ರಾಜ್ಯ ಬರಗಾಲ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಬೇಕು ಮತ್ತು ರೈತರ ಸಾಲಮನ್ನಾ ಮಾಡಬೇಕು ಎಂಬುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಶುಕ್ರವಾರ ಜಿಲ್ಲಾಽಕಾರಿಗೆ ಮನವಿಪತ್ರ ಸಲ್ಲಿಸಿದರು. ಎಚ್. ಆರ್. ಬಡಿಗೇರ, ಮಂಜುಗೌಡ ತಂಗಡಗಿ, ಭೀಮನಗೌಡ ಹುಲಕಲ್, ಸಂಗು -Àತ್ತೇಪುರ, ಮಾಳಪ್ಪ ಭೋಸಗಿ ಮಹೇಶ ಕ್ಯಾತನಾಳ ಇತರರಿದ್ದರು.
- ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಒತ್ತಾಯ
ಕೆಂಭಾವಿ: ಕರ್ನಾಟಕ ರಾಜ್ಯವನ್ನು ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಬೇಕು ಮತ್ತು ರೈತರ ಸಾಲ ಮನ್ನಾ ಮಾಡಿ ಮೇವು ಬ್ಯಾಂಕ್ ತೆರಯಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಗ್ರಹಿಸಿದೆ.
ಈ ಕುರಿತು ಶುಕ್ರವಾರ ಸಿಎಂಗೆ ಬರೆದ ಮನವಿಪತ್ರವನ್ನು ಜಿಲ್ಲಾಽಕಾರಿಗಳಿಗೆ ಸಲ್ಲಿಸಿರುವ ರೈತ ಸಂಘದ ಪದಾಽಕಾರಿಗಳು, ರಾಜ್ಯದಲ್ಲಿ ಅದರಲ್ಲೂ ವಿಶೇಷವಾಗಿ ಕಲ್ಯಾಣ ಕರ್ನಾಟಕ ಮತ್ತು ಮುಂಬೈ ಕರ್ನಾಟಕದ ಹಲವು ಭಾಗಗಳಲ್ಲಿ ಸಕಾಲಕ್ಕೆ ಮಳೆ ಬಾರದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಈಗಾಗಲೇ ಬಿತ್ತನೆ ಮಾಡಿದ ಹತ್ತಿ, ತೊಗರಿ ಸೇರಿ ಹಲವು ಮುಂಗಾರು ಬೆಳೆಗಳು ಸಂಪೂರ್ಣ ಒಣಗುವ ಹಂತಕ್ಕೆ ತಲುಪಿದ್ದು ಜನಜಾನುವಾರುಗಳಿಗೆ ನೀರಿನ ಅಭಾವ ತಲೆದೋರುವ ಎಲ್ಲ ಲಕ್ಷಣ ಗೋಚರಿಸುತ್ತಿವೆ. ಕಾರಣ ಸರ್ಕಾರ ಈ ಬಗ್ಗೆ ನಿರ್ಧಾರ ಕೈಗೊಂಡು ರೈತರ ಹಿತ ಕಾಪಾಡಬೇಕು ಎಂದು ರೈತ ಸಂಘ ಆಗ್ರಹಿಸಿದೆ. ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಕಾರ್ಯದರ್ಶಿ ಎಚ್. ಆರ್. ಬಡಿಗೇರ, ಮಂಜುಗೌಡ ತಂಗಡಗಿ, ಭೀಮನಗೌಡ ಹುಲಕಲ್, ಸಂಗು -Àತ್ತೇಪೂರ, ಮಾಳಪ್ಪ ಭೋಸಗಿ ಮಹೇಶ ಕ್ಯಾತನಾಳ ಇದ್ದರು.