ಯಂತ ಮೂಲ ದಾಖಲೆ. ಪ್ರತಿಯೊಬ್ಬ ಅರ್ಹ ನಾಗರಿಕರ ಹೆಸರು ಮತದಾರರ ಪಟ್ಟಿಯಲ್ಲಿ ಕಡ್ಡಾಯವಾಗಿ ಇರಬೇಕು. ಅದೇ ರೀತಿ ಅನರ್ಹ ಅಥವಾ ನಕಲಿ ಹೆಸರು ಪಟ್ಟಿಯಲ್ಲಿ ಉಳಿಯದಂತೆ ನೋಡಿಕೊಳ್ಳುವುದು ಪ್ರಮುಖ ಉದ್ದೇಶ. ಈ ನಿಟ್ಟಿನಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುವುದು. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.