ಮುಧೋಳ ನಗರದ ಬಿವಿವಿ ಸಂಘದ ಕ್ಯಾಂಪಸ್ ಆವರಣದಲ್ಲಿ ನೂತನವಾಗಿ ಆರಂಭಿಸಲಾದ ಪಂಜಾಬ್ ನ್ಯಾಷನಲ್ ಬ್ಯಾಂಕ್ ಶಾಖೆಯನ್ನು ಡಾ. ವೀರಣ್ಣ ಚರಂತಿಮಠ ಉದ್ಘಾಟಿಸಿದರು. ವಿಭಾಗೀಯ ಅಧಿಕಾರಿ ಆನಂದಕುಮಾರ್, ಸೂರ್ಯಮನಿ ಶಾಹು ಇತರರಿದ್ದರು.
- ಡಾ. ವೀರಣ್ಣ ಚರಂತಿಮಠ ಮೆಚ್ಚುಗೆ
- ಪಂಜಾಬ್ ನ್ಯಾಷನಲ್ ಬ್ಯಾಂಕ್ ಶಾಖೆ ಉದ್ಘಾಟನೆ
ಮುಧೋಳ: ರನ್ನ ನಾಡು ಮುಧೋಳವು ವ್ಯಾಪಾರ ವಹಿವಾಟಿನಲ್ಲಿ ಅಭಿವೃದ್ಧಿಯತ್ತ ಸಾಗುತ್ತಿದೆ ಮಾಜಿ ಶಾಸಕ ಡಾ. ವೀರಣ್ಣ ಚರಂತಿಮಠ ಮೆಚ್ಚುಗೆ ವ್ಯಕ್ತಪಡಿಸಿದರು.
ನಗರದ ಮಂಟೂರ ರಸ್ತೆಯಲ್ಲಿರುವ ಬಿವಿವಿ ಸಂಘದ ಕ್ಯಾಂಪಸ್ ಆವರಣದಲ್ಲಿ ಶುಕ್ರವಾರ ನೂತನವಾಗಿ ಆರಂಭಿಸಲಾದ ಪಂಜಾಬ್ ನ್ಯಾಷನಲ್ ಬ್ಯಾಂಕ್ ಶಾಖೆಯನ್ನು ಸಂಸ್ಥೆ ಕಾರ್ಯಾಧ್ಯಕ್ಷ ಡಾ. ವೀರಣ್ಣ ಚರಂತಿಮಠ ಉದ್ಘಾಟಿಸಿ ಮಾತನಾಡಿದರು.
ವಿಭಾಗೀಯ ಅಧಿಕಾರಿ ಆನಂದಕುಮಾರ್ ಮಾತನಾಡಿ, ಬ್ಯಾಂಕ್ ಗ್ರಾಹಕರ ಅನುಕೂಲಕ್ಕೆ ತಕ್ಕಂತೆ ಸಾಲದ ಸೌಲಭ್ಯಗಳನ್ನು ಒದಗಿಸುತ್ತಿದೆ. ಸಹಕಾರಿ ಬ್ಯಾಂಕ್‌ಗಳ ಜೊತೆಗೆ ರಾಷ್ಟ್ರೀಕೃತ ಬ್ಯಾಂಕ್‌ಗಳು ಗ್ರಾಹಕರ ಸೇವೆಗೆ ಬದ್ಧವಾಗಿ ಮುನ್ನಡೆಯುತ್ತಿವೆ. ಬ್ಯಾಂಕ್ ಕರ್ನಾಟಕದಲ್ಲಿ ಅತ್ಯಂತ ಲಾಭದಾಯಕವಾಗಿ ಮುನ್ನಡೆಯುತ್ತಿದ್ದು, ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ ಎಂದು ಅವರು ಮಾಹಿತಿ ನೀಡಿದರು.
ಹುಬ್ಬಳ್ಳಿ ಸರ್ಕಲ್ ಮುಖ್ಯಸ್ಥ ಸೂರ್ಯಮನಿ ಶಾಹು ಮಾತನಾಡಿ, ಹುಬ್ಬಳ್ಳಿ ಸರ್ಕಲ್ ವ್ಯಾಪ್ತಿಯಲ್ಲಿ ಒಟ್ಟು 25 ಹೊಸ ಶಾಖೆಗಳನ್ನು ಆರಂಭಿಸಲಾಗುತ್ತಿದೆ. ಶೀಘ್ರದಲ್ಲೇ ಇಳಕಲ್ ಮತ್ತು ಜಮಖಂಡಿಯಲ್ಲಿ ಹೊಸ ಶಾಖೆಗಳನ್ನು ಸ್ಥಾಪಿಸಲಾಗುವುದು ಎಂದು ಭರವಸೆ ನೀಡಿದರು.
ಶಾಖಾ ವ್ಯವಸ್ಥಾಪಕ ನಾರಾಯಣ ಚವಾಣ್, ನ್ಯಾಯವಾದಿ ಕೆ.ಎನ್. ಪಾಟೀಲ, ಮಹಾಂತೇಶ ಮಾಯನ್ನವರ, ಪ್ರಿಯಾ ಸಜ್ಜನ, ರೋಹಿತ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.