5 ದಿನ ಮಳೆ  
ರಾಜ್ಯ

ರಾಜ್ಯದ ಹಲವೆಡೆ ಮಳೆ: ಹವಾಮಾನ ಇಲಾಖೆ ಮಾಹಿತಿ- thunderstorm Rain

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಮುಂದಿನ 5 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ಕೊಟ್ಟಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮುಂದಿನ 2 ದಿನ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ಬೆಂಗಳೂರು ನಗರ, ಬೆಂ. ಗ್ರಾಮಾಂತರ, ಬೆಂ.ದಕ್ಷಿಣ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರದಲ್ಲಿ ಮೇ 8 ಮತ್ತು ಮೇ 12ರಂದು ಬಿರುಸಾಗಿ ವರ್ಷಧಾರೆಯಾಗಲಿದೆ.
ಧಾರವಾಡ, ಗದಗ, ಹಾವೇರಿಯಲ್ಲಿ ಮುಂದಿನ 5 ದಿನ ಮತ್ತು ಕೊಪ್ಪಳ, ರಾಯಚೂರಿನಲ್ಲಿ ಮುಂದಿನ 2 ದಿನ ಸಾಧಾರಣ ಮಳೆ ಸುರಿಯಲಿದೆ. ಈ ವೇಳೆ ಕೆಲ ಜಿಲ್ಲೆಗಳಲ್ಲಿ ಪ್ರತಿ ಗಂಟೆಗೆ 40 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಇಲಾಖೆ, ಯೆಲ್ಲೋ ಅಲರ್ಟ್ ಎಚ್ಚರಿಕೆ ಕೊಟ್ಟಿದೆ.ರಾಜ್ಯದಲ್ಲೆಡೆ ಮುಂದಿನ 5 ದಿನ ಗರಿಷ್ಠ ತಾಪಮಾನದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.